ಸಂವಿಧಾನಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ: ರಮೇಶ್ ಕುಮಾರ್‌

ಶ್ರೀನಿವಾಸಪುರ, ಜುಲೈ 17: ಸುಪ್ರೀಂಕೋರ್ಟ್‌ ತೀರ್ಪು ಹೊರಬಿದ್ದಿರುವ ಹಿನ್ನೆಲೆಯಲ್ಲಿ ಮತ್ತೆ ಎಲ್ಲರ ಗಮನ ಸ್ಪೀಕರ್ ರಮೇಶ್ ಕುಮಾರ್ ಅವರತ್ತ ಹರಿದಿದೆ.

ಸುಪ್ರೀಂಕೋರ್ಟ್‌ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಸುಪ್ರೀಂ ತೀರ್ಪು ಸ್ಪಷ್ಟವಾಗಿದೆ. ಸಂವಿಧಾನಕ್ಕೆ ಚ್ಯುತಿ ಬಾರದಂತೆ, ನ್ಯಾಯಾಲಯದ ತೀರ್ಪು ಉಲ್ಲಂಘಿಸದಂತೆ ನಡೆದುಕೊಳ್ಳಲಿದ್ದೇನೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.

ಕೋಲಾರದ ಶ್ರೀನಿವಾಸಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರನ್ನು ಸದನಕ್ಕೆ ಕರೆದುಕೊಂಡು ಬರುವುದು ನನ್ನ ಜವಾಬ್ದಾರಿಯಲ್ಲ, ಅಧಿವೇಶನವನ್ನು ಸರಿಯಾಗಿ ನಡೆಸುವುದಷ್ಟೆ ನನ್ನ ಜವಾಬ್ದಾರಿ, ಶಾಸಕರನ್ನು ಸದನಕ್ಕೆ ಕರೆತರುವ ಕೆಲಸವನ್ನು ಪಕ್ಷದ ನಾಯಕರು ಮಾಡಲಿದ್ದಾರೆ ಎಂದರು.

 I will act as per the constitution: Ramesh Kumar

ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಅಥವಾ ಅನರ್ಹತೆ ವಿಚಾರದ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವನ್ನು ಮೊಟಕುಗೊಳಿಸಲು ಅಥವಾ ಹಸ್ತಕ್ಷೇಪ ಮಾಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಸ್ಪೀಕರ್ ಅವರು ತಮ್ಮ ವಿವೇಚನೆಗೆ ತಕ್ಕಂತೆ ರಾಜೀನಾಮೆ ಅಥವಾ ಅನರ್ಹತೆ ಬಗ್ಗೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+