Kolar: ಕಾಂಗ್ರೆಸ್ ಶಾಸಕಿ ಫೋಟೋ ಇರುವ 50 ಲಕ್ಷ ಮೌಲ್ಯದ ಆಹಾರ ಕಿಟ್‌ ವಶ!

ಕೋಲಾರದಲ್ಲಿ ಕಾಂಗ್ರೆಸ್ ಶಾಸಕಿ ಫೋಟೋ ಇರುವ 50 ಲಕ್ಷ ಮೌಲ್ಯದ ಆಹಾರ ಕಿಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೋಲಾರದ ಗೋಡೌನ್‌ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿತರಿಸಲು ಸಿದ್ಧಪಡಿಸಲಾಗಿದ್ದ 50 ಲಕ್ಷ ಮೌಲ್ಯದ ಆಹಾರ ಕಿಟ್‌ಗಳನ್ನು ದಾಳಿ ವೇಳೆ ವಶಪಡಿಸಿಕೊಳ್ಳಲಾಗಿದೆ. ಕಿಟ್‌ಗಳ ಮೇಲೆ ಕಾಂಗ್ರೆಸ್ ಶಾಸಕಿ ರೂಪಕಲಾ ಶಶಿಧರ್ ಅವರ ಚಿತ್ರಗಳು ಕಂಡು ಬಂದಿದ್ದು ಪ್ರಕರಣ ದಾಖಲಿಸಲಾಗಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸರು ಗುರುವಾರ ರಾತ್ರಿ ತಾಲ್ಲೂಕಿನ ಬ್ಯಾಲಹಳ್ಳಿ ಗ್ರಾಮದ ತೋಟದ ಮನೆ ಮೇಲೆ ದಾಳಿ ನಡೆಸಿದ್ದು , ಕೆಜಿಎಫ್ ಶಾಸಕಿ ರೂಪಕಲಾ ಎಂ.ಶಶಿಧರ್ ಅವರ ಭಾವಚಿತ್ರ ಗಳಿದ್ದ ಸಾವಿರಾರು ಕೆ.ಜಿ ಅಕ್ಕಿ , ಬೇಳೆ, ಬೆಲ್ಲ , ಮೈದಾ ತುಂಬಿದ್ದ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ.

Food kit worth 50 lakhs with photo of Congress MLA seized in Kolar!

ಗ್ರಾಮದ ಶ್ರೀನಾಥ್ ಎಂಬುವರಿಗೆ ಸೇರಿದ ತೋಟದ ಮನೆ ಇದಾಗಿದ್ದು , ಪ್ರತಿ ಚೀಲದಲ್ಲಿ 4 ಕೆ.ಜಿ ಅಕ್ಕಿ , 1 ಕೆ.ಜಿ ಬೆಲ್ಲ , 900 ಗ್ರಾಂ ತೊಗರಿಬೇಳೆ, 900 ಗ್ರಾಂ ಕಡಲೆಬೇಳೆ, 1 ಕೆ.ಜಿ ಮೈದಾ ಹಿಟ್ಟು ತುಂಬಿಡಲಾಗಿತ್ತು. ಇಂಥ 3,066 ಚೀಲಗಳನ್ನು ವಶಕ್ಕೆ ಪಡೆಯಲಾಗಿದೆ. ಇದಲ್ಲದೆ 212 ಕ್ವಿಂ ಟಲ್ ತೊಗರಿಬೇಳೆ, 95.60 ಕ್ವಿಂ ಟಲ್ ಬೆಲ್ಲ , 151 ಕ್ವಿಂ ಟಲ್ ಮೈದಾ, 252 ಕ್ವಿಂ ಟಲ್ ಅಕ್ಕಿ ಚೀಲಗಳನ್ನು ಮನೆ, ಶೆಡ್ ಹಾಗೂ ಅಂಗಳದಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿತ್ತು.

ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬ್ಯಾಲಹಳ್ಳಿ ಗ್ರಾಮದ ಶ್ರೀನಾಥ್, ಕೆಜಿಎಫ್ ಶಾಸಕಿ ರೂಪಕಲಾ ಎಂ.ಶಶಿಧರ್ ಹಾಗೂ ದಾಸ್ತಾನು ಇರಿಸಿದ್ದ ಮಾಲೀಕರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಲಾಗಿದೆ.

'ಕೋಲಾರ ಜಿಲ್ಲಾಧಿಕಾರಿಗೆ ಬಂದ ಖಚಿತಮಾಹಿತಿ ಆಧರಿಸಿ ರಾತ್ರಿ 8.30ಕ್ಕೆ ದಾಳಿ ನಡೆಸಿದ್ದು, ಈ ಎಲ್ಲಾ ವಸ್ತುಗಳು ತೋಟದ ಮನೆಯಲ್ಲಿ ಸಿಕ್ಕಿವೆ. ಪ್ರಕರಣ ದಾಖಲಿಸಿದ್ದು, ತನಿಖೆ ವೇಳೆ ಸಂಬಂಧಪಟ್ಟವರು ದಾಖಲೆ ತೋರಿಸಬೇಕಾಗುತ್ತದೆ' ಎಂದು ಜಿಲ್ಲೆಯ ಆಹಾರ ಇಲಾಖೆ ಉಪನಿರ್ದೇಶಕಿ ಶ್ರುತಿ ತಿಳಿಸಿದರು.

Food kit worth 50 lakhs with photo of Congress MLA seized in Kolar!

ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣಮಾರ್ಗದರ್ಶನದಲ್ಲಿ ಕೋಲಾರ ತಾಲ್ಲೂಕು ಗ್ರಾಮಾಂತರ ಪ್ರ ದೇಶದ ಆಹಾರ ನಿರೀಕ್ಷಕ ಗೋವಿಂದಪ್ಪ, ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಎಂ.ಜೆ.ಲೋಕೇಶ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.

Food kit worth 50 lakhs with photo of Congress MLA seized in Kolar!

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಗಮನವೆಲ್ಲಾ ಕೋಲಾರ ವಿಧಾನಸಭಾ ಕ್ಷೇತ್ರದ ಮೇಲಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಜನವರಿ 9 ರಂದು ಇಲ್ಲಿಂದ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಿಸಿದ ನಂತರ ಎಲ್ಲಾ ರಾಜಕೀಯ ಪಕ್ಷಗಳ ಕಣ್ಣು ಇತ್ತಲೇ ಇದ್ದು, ನಾಮುಂದು, ತಾಮುಂದು ಎಂದು ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಬಾರಿ ಅಷ್ಟರ ಮಟ್ಟಿಗೆ ಹವಾ ಇಟ್ಟಿದೆ ಕೋಲಾರ ಕ್ಷೇತ್ರ. ಆದರೆ ಈ ಘಟನೆ ಮುಂಬರುವ ಚುನಾವಣೆಯ ಮೇಲೆ ಪರಿಣಾಮ ಬೀಳುವ ಸಾಧ್ಯತೆಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+