ತೋಟಕ್ಕೆ ಬೆಂಕಿ; ಬೆಳೆದು ನಿಂತಿದ್ದ 5 ಎಕರೆ ಬಾಳೆ ಸುಟ್ಟು ಬೂದಿ
ಕೋಲಾರ, ಮಾರ್ಚ್ 18; ಕಟಾವಿಗೆ ಬಂದಿದ್ದ ಬಾಳೆ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಕೋಲಾರದಲ್ಲಿ ನಡೆದಿದೆ. ಸುಮಾರು 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಬೆಳೆ ಸುಟ್ಟು ಭಸ್ಮವಾಗಿದೆ.
ಸುಟ್ಟು ಕರಕಲಾಗಿರುವ ಬಾಳೆ ತೋಟ, ತೋಟವನ್ನು ಆತಂಕದಿಂದ ಕಣ್ಣೀರಿಡುತ್ತಾ ನೋಡುತ್ತಿರುವ ರೈತ, ಮತ್ತೊಂದೆಡೆ ಬೆಂಕಿಯ ಕೆನ್ನಾಲಿಗೆಗೆ ಕಪ್ಪಗಾಗಿರುವ ಬಾಳೆ ಗಿಡ ಹಾಗೂ ಬಾಳೆ ಕಾಯಿಗಳು ಈ ದೃಶ್ಯ ಕಂಡು ಬಂದಿದ್ದು ಕೋಲಾರ ತಾಲೂಕಿನ ಕಾಕಿನತ್ತ ಗ್ರಾಮದ ರೈತ ಕೃಷ್ಣಪ್ಪ ತೋಟದಲ್ಲಿ.
ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸುಮಾರು 5 ಎಕರೆ ಪ್ರದೇಶದಲ್ಲಿ ಫಸಲಿಗೆ ಬಂದು ನಿಂತಿದ್ದ ಬಾಳೆ ಸಂಪೂರ್ಣವಾಗಿ ಭಸ್ಮವಾಗಿದೆ. ಕಳೆದ ರಾತ್ರಿ ಯಾರೋ ಕಿಡಿಗೇಡಿಗಳು ಪಕ್ಕದ ಜಮೀನಿನಲ್ಲಿ ಬೆಳೆದು ನಿಂತಿದ್ದ ಒಣ ಹುಲ್ಲಿಗೆ ಬೆಂಕಿ ಹೊತ್ತಿಸಿರುವ ಅನುಮಾನವಿದ್ದು, ಈ ಬೆಂಕಿ ಬಾಳೆ ತೋಟಕ್ಕೂ ಹಬ್ಬಿದೆ.

ಸಾಲ ಸೋಲ ಮಾಡಿ ಬೆಳೆದಿದ್ದ ಬಾಳೆ ಬೆಳೆ ಇನ್ನೇನು ಮಾರಾಟ ಮಾಡಬೇಕಿತ್ತು. ಫಸಲು ಕೈಗೆ ಬಂದು ತಮ್ಮ ಕಷ್ಟಗಳೆಲ್ಲಾ ನಿವಾರಣೆಯಾಗುತ್ತೆ ಎಂದುಕೊಂಡಿದ್ದ ರೈತನ ಬಾಳೆ ತೋಟ ಬೆಂಕಿಗಾಹುತಿಯಾಗಿದೆ. ಇದು ರೈತನನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ.
ಜಿಲ್ಲೆಯಲ್ಲಿ ರೈತರು ಮಳೆಯಿಲ್ಲದೆ ಕಂಗಾಲಾಗಿದ್ದಾರೆ. ಈ ಮಧ್ಯೆ ಸಾಲ ಸೋಲ ಮಾಡಿ ನೀರಿಲ್ಲದ ಸಮಯದಲ್ಲೂ ಸಿಕ್ಕ ಅಲ್ಪಸ್ವಲ್ಪ ಪ್ರಮಾಣದ ನೀರಿನಲ್ಲಿ ಬೆಳೆ ಬೆಳೆದಿದ್ದರು. ಇಷ್ಟೆಲ್ಲಾ ಸಂಕಷ್ಟದ ಮಧ್ಯೆ ಬೆಳೆ ಬೆಳೆದ ಲಾಭದ ನಿರೀಕ್ಷೆಯಲ್ಲಿದ್ದ ರೈತನ ಪರಿಸ್ಥಿತಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

ಬಾಳೆ ತೋಟ ಮಾತ್ರವಲ್ಲದೆ ತೋಟದಲ್ಲಿ ಅಳವಡಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಿಪ್ ಹಾಗೂ ಸ್ಪಿಂಕ್ಲರ್ ಸಹ ಬೆಂಕಿಗಾಹುತಿಯಾಗಿವೆ. ವಿಷಯ ತಿಳಿದ ಸ್ಥಳೀಯರು ಕೃಷ್ಣಪ್ಪ ಜೊತೆಗೆ ಬೆಂಕಿ ನಂದಿಸುವ ಕಾರ್ಯ ಮಾಡಿದರೂ ಸುಮಾರು 90 ಟನ್‌ನಷ್ಟು ಇಳುವರಿ ನಷ್ಟವಾಗಿದೆ.
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬೆಳೆ ನಷ್ಟ ಕುರಿತು ಪ್ರಕರಣ ದಾಖಲಾಗಿದೆ. ವಿಷಯ ತಿಳಿದ ತೋಟಗಾರಿಕೆ ಇಲಾಖೆ ಅಧಿಕಾರಿಗಳ ತಂಡ ಬಾಳೆ ತೋಟಕ್ಕೆ ಭೇಟಿ ನೀಡಿದೆ. ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
-
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post












Click it and Unblock the Notifications