• search
 • Live TV
ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳದಿದ್ದಕ್ಕೆ ಮಾಜಿ ಸಚಿವ ವರ್ತೂರು ಪ್ರಕಾಶ್ ಗರಂ

By ಕೋಲಾರ ಪ್ರತಿನಿಧಿ
|

ಕೋಲಾರ , ಫೆಬ್ರವರಿ 23: ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳದಿದ್ದಕ್ಕೆ ಮಾಜಿ ಸಚಿವ ವರ್ತೂರು ಪ್ರಕಾಶ್ ಅವರು ಗರಂ ಆಗಿದ್ದು, ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ವಿರುದ್ಧ ಏಕವಚನದಲ್ಲಿ ಗುಟುರು ಹಾಕಿದರು.

ಕೋಲಾರದ ವೇದಿಕೆ ಭಾಷಣದಲ್ಲಿ ಮಾತನಾಡಿದ ಕೋಲಾರ ಮಾಜಿ ಶಾಸಕ, ಸಾಬ್ರು ಕುರಿ ಕೊಯ್ಯುವಾಗ ಬಾಯಲ್ಲಿ ನೀರು ಹಾಕ್ತಾರೆ. ಆದರೆ ಕೆ.ಎಚ್ ಮುನಿಯಪ್ಪ ನೀರು ಹಾಕದೆ ಕತ್ತು ಕೊಯ್ಯುತ್ತಾನೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ವರ್ತೂರು ಪ್ರಕಾಶ್ ಕಾಂಗ್ರೆಸ್‌ಗೆ; ಮುನಿಯಪ್ಪ ಹೇಳಿದ್ದೇನು?

ಮಾಜಿ ಸಚಿವ ಕೆ.ಎಚ್ ಮುನಿಯಪ್ಪನಿಗೆ ಬುದ್ಧಿ ಭ್ರಮಣೆ ಆಗಿದೆ. ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರನ್ನು ರತ್ನ ಕಂಬಳಿ ಹಾಕಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ. ನನಗೂ ಆ ಸಂದರ್ಭ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನು ಬಿಜೆಪಿ ಅಥವಾ ಜೆಡಿಎಸ್ ಪಕ್ಷಕ್ಕೆ ಹೋಗಲ್ಲ. ನಾನೇನು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆ ಅಂತ ಮುನಿಯಪ್ಪನ ಮನೆಗೆ ಹೋಗಿಲ್ಲ. ಕಾಂಗ್ರೆಸ್ ಸೇರುವ ಅವಶ್ಯಕತೆಯೂ ನನಗಿಲ್ಲ ಎಂದೂ ಹೇಳಿದರು.

   ಗುಜರಾತ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು-ಕೇಂದ್ರ ಗೃಹಸಚಿವ ಅಮಿತ್ ಶಾ ಸಂತಸ | Oneindia Kannada

   ನಂತರ ನಾನು ಪಕ್ಷೇತರನಾಗಿ ನಿಂತು ಶಾಸಕನಾದರೆ ಹೋಗೋದು ಕಾಂಗ್ರೆಸ್ ಪಕ್ಷಕ್ಕೆ. ಕಾಂಗ್ರೆಸ್ ಸೇರಲು ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಅಡ್ಡ ಹಾಕುತ್ತಿಲ್ಲ. ಆದರೆ ನನಗೆ ಅಡ್ಡಲಾಗಿ ನಿಂತಿರೋದು ಕೆ.ಎಚ್ ಮುನಿಯಪ್ಪ. ಹೊಸ ಗಿರಾಕಿ ಬರೋದಿಲ್ಲ, ವ್ಯಾಪಾರ ನಿಂತೋಗುತ್ತದೆ ಅಂತ ಕಾಂಗ್ರೆಸ್ ಗೆ ಸೇರಿಸುತ್ತಿಲ್ಲ ಎಂದು ಮಾಜಿ ಸಂಸದನ ವಿರುದ್ಧ ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡಿಕಾರಿದರು.

   English summary
   Former Minister Varthur Prakash has expressed outrage against former MP KH Muniyappa, for not joining him to congress party. Know More..
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X