ಬಾಗೇಪಲ್ಲಿಯ ಮಾಜಿ ಶಾಸಕ ಜಿ. ವಿ. ಶ್ರೀರಾಮ ರೆಡ್ಡಿ ನಿಧನ
ಕೋಲಾರ, ಏಪ್ರಿಲ್ 15; ಕೋಲಾರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜಿ. ವಿ. ಶ್ರೀರಾಮ ರೆಡ್ಡಿ ನಿಧನ ಹೊಂದಿದ್ದಾರೆ. 2018ರ ಚುನಾವಣೆಯಲ್ಲಿ 51,697 ಮತಗಳನ್ನು ಪಡೆದು ಅವರು ಸೋಲು ಕಂಡಿದ್ದರು.
ಶುಕ್ರವಾರ ಬೆಳಗ್ಗೆ 7.30ಕ್ಕೆ ಹೃದಯಾಘಾತದಿಂದ ಜಿ. ವಿ. ಶ್ರೀರಾಮ ರೆಡ್ಡಿ ನಿಧನ ಹೊಂದಿದ್ದಾರೆ. ಎರಡು ಬಾರಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಅವರು ಆಯ್ಕೆಯಾಗಿದ್ದರು.

ತಮ್ಮ ಜನಪರ ನಿಲುವುಗಳಿಂದ ಪ್ರಸಿದ್ಧಿ ಪಡೆದಿದ್ದ ಜಿ. ವಿ. ಶ್ರೀರಾಮ ರೆಡ್ಡಿ ಸಿಪಿಐ(ಎಂ) ಪಕ್ಷವನ್ನು ಕಟ್ಟಿ ಬೆಳೆಸಿದ್ದರು. ಸರ್ಕಾರದ ಜನ ವಿರೋಧಿ ನೀತಿಯನ್ನು ಕಟುವಾಗಿ ಟೀಕಿಸುತ್ತಿದ್ದರು.
ಡಾ. ಕೆ. ಸುಧಾಕರ್ ಸಂತಾಪ; ಮಾಜಿ ಶಾಸಕ ಜಿ. ವಿ. ಶ್ರೀರಾಮ ರೆಡ್ಡಿ ನಿಧನಕ್ಕೆ ಚಿಕ್ಕಬಳ್ಳಾಪುರದ ಶಾಸಕ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸಂತಾಪ ಸೂಚಿಸಿದ್ದಾರೆ. 'ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಭಗವಂತ ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಅವರ ಕುಟುಂಬ ಸದಸ್ಯರು ಹಾಗೂ ಬಂಧು-ಬಳಗಕ್ಕೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ, ಓಂ ಶಾಂತಿ' ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.
ಎರಡು ಬಾರಿ ಶಾಸಕರು; ಬಾಗೇಪಲ್ಲಿ ಸಿಪಿಐ(ಎಂ) ಪಕ್ಷವನ್ನು ಸಂಘಟನೆ ಮಾಡಿ 1999, 2004ರಲ್ಲಿ ಬಾಗೇಪಲ್ಲಿಯಿಂದ ಸಿಪಿಐ(ಎಂ) ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿದ್ದರು. 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಸ್. ಎನ್. ಸುಬ್ಬಾರೆಡ್ಡಿ ವಿರುದ್ಧ ಕಣಕ್ಕಿಳಿದ್ದರು. 51,697 ಮತಗಳನ್ನು ಪಡೆದು ಸೋಲು ಕಂಡಿದ್ದರು.
2018ರಲ್ಲಿ ಪಕ್ಷದ ತತ್ವ ಮತ್ತು ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡರು ಎಂಬ ಕಾರಣಕ್ಕೆ ಸಿಪಿಐ(ಎಂ) ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಹುದ್ದೆಗಳಿಂದ ತೆಗೆದುಹಾಕಲಾಗಿತ್ತು. ಬಳಿಕವೂ ಅವರು ಜನರನ್ನು ಸೇರಿಸಿ ಹಲವು ಹೋರಾಟ ಮಾಡಿದ್ದರು.
ಸಿದ್ದರಾಮಯ್ಯ ಟ್ವೀಟ್
ಇತ್ತೀಚೆಗೆ ಜಾತ್ಯತೀತ ಶಕ್ತಿಗಳ ಸಂಘಟನೆಗೆ ಪ್ರಯತ್ನ ನಡೆಸುತ್ತಿದ್ದ
— Siddaramaiah (@siddaramaiah) April 15, 2022
ಜಿ.ವಿ.ಶ್ರೀರಾಮ ರೆಡ್ಡಿ ಸಾವಿನಿಂದ
ರಾಜ್ಯ ಒಬ್ಬ
ಧೀಮಂತ ಹೋರಾಟಗಾರನನ್ನು ಮತ್ತು
ವೈಯಕ್ತಿಕವಾಗಿ ನಾನು
ಬಹುಕಾಲದ ಗೆಳೆಯನನ್ನು ಕಳೆದುಕೊಂಡಿದ್ದೇನೆ.
ಅವರ ಕುಟುಂಬದ ಸದಸ್ಯರ ಮತ್ತು ಅನುಯಾಯಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.
2/2 pic.twitter.com/blhknHu6ud
Koo Appಪ್ರಗತಿಪರ ಚಿಂತಕರು, ಕೃಷಿ-ಕಾರ್ಮಿಕರ ಪರ ಹೋರಾಟಗಾರರು ಹಾಗೂ ಮಾಜಿ ಶಾಸಕರಾದ ಕಾಮ್ರೇಡ್ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನದ ಸುದ್ದಿ ನನಗೆ ತೀವ್ರ ದುಃಖ ಉಂಟು ಮಾಡಿದೆ. ಸಿಪಿಎಂ (ಐ) ಪಕ್ಷದಿಂದ ಎರಡು ಬಾರಿ ಬಾಗೇಪಲ್ಲಿ ಕ್ಷೇತ್ರದಿಂದ ಆಯ್ಕೆ ಆಗಿದ್ದ ಅವರು, ಮಾದರಿ ಜನಪ್ರತಿನಿಧಿಯಷ್ಟೇ ಅಲ್ಲ, ಅತ್ಯುತ್ತಮ ಸಂಸದೀಯ ಪಟುವೂ ಹೌದು.ಶ್ರೀರಾಮರೆಡ್ಡಿ ಅವರ ಅಗಲಿಕೆಯಿಂದ ರಾಜ್ಯದಲ್ಲಿ ನಡೆಯುತ್ತಿರುವ ವೈಚಾರಿಕಪರ ಹೋರಾಟದಲ್ಲಿ ದೊಡ್ಡ ಶೂನ್ಯವನ್ನೇ ಸೃಷ್ಟಿಸಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. - H D Kumaraswamy (@h_d_kumaraswamy) 15 Apr 2022












Click it and Unblock the Notifications