ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋಲಾರ: ಕಲ್ಲು ಗಣಿಗಾರಿಕೆಗಾಗಿ 9,500 ಗಿಡ-ಮರ ನಾಶ; ಲೋಕಾಯುಕ್ತ ತನಿಖೆಗೆ ಹೈಕೋರ್ಟ್‌ ಆದೇಶ

|
Google Oneindia Kannada News

ಕೋಲಾರ, ಸೆಪ್ಟೆಂಬರ್ 17: ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ತೇಕಲ್ ಗ್ರಾಮದ ಗುಂಡೇನಹಳ್ಳಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆ ನಡೆಸಲು ಅರಣ್ಯ ನಾಶ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ತನಿಖೆಗೆ ಆದೇಶಿಸಿ ಕರ್ನಾಟಕ ಹೈಕೋರ್ಟ್‌ ಗುರುವಾರ ಸೂಚಿಸಿದೆ.

ಕರ್ನಾಟಕ ಲೋಕಾಯುಕ್ತ ಕಾಯಿದೆಯ ಸೆಕ್ಷನ್ 9ರ ಅಡಿ ಸಂಬಂಧಪಟ್ಟವರ ವಿರುದ್ಧ ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ಆದೇಶಿಸಿದ್ದು, ಸೆಕ್ಷನ್ 12ರ ಅಡಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್ ನೇತೃತ್ವದ ವಿಭಾಗೀಯ ಪೀಠ ಆದೇಶ ಮಾಡಿದೆ.

ಕೆಆರ್‌ಎಸ್‌: ಕಲ್ಲು ಗಣಿಗಾರಿಕೆ ಪರವಾನಗಿ ರದ್ದುಗೊಳಿಸಿದ್ದ ಮಂಡ್ಯ ಡಿಸಿ ಆದೇಶ ವಜಾಗೊಳಿಸಿದ ಹೈಕೋರ್ಟ್ಕೆಆರ್‌ಎಸ್‌: ಕಲ್ಲು ಗಣಿಗಾರಿಕೆ ಪರವಾನಗಿ ರದ್ದುಗೊಳಿಸಿದ್ದ ಮಂಡ್ಯ ಡಿಸಿ ಆದೇಶ ವಜಾಗೊಳಿಸಿದ ಹೈಕೋರ್ಟ್

ಕಲ್ಲು ಗಣಿಗಾರಿಕೆ/ ಕ್ವಾರಿ ಚಟುವಟಿಕೆಯಿಂದಾಗಿ ಅರಣ್ಯ ಇಲಾಖೆಯು ಸರ್ಕಾರದ ಬೊಕ್ಕಸದಿಂದ ವೆಚ್ಚ ಮಾಡಿ ನೆಟ್ಟು ಬೆಳೆಸಿದ್ದ ಸುಮಾರು 9,500 ಗಿಡ-ಮರಗಳನ್ನು ನಾಶಪಡಿಸಲಾಗಿದೆ. ಈ ಅರಣ್ಯವನ್ನು ಅಭಿವೃದ್ಧಿಪಡಿಸಿ ಅರಣ್ಯ ಇಲಾಖೆಯು ಬನಹಳ್ಳಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿತ್ತು ಎಂದು ರವೀಂದ್ರ ಮತ್ತಿತರ ನಾಲ್ವರು ಅರ್ಜಿದಾರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಪೀಠ ನಡೆಸಿತು.

 Kolar: HC Ordered For Lokayukta Probe Into Destruction Of 9,500 Trees In Tekal Village

ಇಷ್ಟು ಮಾತ್ರವಲ್ಲದೇ ರಾಜ್ಯ ಸರ್ಕಾರವು ಕಾನೂನುಬಾಹಿರವಾಗಿ ಗಣಿಗಾರಿಕೆ/ ಕ್ವಾರಿ ನಡೆಸುತ್ತಿರುವವರಿಂದ 106 ಕೋಟಿ ರೂಪಾಯಿ ದಂಡ ವಸೂಲಿ ಮಾಡಲು ವಿಫಲವಾಗಿದೆ ಎಂದು ಅರ್ಜಿದಾರರ ಪರ ವಕೀಲ ದಳವಾಯಿ ವೆಂಕಟೇಶ್‌ ನ್ಯಾಯಾಲಯದ ಗಮನ ಸೆಳೆದರು.

ವಿಚಾರಣೆಯ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಪರ ವಕಾಲತ್ತು ವಹಿಸಿದ ವಕೀಲ ನಾರಾಯಣ ರೆಡ್ಡಿ, ಅರಣ್ಯೀಕರಿಸಿರುವುದು ಮತ್ತು ಅದನ್ನು ಒಪ್ಪಂದದ ಮೂಲಕ ಪಂಚಾಯಿತಿಗೆ ವರ್ಗಾಯಿಸಿರುವುದನ್ನು ನಿರಾಕರಿಸಿದರು. ಆದರೆ, 1999ರಲ್ಲಿ ಅರಣ್ಯ ಅಭಿವೃದ್ಧಿಪಡಿಸಿ ಪಂಚಾಯಿತಿಗೆ ವರ್ಗಾಯಿಸಲಾಗಿದೆ ಎಂಬುದನ್ನು ರಾಜ್ಯ ಸರ್ಕಾರವು ಒಪ್ಪಿಕೊಂಡಿದೆ. ಹಿಂದೆ ನ್ಯಾಯಾಲಯ ತನಿಖೆಗೆ ಆದೇಶಿಸಿದ್ದು, ಆಗ ಸಲ್ಲಿಸಿದ ವರದಿಯಲ್ಲಿ ಅರಣ್ಯ ಅಭಿವೃದ್ಧಿಪಡಿಸಿದ್ದು ಮತ್ತು ಅದನ್ನು ಪಂಚಾಯಿತಿಗೆ ವರ್ಗಾಯಿಸಿದ್ದ ಎರಡೂ ವಿಚಾರಗಳನ್ನು ಖಾತರಿಪಡಿಸಿದೆ.

"ವಸ್ತುಸ್ಥಿತಿ ಅಧ್ಯಯನ ಮಾಡುವಂತೆ ಆದೇಶ ಮಾಡಿದ್ದ ಈ ನ್ಯಾಯಾಲಯದ ಆದೇಶವು ಅರಣ್ಯೀಕರಣ ಮಾಡಲಾಗಿತ್ತು ಎಂಬುದನ್ನು ಬಹಿರಂಗಪಡಿಸಿದೆ. ಕಾನೂನುಬಾಹಿರ ಗಣಿಕಾರಿಕೆಯಿಂದ ಅರಣ್ಯ ಮಾಯವಾಗಿದೆ. ಗ್ರಾಮ ಪಂಚಾಯಿತಿಯ ನಡವಳಿಕೆಯನ್ನು ಗಮನದಲ್ಲಿಟ್ಟುಕೊಂಡು ಲೋಕಾಯುಕ್ತ ಕಾಯಿದೆಯ ನಿಬಂಧನೆಗಳ ಅಡಿ ಪ್ರಾಥಮಿಕ ತನಿಖೆ ನಡೆಸಿ, ಆನಂತರ ಕಾನೂನಿನ ಪ್ರಕಾರ ಮುಂದುವರಿಯುವುದು ಸೂಕ್ತ ಎಂಬುದು ಈ ನ್ಯಾಯಾಲಯ ಅಚಲ ನಿಲುವಾಗಿದೆ," ಎಂದು ಪೀಠ ಹೇಳಿದೆ.

 Kolar: HC Ordered For Lokayukta Probe Into Destruction Of 9,500 Trees In Tekal Village

ಈ ಮಧ್ಯೆ, ರಾಜ್ಯ ಸರ್ಕಾರದ ಪರ ವಕೀಲರು ವಾದ ಮಂಡಿಸಿ, "37 ಎಕರೆ ಭೂಮಿಯನ್ನು ಅರಣ್ಯೀಕರಣಿಸುವ ಉದ್ದೇಶದಿಂದ ಅರಣ್ಯ ಇಲಾಖೆಗೆ ವರ್ಗಾಯಿಸಲಾಗಿದೆ," ಎಂದು ಹೇಳಿದರು.

Recommended Video

ಪಾಪ! ರಾಹುಲ್ ಗಾಂಧಿ ಮೋದಿಗೆ ಏನ್ ಹೇಳಿದ್ರೂ ಎಡವಟ್ಟಾಗುತ್ತೆ,ಯಾಕೆ? | Oneindia Kannada

ಆಗ ಪೀಠವು ಆರು ತಿಂಗಳಲ್ಲಿ ಗಿಡ ನೆಟ್ಟು ಮರ- ಗಿಡಗಳಿಗೆ ರಕ್ಷಣೆ ಒದಗಿಸುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ (ಡಿಸಿಎಫ್) ಆದೇಶಿಸಿತು. ಡಿಸಿಎಫ್ ವೆಂಕಟೇಶ್‌ ಅವರನ್ನು ಸದ್ಯದ ಹುದ್ದೆಯಿಂದ ವರ್ಗಾಯಿಸದಂತೆ ರಾಜ್ಯ ಸರ್ಕಾರಕ್ಕೆ ಪೀಠ ಆದೇಶ ಮಾಡಿತು.

English summary
Karnataka High Court ordered an inquiry by the Lokayukta on the issue of destruction of around 9,500 trees, grown on 37.06 acres of the government land in Kolar district several years ago, due to illegal mining activities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X