Breaking: ಕೋಲಾರದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಐವರ ಪೈಕಿ ನಾಲ್ವರು ಸಾವು

ಕೋಲಾರ, ನವೆಂಬರ್ 8: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಐವರ ಪೈಕಿ ನಾಲ್ವರು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ಸೋಮವಾರ ನಡೆದಿದೆ.

ಮಗು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಬಹುದು ಎಂದು ಹೆದರಿದ್ದ ಕಾರಂಜಿಕಟ್ಟೆ ಬಡಾವಣೆ ನಿವಾಸಿಗಳಾದ ಗಂಗೋತ್ರಿ (17), ಬಾಬು (45), ನಾರಾಯಣಮ್ಮ (60), ಮುನಿಯಪ್ಪ (65) ಮೃತಪಟ್ಟಿದ್ದಾರೆ. ಒಂದೇ ಕುಟುಂಬದ ಐವರು ಭಾನುವಾರ ಆತ್ಮಹತ್ಯೆಗೆ ಯತ್ನಿಸಿದ್ದರು.

Four People Of Same Family Killed Who Attempted Suicide In Kolar

ಮಗು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆದರಿ ಇವರೆಲ್ಲರೂ ವಿಷ ಸೇವಿಸಿದ್ದರು. ತೀವ್ರ ಅಸ್ವಸ್ಥಗೊಂಡಿರುವ ಪುಷ್ಪಾ ಎನ್ನುವವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಲ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+