ಕೋಲಾರದಲ್ಲಿ ಕೊರೊನಾ ಕರ್ತವ್ಯದಲ್ಲಿದ್ದ ಆರೋಗ್ಯ ನಿರೀಕ್ಷಕ ಸಾವು
ಕೋಲಾರ, ಏಪ್ರಿಲ್ 06: ಕೊರೊನಾ ಕರ್ತವ್ಯದಲ್ಲಿದ್ದ ಆರೋಗ್ಯ ನಿರೀಕ್ಷಕ ಎದೆ ನೋವಿನಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಕೋಲಾರದ ಮುಳಬಾಗಿಲು ತಾಲ್ಲೂಕು ಹೆಬ್ಬಣಿ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸರವಣಂ (45) ಎಂಬ ಆರೋಗ್ಯ ನಿರೀಕ್ಷಕ ಎದೆ ನೋವಿನಿಂದ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.

ಇವರು ಮುಳಬಾಗಿಲು ತಾಲ್ಲೂಕು ಊರುಕುಂಟೆ ಮಿಟ್ಟೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ನಿರೀಕ್ಷಕರಾಗಿದ್ದರು. ಕಳೆದ ರಾತ್ರಿ ಕೊರೊನಾ ಸಂಬಂಧ ಕರ್ತವ್ಯದಲ್ಲಿದ್ದ ವೇಳೆಯೇ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ.












Click it and Unblock the Notifications