ಮಾಲೂರಿನಲ್ಲಿ ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆ; ಇಬ್ಬರ ಸಾವು, ಒಬ್ಬರ ಸ್ಥಿತಿ ಗಂಭೀರ
ಕೋಲಾರ, ಜೂನ್ 19: ಅನಾರೋಗ್ಯದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ.
Recommended Video
ದಾಖಲೆ ಪ್ರಮಾಣದಲ್ಲಿ ಏರಿಕೆ ಆಯಿತು ಪೆಟ್ರೋಲ್, ಡೀಸೆಲ್ ಬೆಲೆ | Oneindia Kannada
ಕೋಲಾರ ಜಿಲ್ಲೆ ಮಾಲೂರು ಪಟ್ಟಣದ ಆರ್.ಪಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಆದಿಲಕ್ಷ್ಮಿ (85), ಪದ್ಮಮ್ಮ (48) ಹಾಗೂ ನಾಗರಾಜ್ (58) ಎಂಬುವರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರಲ್ಲಿ ಆದಿಲಕ್ಷ್ಮಿ, ಪದ್ಮಮ್ಮ ಅವರು ಮನೆಯಲ್ಲೇ ಸಾವನ್ನಪ್ಪಿದ್ದು, ನಾಗರಾಜ್ ಅವರ ಸ್ಥಿತಿ ಗಂಭೀರವಾಗಿದೆ.

ನಾಗರಾಜ್ ತಾಯಿ ಆದಿಲಕ್ಷ್ಮಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಪತ್ನಿ ಪದ್ಮಮ್ಮ ಅವರಿಗೂ ಬಿಪಿ, ಸಕ್ಕರೆ ಕಾಯಿಲೆ ಇತ್ತು. ನಗರದ ಪೆಟ್ರೋಲ್ ಬಂಕ್ ಒಂದರಲ್ಲಿ ನಾಗರಾಜ್ ಕೆಲಸ ಮಾಡುತ್ತಿದ್ದಾರೆ. ನಾಗರಾಜ್ ಅವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಲೂರು ಪೋಲಿಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications