ಕೋಲಾರದ ಬನಶಂಕರಿ ತೈಲ ಕಾರ್ಖಾನೆಯಲ್ಲಿ ಅಗ್ನಿ ಅವಘಡ
ಕೋಲಾರ, ಮಾರ್ಚ್ 29: ಕೋಲಾರ ಜಿಲ್ಲೆಯ ಮಾಲೂರಿನಲ್ಲಿರುವ ಬನಶಂಕರಿ ತೈಲ ಕಾರ್ಖಾನೆಯಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದೆ.
ಕೋಲಾರ ಜಿಲ್ಲೆಯ ಮಾಲೂರಿನಲ್ಲಿರುವ ಬನಶಂಕರಿ ತೈಲ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿರಬಹುದು ಎಂದು ಅಂದಾಜಿಸಲಾಗುತ್ತಿದೆ. ಲಕ್ಷಾಂತರ ಬೆಲೆ ಬಾಳುವ ವಸ್ತುಗಳು ಸುಟ್ಟು ಬೂದಿಯಾಗಿವೆ. ಸಾವು ಸಂಭವಿಸಿರುವ ಕುರಿತು ಇದುವರೆಗೂ ವರದಿಯಾಗಿಲ್ಲ. ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಅಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಇತ್ತೀಚೆಗೆ ಅಗ್ನಿ ಅವಘಡ ಸಂಖ್ಯೆ ಹೆಚ್ಚಾಗುತ್ತಿದೆ. ತೈಲ ಫ್ಯಾಕ್ಟರಿಯಾಗಿರುವುದರಿಂದ ಸಾಕಷ್ಟು ಮುನ್ನಚ್ಚರಿಕೆ ಕ್ರಮವನ್ನು ಕೈಗೊಳ್ಳಬೇಕಿತ್ತು.












Click it and Unblock the Notifications