ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳ್ಳಿಗದೆ, ಕಿರೀಟ ನೀಡಿದ ಪ್ರಕರಣ-ಉಡುಪಿ ಡಿಸಿ ಸೇರಿ 9 ಮಂದಿ ವಿರುದ್ಧ ಎಫ್‌ಐಆರ್

By ಕೋಲಾರ ಪ್ರತಿನಿಧಿ
|
Google Oneindia Kannada News

ಕೋಲಾರ, ಜೂನ್ 29: ಜಿಲ್ಲೆಯ ನಿರ್ಗಮಿತ ಜಿಲ್ಲಾ ಪಂಚಾಯಿತಿ ಸಿಇಒ, ಹಾಲಿ ಉಡುಪಿ ಡಿಸಿ ಜಗದೀಶ್ ಅವ‌ರಿಗೆ ಬೆಳ್ಳಿಗದೆ, ಕಿರೀಟ ಹಾಗೂ ಚಿನ್ನದ ಉಂಗುರ ನೀಡಿ ಬೀಳ್ಕೊಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಗದೀಶ್ ಸೇರಿದಂತೆ ತಾಲೂಕು ಪಂಚಾಯಿತಿ ಇಒ ಮತ್ತು ಒಂಬತ್ತು ಮಂದಿ ಗ್ರಾಮ ಪಂಚಾಯಿತಿ ಪಿಡಿಒಗಳ ಮೇಲೆ ಎಫ್‌ಐಆರ್ ದಾಖಲಾಗಿದೆ.

ಕೋಲಾರ ಜಿ.ಪಂ ಸಭಾಂಗಣದಲ್ಲಿ ಆಗಸ್ಟ್ 23, 2019ರಂದು ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋಲಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆ 1988ರ ಅನ್ವಯ ತನಿಖೆ ನಡೆಸಿ ವರದಿ ನೀಡುವಂತೆ ಕೋಲಾರ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಆದೇಶ ನೀಡಿದೆ. ಘಟನೆಗೆ ಸಂಬಂಧಪಟ್ಟಂತೆ ಕೋಲಾರದ ಎಸ್.ನಾರಾಯಣಸ್ವಾಮಿ ಭ್ರಷ್ಟಾಚಾರ ನಿಗ್ರಹ ದಳದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ ದಾಖಲೆಗಳ ಸಮೇತ ದೂರು ಸಲ್ಲಿಸಿದ್ದರು.

ಮರಳು ಲೂಟಿ ಸಂಬಂಧ ಉಡುಪಿ ಡಿಸಿ ಮೇಲೆ ದೂರು; ಡಿಸಿ ಪ್ರತಿಕ್ರಿಯೆಮರಳು ಲೂಟಿ ಸಂಬಂಧ ಉಡುಪಿ ಡಿಸಿ ಮೇಲೆ ದೂರು; ಡಿಸಿ ಪ್ರತಿಕ್ರಿಯೆ

ಅಕ್ರಮ ಸಂಭಾವನೆ ರೂಪದಲ್ಲಿ ನಿರ್ಗಮಿತ ಅಧಿಕಾರಿಗೆ ಬೀಳ್ಕೊಡುಗೆ ನೀಡಲಾಗಿದೆ ಎಂದು ಆರೋಪಿಸಿದ್ದರು. 17 ಜೂನ್ 2020ರಂದು ಈ ಕುರಿತು ತನಿಖೆ ನಡೆಸುವಂತೆ ಜಿಲ್ಲಾ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.

FIR Filed Against Udupi Dc Jagadish And 9 Pdos In Kolar

ಈ ಕುರಿತು ತನಿಖೆ ನಡೆಸಿ 25 ಆಗಸ್ಟ್ 2020 ರೊಳಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ನ್ಯಾಯಾಧೀಶರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಆದೇಶ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ 25 ಜೂನ್ 2020ರಂದು ನಿರ್ಗಮಿತ ಜಿಪಂ ಸಿಇಒ ಜಗದೀಶ್, ಪಿಡಿಒಗಳಾದ ಕೆ.ಮಹೇಶ್‌ಕುಮಾರ್, ಪಿ.ನಾರಾಯಣಪ್ಪ, ಎಂ.ರಾಮಕೃಷ್ಣ, ವಿ.ಶಂಕರ್, ಎನ್.ಸಂಪರಾಜ್, ಎಸ್.ಜಿ.ಹರೀಶ್ ಕುಮಾರ್, ಎಂ.ಸೋಮಶೇಖರ್, ಅಶ್ವತ್ಥ ನಾರಾಯಣ, ಎಂ.ಸುರೇಶ್‌ಕುಮಾರ್ ಹಾಗೂ ಶ್ರೀನಿವಾಸಪುರ ತಾಪಂ ಇಒ ಎಸ್.ಆನಂದ್ ವಿರುದ್ಧ ಎಸಿಬಿಯು ಐಪಿಸಿ ಕಲಂ 465, 467, 468, 471ರ ಅನ್ವಯ ಎಫ್‌ಐಆರ್ ದಾಖಲಿಸಿಕೊಂಡು ಡಿವೈಎಸ್ಪಿ ಎಂ.ಎಲ್.ಪುರುಷೋತ್ತಮ್ ಮತ್ತು ಪೊಲೀಸ್ ನಿರೀಕ್ಷಕ ಜಿ.ಎನ್.ವೆಂಕಟಾಚಲಪತಿ ತನಿಖೆ ಕೈಗೊಂಡಿದ್ದಾರೆ.

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ನಿರ್ಗಮಿತ ಜಿಲ್ಲಾಧಿಕಾರಿ ಜಿ.ಮಂಜುನಾಥ್ ಸೇರಿದಂತೆ ಒಟ್ಟು ಆರು ಮಂದಿ ಅಧಿಕಾರಿಗಳನ್ನು ಸಾಕ್ಷಿಗಳನ್ನಾಗಿ ಗುರುತಿಸಲಾಗಿದೆ. ಈ ಹಿಂದೆಯೂ ಕೆಲವರು ಈ ಕುರಿತು ಆರೋಪ ಮಾಡಿದ್ದಾಗ ಪಿಡಿಒ ಸಂಘದ ವತಿಯಿಂದ ಸುದ್ದಿಗೋಷ್ಠಿ ನಡೆಸಿ ನಿರ್ಗಮಿತ ಸಿಇಒಗೆ ಬಾಡಿಗೆ ಬೆಳ್ಳಿ ಗದೆ, ಕಿರೀಟ ತಂದು ಸನ್ಮಾನ ಮಾಡಿದ್ದಾಗಿ ವಿವರಣೆ ನೀಡಿದ್ದರು.ಇದೀಗ ಪ್ರಕರಣ ನ್ಯಾಯಾಲಯದ ಮೆಟ್ಟಿಲು ಹತ್ತಿರುವುದು ಕುತೂಹಲ ಕೆರಳಿಸಿದೆ.

English summary
The FIR has been lodged against Udupi DC Jagdish, Taluk Panchayat EO and nine gram panchayat PDOs in connection with giving costly items in send off party at kolar
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X