ಕೋಲಾರದಲ್ಲಿ ಸರ್ಕಾರಿ ಬಸ್ ಗೆ ಕಲ್ಲು. ಹಲವರು ಪೊಲೀಸರ ವಶಕ್ಕೆ
ಕೋಲಾರ, ಜೂನ್ 12 : ಶಾಶ್ವತ ಕುಡಿಯುವ ನೀರು ಸೇರಿದಂತೆ ವಿವಿಧ ಬೇಡಿಕೆಗಳ ಈಡೆರಿಕೆಗೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ಗೆ ಕೋಲಾರ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಳಗ್ಗೆ 5 ಗಂಟೆಯಿಂದಲೆ ಹೋರಾಟಗಾರರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ವಿವಿಧ ಸಂಘಟನೆಗಳ ಮುಖಂಡರು ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಬಸ್ ಗಳ ಮೇಲೆ ಕಲ್ಲು ತೂರಾಟ ಮಾಡಿದ ಹಿನ್ನಲೆಯಲ್ಲಿ ಒಟ್ಟು 8 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ

ಬೆಳಗ್ಗಿನಿಂದಲೆ ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದು, ಅಟೋ, ಬಸ್ ಸಂಚಾರ ಸಂಪೂರ್ಣ ಸ್ಥಬ್ದವಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕಚಂದ್ರ ಅದೇಶ ಹೊರಡಿಸಿದ್ದಾರೆ.
ಮುನ್ನೆಚ್ಚರಿಜಾ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿದೆ.
ಈ ಮಧ್ಯೆ ತೆಲುಗು ಚಿತ್ರ ನಟ, ಎನ್‍ಟಿಆರ್ ಮೊಮ್ಮಗ ನಂದಮೂರಿ ತಾರಕ ರತ್ನ ಅವರಿಗೂ ಕರ್ನಾಟಕ ಬಂದ್ ಬಿಸಿ ತಟ್ಟಿತ್ತು. ಭಾನುವಾರದಂದು ಖಾಸಗಿ ಕಾರ್ಯಕ್ರಮದ ನಿಮಿತ್ತ ಕೋಲಾರಕ್ಕೆ ಆಗಮಿಸಿದ್ದರು. ಇಂದು ಬಂದ್ ವೇಳೆ ಕೋಲಾರದ ಶ್ರೀನಿವಾಸಪುರ ವೃತ್ತದಲ್ಲಿ ಅವರನ್ನ ತಡೆದು ಪ್ರತಿಭಟನೆ ನಡೆಸಿದರು.












Click it and Unblock the Notifications