ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ವಿಧಿವಶ: ಎಚ್.ಡಿ ಕುಮಾರಸ್ವಾಮಿ ಸಂತಾಪ
ಚಿಕ್ಕಬಳ್ಳಾಪುರ ಏಪ್ರಿಲ್ 15: ಕೋಲಾರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ವಿಧಿವಶರಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಮನೆಯಲ್ಲಿ ಬೆಳಗ್ಗೆ 6.45ಕ್ಕೆ ಹೃದಯಾಘಾತದಿಂದ ಕುಸಿದು ಬಿದ್ದು ಜಿ.ವಿಶ್ರೀರಾಮರೆಡ್ಡಿ ನಿಧನರಾಗಿದ್ದಾರೆ. ತಕ್ಷಣವೇ ಬಾಗೇಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶ್ರೀರಾಮರೆಡ್ಡಿ ನಿಧನರಾಗಿರುವ ಬಗ್ಗೆ ಬೆಳಗ್ಗೆ 7.28ಕ್ಕೆ ವೈದ್ಯರು ಮಾಹಿತಿ ನೀಡಿದ್ದಾರೆ.
ಸಿಪಿಐಎಂ ಪಕ್ಷದಿಂದ ಎರಡು ಭಾರಿ ಶಾಸಕರಾಗಿದ್ದ ಶ್ರೀರಾಮರೆಡ್ಡಿ ಪ್ರಗತಿಪರ ಶಾಸಕರೆಂದೇ ಖ್ಯಾತಿಯಾಗಿದ್ದರು. ಇತ್ತೀಚೆಗೆ ಸಿಪಿಐಎಂ ಪಕ್ಷ ತೊರೆದು ತಮ್ಮದೇ ಪ್ರಜಾ ಸಂಘರ್ಷ ಸಮಿತಿ ಸ್ಥಾಪನೆ ಮಾಡಿದ್ದರು. ಸಾಮಾಜಿಕ ಹೋರಾಟ ಆರಂಭಿಸಿದ್ದರು. ಸಮಾಜದ ಸುಧಾರಣೆಗಾಗಿ ತಮ್ಮನ್ನು ತಾವೇ ಅರ್ಪಿಸಿಕೊಂಡಿದ್ದರು. ಜಿ.ವಿ.ಎಸ್ ನಿಧನದಿಂದ ಅಪಾರ ಬೆಂಬಲಿಗರಲ್ಲಿ ದುಃಖ ಮಡುಗಟ್ಟಿದೆ. ಆಸ್ಪತ್ರೆ ಬಳಿ ಬೆಂಬಲಿಗರು ಜಮಾಹಿಸುತ್ತಿದ್ದಾರೆ. ಜಿ.ವಿ.ಶ್ರೀರಾಮರೆಡ್ಡಿ ಅವರ ಅಗಲಿಕೆಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಪ್ರಗತಿಪರ ಚಿಂತಕರು, ಕೃಷಿ-ಕಾರ್ಮಿಕರ ಪರ ಹೋರಾಟಗಾರರು ಹಾಗೂ ಮಾಜಿ ಶಾಸಕರಾದ ಕಾಮ್ರೇಡ್ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನದ ಸುದ್ದಿ ನನಗೆ ತೀವ್ರ ದುಃಖ ಉಂಟು ಮಾಡಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸಿಪಿಎಂ (ಐ) ಪಕ್ಷದಿಂದ ಎರಡು ಬಾರಿ ಬಾಗೇಪಲ್ಲಿ ಕ್ಷೇತ್ರದಿಂದ ಆಯ್ಕೆ ಆಗಿದ್ದ ಅವರು, ಮಾದರಿ ಜನಪ್ರತಿನಿಧಿಯಷ್ಟೇ ಅಲ್ಲ, ಅತ್ಯುತ್ತಮ ಸಂಸದೀಯ ಪಟುವೂ ಹೌದು. ಶ್ರೀರಾಮರೆಡ್ಡಿ ಅವರ ಅಗಲಿಕೆಯಿಂದ ರಾಜ್ಯದಲ್ಲಿ ನಡೆಯುತ್ತಿರುವ ವೈಚಾರಿಕಪರ ಹೋರಾಟದಲ್ಲಿ ದೊಡ್ಡ ಶೂನ್ಯವನ್ನೇ ಸೃಷ್ಟಿಸಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿ ಅವರ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಶ್ರೀರಾಮರೆಡ್ಡಿ ಅವರ ಅಗಲಿಕೆಯಿಂದ ರಾಜ್ಯದಲ್ಲಿ ನಡೆಯುತ್ತಿರುವ ವೈಚಾರಿಕಪರ ಹೋರಾಟದಲ್ಲಿ ದೊಡ್ಡ ಶೂನ್ಯವನ್ನೇ ಸೃಷ್ಟಿಸಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿ ಅವರ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. 2/2
— H D Kumaraswamy (@hd_kumaraswamy) April 15, 2022
ಜೊತೆಗೆ ಜಿ.ವಿ.ಶ್ರೀರಾಮರೆಡ್ಡಿ ಅಗಲಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. 2018ರ ಚುನಾವಣೆಯಲ್ಲಿ 51,697 ಮತಗಳನ್ನು ಪಡೆದು ಅವರು ಸೋಲು ಕಂಡಿದ್ದರು. ತಮ್ಮ ಜನಪರ ನಿಲುವುಗಳಿಂದ ಪ್ರಸಿದ್ಧಿ ಪಡೆದಿದ್ದ ಜಿ. ವಿ. ಶ್ರೀರಾಮ ರೆಡ್ಡಿ ಸಿಪಿಐ(ಎಂ) ಪಕ್ಷವನ್ನು ಕಟ್ಟಿ ಬೆಳೆಸಿದ್ದರು. ಸರ್ಕಾರದ ಜನ ವಿರೋಧಿ ನೀತಿಯನ್ನು ಕಟುವಾಗಿ ಟೀಕಿಸುತ್ತಿದ್ದರು.

ಬಾಗೇಪಲ್ಲಿ ಸಿಪಿಐ(ಎಂ) ಪಕ್ಷವನ್ನು ಸಂಘಟನೆ ಮಾಡಿ 1999, 2004ರಲ್ಲಿ ಬಾಗೇಪಲ್ಲಿಯಿಂದ ಸಿಪಿಐ(ಎಂ) ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿದ್ದರು. 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಸ್. ಎನ್. ಸುಬ್ಬಾರೆಡ್ಡಿ ವಿರುದ್ಧ ಕಣಕ್ಕಿಳಿದ್ದರು. 51,697 ಮತಗಳನ್ನು ಪಡೆದು ಸೋಲು ಕಂಡಿದ್ದರು. 2018ರಲ್ಲಿ ಪಕ್ಷದ ತತ್ವ ಮತ್ತು ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡರು ಎಂಬ ಕಾರಣಕ್ಕೆ ಸಿಪಿಐ(ಎಂ) ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಹುದ್ದೆಗಳಿಂದ ತೆಗೆದುಹಾಕಲಾಗಿತ್ತು. ಬಳಿಕವೂ ಅವರು ಜನರನ್ನು ಸೇರಿಸಿ ಹಲವು ಹೋರಾಟ ಮಾಡಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications