19 ವರ್ಷಗಳ ಬಳಿಕ ಕೆಜಿಎಫ್ ಚಿನ್ನದ ಗಣಿ ಪ್ರಾರಂಭಕ್ಕೆ ಹಸಿರು ನಿಶಾನೆ
ಕೋಲಾರ, ಡಿಸೆಂಬರ್ 3: ಬರೋಬ್ಬರಿ 19 ವರ್ಷಗಳ ಬಳಿಕ ಕೋಲಾರ ಜಿಲ್ಲೆಯ ಕೆಜಿಎಫ್ ಚಿನ್ನದ ಗಣಿಯನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಕೆಜಿಎಫ್ ಚಿನ್ನದ ಗಣಿಯನ್ನು ಪುನಃ ಪ್ರಾರಂಭಿಸುವಂತೆ ಕೋಲಾರ ಸಂಸದ ಎಸ್.ಮುನಿಸ್ವಾಮಿ ಅವರ ಸತತ ಪ್ರಯತ್ನ ಹಾಗೂ ಒತ್ತಡದಿಂದಾಗಿ ಕೇಂದ್ರ ಸರ್ಕಾರ ಚಿನ್ನದ ಗಣಿ ಆರಂಭಕ್ಕೆ ಹಸಿರು ನಿಶಾನೆ ತೋರಿದೆ.
ಈ ಕುರಿತು ಕೋಲಾರ ಸಂಸದ ಎಸ್.ಮುನಿಸ್ವಾಮಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗಣಿ ಹಾಗೂ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಒತ್ತಾಯ ಮಾಡಿದ್ದರ ಫಲವಾಗಿ ಬಹುವರ್ಷಗಳಿಂದ ನಿಂತಿದ್ದ ಕೆಜಿಎಫ್ ಚಿನ್ನದ ಗಣಿ ಮತ್ತೆ ತೆರೆದುಕೊಳ್ಳಲಿದೆ.

ಗಣಿಯಲ್ಲಿ ಇನ್ನೂ ಉತ್ತಮವಾದ ಬಂಗಾರ ಸಿಗಲಿದೆ ಎಂದು ಸಂಸದ ಎಸ್.ಮುನಿಸ್ವಾಮಿ ಅವರು ಮನವಿ ಮಾಡಿದ್ದರಿಂದ ರೀ ಓಪನ್ ಗೆ ಅನುಮತಿ ನೀಡಲಾಗಿದೆ.
19 ವರ್ಷಗಳ ಹಿಂದೆ ಅಂದರೆ 2001ನೇ ಇಸವಿಯಲ್ಲಿ ಕೋಲಾರ ಜಿಲ್ಲೆಯ ಕೆಜಿಎಫ್ ಚಿನ್ನದ ಗಣಿಯನ್ನು ಬಂದ್ ಮಾಡಲಾಗಿತ್ತು. ಈಗ ಮತ್ತೆ ಚಿನ್ನ ಅಗೆಯಲು ಪ್ರಾರಂಭಿಸುವುದರಿಂದ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶಗಳು ಸಿಗುವ ಭರವಸೆ ನೀಡಲಾಗಿದೆ.












Click it and Unblock the Notifications