ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋಲಾರ ಶಾಸಕ ವರ್ತೂರು ಪ್ರಕಾಶ್ ವಿರುದ್ಧ ಎಫ್‌ಐಆರ್

By ಕೋಲಾರ ಪ್ರತಿನಿಧಿ
|
Google Oneindia Kannada News

ಕೋಲಾರ, ಜನವರಿ 30 : ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್‌ ವಿರುದ್ಧ ಭೂ ಹಗರಣದ ಆರೋಪ ಕೇಳಿಬಂದಿದ್ದು, ಎಫ್‌ಐಆರ್ ದಾಖಲಾಗಿದೆ.

ಚೆನ್ನಮ್ಮ ಎಂಬುವವರು ವರ್ತೂರು ಪ್ರಕಾಶ್ ಸೇರಿದಂತೆ 6 ಜನರ ವಿರುದ್ಧ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ದೂರು ದಾಖಲಿಸಿದ್ದರು. ದೂರಿನ ಅನ್ವಯ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ.

ಕೋಲಾರ ಅಸೆಂಬ್ಲಿ ಕದನ: ವರ್ತೂರು ಪ್ರಕಾಶ್ vs ಗೌರಮ್ಮಕೋಲಾರ ಅಸೆಂಬ್ಲಿ ಕದನ: ವರ್ತೂರು ಪ್ರಕಾಶ್ vs ಗೌರಮ್ಮ

ಶಾಸಕ ವರ್ತೂರು ಪ್ರಕಾಶ್ ಸೇರಿದಂತೆ 6 ಜನರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದ್ದು, ವರ್ತೂರ್ ಪ್ರಕಾಶ್ ನಾಲ್ಕನೇ ಆರೋಪಿಯಾಗಿದ್ದಾರೆ.

FIR registered against MLA Varthur Prakash

ಏನಿದು ಪ್ರಕರಣ : ಕೋಲಾರ ತಾಲೂಕಿನ ಬೆಗ್ಲಿಹೊಸಹಳ್ಳಿ ಗ್ರಾಮದ ದಲಿತ ಮಹಿಳೆ ಚೆನ್ನಮ್ಮ ಶಾಸಕರ ವಿರುದ್ಧ ಭೂ ಹಗರಣದ ಆರೋಪ ಮಾಡಿದ್ದಾರೆ.

ಹೊಸ ಪಕ್ಷ ಸ್ಥಾಪನೆಗೆ ಮುಂದಾದ ವರ್ತೂರು ಪ್ರಕಾಶ್ಹೊಸ ಪಕ್ಷ ಸ್ಥಾಪನೆಗೆ ಮುಂದಾದ ವರ್ತೂರು ಪ್ರಕಾಶ್

ಚೆನ್ನಮ್ಮಗೆ ಸೇರಿದ ಸರ್ವೆನಂ 21 ರಲ್ಲಿ 1 ಎಕರೆ 30 ಗುಂಟೆ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ವರ್ತೂರು ಪ್ರಕಾಶ್ ಅಣ್ಣನ ಮಗ ರಕ್ಷಿತ್ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂಬುದು ಆರೋಪವಾಗಿದೆ.

ಈ ಬಗ್ಗೆ ಕೇಳಿದಾಗ ಜೀವ ಬೆದರಿಕೆ ಹಾಕಲಾಗಿದೆ, ಜಾತಿ ನಿಂದನೆ ಮಾಡಲಾಗಿದೆ ಎಂದು ಚೆನ್ನಮ್ಮ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಅನ್ವಯ ಪೊಲೀಸರು ಐಪಿಸಿ ಸೆಕ್ಷನ್ 419, 420 ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ನಕಲಿ ದಾಖಲೆ ಸೃಷ್ಟಿ, ವಂಚನೆ ಮತ್ತಿತರ ಅರೋಪದಡಿ ಪ್ರಕರಣ ದಾಖಲು ಮಾಡಿದ್ದಾರೆ.

English summary
Kolar rural police registered FIR against Kolar MLA Varthur Prakash (Independent) and 5 others in connection with the illegal land acquisition case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X