ಕೋಲಾರ ಶಾಸಕ ವರ್ತೂರು ಪ್ರಕಾಶ್ ವಿರುದ್ಧ ಎಫ್‌ಐಆರ್
ಕೋಲಾರ, ಜನವರಿ 30 : ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ವಿರುದ್ಧ ಭೂ ಹಗರಣದ ಆರೋಪ ಕೇಳಿಬಂದಿದ್ದು, ಎಫ್‌ಐಆರ್ ದಾಖಲಾಗಿದೆ.
ಚೆನ್ನಮ್ಮ ಎಂಬುವವರು ವರ್ತೂರು ಪ್ರಕಾಶ್ ಸೇರಿದಂತೆ 6 ಜನರ ವಿರುದ್ಧ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ದೂರು ದಾಖಲಿಸಿದ್ದರು. ದೂರಿನ ಅನ್ವಯ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ.
ಶಾಸಕ ವರ್ತೂರು ಪ್ರಕಾಶ್ ಸೇರಿದಂತೆ 6 ಜನರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದ್ದು, ವರ್ತೂರ್ ಪ್ರಕಾಶ್ ನಾಲ್ಕನೇ ಆರೋಪಿಯಾಗಿದ್ದಾರೆ.

ಏನಿದು ಪ್ರಕರಣ : ಕೋಲಾರ ತಾಲೂಕಿನ ಬೆಗ್ಲಿಹೊಸಹಳ್ಳಿ ಗ್ರಾಮದ ದಲಿತ ಮಹಿಳೆ ಚೆನ್ನಮ್ಮ ಶಾಸಕರ ವಿರುದ್ಧ ಭೂ ಹಗರಣದ ಆರೋಪ ಮಾಡಿದ್ದಾರೆ.
ಚೆನ್ನಮ್ಮಗೆ ಸೇರಿದ ಸರ್ವೆನಂ 21 ರಲ್ಲಿ 1 ಎಕರೆ 30 ಗುಂಟೆ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ವರ್ತೂರು ಪ್ರಕಾಶ್ ಅಣ್ಣನ ಮಗ ರಕ್ಷಿತ್ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂಬುದು ಆರೋಪವಾಗಿದೆ.
ಈ ಬಗ್ಗೆ ಕೇಳಿದಾಗ ಜೀವ ಬೆದರಿಕೆ ಹಾಕಲಾಗಿದೆ, ಜಾತಿ ನಿಂದನೆ ಮಾಡಲಾಗಿದೆ ಎಂದು ಚೆನ್ನಮ್ಮ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.
ದೂರಿನ ಅನ್ವಯ ಪೊಲೀಸರು ಐಪಿಸಿ ಸೆಕ್ಷನ್ 419, 420 ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ನಕಲಿ ದಾಖಲೆ ಸೃಷ್ಟಿ, ವಂಚನೆ ಮತ್ತಿತರ ಅರೋಪದಡಿ ಪ್ರಕರಣ ದಾಖಲು ಮಾಡಿದ್ದಾರೆ.












Click it and Unblock the Notifications