ಕೋಲಾರದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ
ಕೋಲಾರ, ಏಪ್ರಿಲ್ 28: ಕೋಲಾರ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಸುತ್ತಮುತ್ತ ಆಲಿ ಕಲ್ಲು ಸಹಿತ ಜೋರು ಮಳೆಯಾಗಿದ್ದು, ಕೆಜಿಎಫ್ ತಾಲ್ಲೂಕಿನ ಸುತ್ತಮುತ್ತ ಬಿರುಗಾಳಿ ಸಹಿತ ಜೋರು ಮಳೆಯಾಗಿದೆ.
Recommended Video
ಪಾದರಾಯನಪುರದಲ್ಲಿ ಲಾಡ್ಜ್ ಖಾಲಿ ಮಾಡಿಸಿದ ಇಮ್ರಾನ್ ಪಾಷಾ..! | Oneindia Kannada
ಆದರೆ ಕೋಲಾರ, ಮಾಲೂರು, ಮುಳಬಾಗಲು, ಶ್ರೀನಿವಾಸಪುರ ತಾಲ್ಲೂಕುಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗಿಲ್ಲ. ಕೆಜಿಎಫ್ ಹಾಗೂ ಬಂಗಾರಪೇಟೆ ತಾಲ್ಲೂಕುಗಳಲ್ಲಿ ಆಲಿಕಲ್ಲು ಮಳೆಯಿಂದ ರೈತರ ಬೆಳೆಗಳಿಗೆ ಹಾನಿಯಾಗಿದೆ.

ಇನ್ನೂ ನಾಲ್ಕು ತಾಲ್ಲೂಕುಗಳಲ್ಲಿ ಮಳೆ ಬರುವ ಮುನ್ಸೂಚನೆ ಇದ್ದು, ಜಿಲ್ಲೆಯಲ್ಲೇ ಮಳೆ ಕಣ್ಣಾ ಮುಚ್ಚಾಲೆಯಾಡುತ್ತಿದೆ. ಕಳೆದ ನಾಲ್ಕು ತಿಂಗಳಿನಿಂದ ಕಾದು ಕೆಂಡದಂತ್ತಾಗಿದ್ದ ಧರೆಗೆ ಇದೀಗ ಮಳೆರಾಯ ತಂಪೆರೆದಿದ್ದಾನೆ.












Click it and Unblock the Notifications