• search
 • Live TV
ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋಲಾರ; ಶಾಲಾ ಆವರಣದಲ್ಲಿ ಮದ್ಯ ಸೇವನೆ, ಜೂಜಾಟ

By ಕೋಲಾರ ಪ್ರತಿನಿಧಿ
|
Google Oneindia Kannada News

ಕೋಲಾರ, ಜೂನ್ 16; ಕೋವಿಡ್ ಕಾರಣದಿಂದಾಗಿ ಶಾಲೆಗಳು ಬಂದ್ ಆಗಿವೆ. ಶಾಲೆಯ ಆವರಣದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಾಸ್ತೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಕಂಡುಬಂದಿದೆ.

ಗ್ರಾಮದ ಕೆಲವು ಜನರು ಶಾಲೆಯ ಆವರಣದಲ್ಲಿ ಬೆಟ್ಟಿಂಗ್ ಆಡುವುದು. ಮದ್ಯ ಸೇವಿಸುವುದು, ಧೂಮಪಾನ ಮಾಡುವುದು ನಿರಂತರವಾಗಿ ನಡೆಯುತ್ತಿದೆ. ಹುಣಸೆ ಬೀಜಗಳಿಂದ ಆಡುವ ಒಂಟಿ ಜೋಡಿ ಆಟದಲ್ಲಿಯೂ ತೊಡಗಿರುವ ವಿಡಿಯೋ ವೈರಲ್ ಆಗಿದದೆ.

ಖಾಸಗಿ ಶಾಲೆ ಮತ್ತು ಪೋಷಕರ ನಡುವೆ ಜಗಳಕ್ಕೆ ಕಾರಣವಾದ ಸಚಿವರ ಆದೇಶ!ಖಾಸಗಿ ಶಾಲೆ ಮತ್ತು ಪೋಷಕರ ನಡುವೆ ಜಗಳಕ್ಕೆ ಕಾರಣವಾದ ಸಚಿವರ ಆದೇಶ!

ಶ್ರೀನಿವಾಸಪುರ ತಾಲೂಕಿನಲ್ಲಿ ಜೂಜಾಟ, ಕೋಳಿಪಂದ್ಯಾಟಗಳು ಮಿತಿಮೀರಿವೆ. ಇಲ್ಲಿನ ಪೊಲೀಸರ ಕುಮ್ಮಕ್ಕಿನಿಂದಲೇ ಧಂದೆಕೋರರು ರಾಜಾರೋಷವಾಗಿ ಆಟ ಆಡಿಸುತ್ತಿದ್ದಾರೆ ಎಂದು ಸಹ ಜನರು ಆರೋಪಿಸುತ್ತಿದ್ದಾರೆ.

ವಿದ್ಯಾರ್ಥಿಗಳಿಲ್ಲದೆ ಮುಚ್ಚಿದ ರಾಜಧಾನಿಯ ಅತ್ಯಂತ ಹಳೆಯ ಕನ್ನಡ ಶಾಲೆವಿದ್ಯಾರ್ಥಿಗಳಿಲ್ಲದೆ ಮುಚ್ಚಿದ ರಾಜಧಾನಿಯ ಅತ್ಯಂತ ಹಳೆಯ ಕನ್ನಡ ಶಾಲೆ

"ಗ್ರಾಮಗಳಲ್ಲಿ ಜನರು ಜೂಜಾಟ ಆಡುವ ವೇಳೆ ಬಂಧಿಸುವ ಪೊಲೀಸರು ಲಕ್ಷಾಂತರ ರೂಪಾಯಿ ಹಣವನ್ನು ಬೆಟ್ಟಿಂಗ್‌ಗೆ ಇಟ್ಟು ಜೂಜಾಟದ ಅಡ್ಡಗಳಿಗೆ ರಕ್ಷಣೆ ನೀಡುತ್ತಿದ್ದಾರೆ" ಎಂದು ಮಾಜಿ ಸ್ಪೀಕರ್, ಸ್ಥಳೀಯ ಶಾಸಕ ರಮೇಶ್ ಕುಮಾರ್ ಕೆಲವು ದಿನಗಳ ಹಿಂದೆ ಆರೋಪಿಸಿದ್ದರು.

ಕರ್ನಾಟಕದ ಹಳ್ಳಿಹಳ್ಳಿಯಲ್ಲೂ ಆಂಗ್ಲ ಮಾಧ್ಯಮ ಶಾಲೆ ಕರ್ನಾಟಕದ ಹಳ್ಳಿಹಳ್ಳಿಯಲ್ಲೂ ಆಂಗ್ಲ ಮಾಧ್ಯಮ ಶಾಲೆ

ಇದೀಗ ಶಾಲಾ ಆವರಣದಲ್ಲೂ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೂ ಘಟನೆಗೆ ತಮಗೆ ಸಂಬಂಧವೇ ಇಲ್ಲ ಎಂದು ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ. ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಮತ್ತು ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೆ ನಡೆಯುತ್ತಿವೆ.

ಹಿರಿಯ ಅಧಿಕಾರಿಗಳು ಸಹ ಇದಕ್ಕೆ ಬೇಷರತ್ ಆಗಿ ಬೆಂಬಲಿಸಿದ್ದಾರೆ. ಶ್ರೀನಿವಾಸಪುರದಲ್ಲಿ ಜೂಜಾಟ, ಕೋಳಿಪಂದ್ಯಗಳ ಜೊತೆಗೆ ಪೊಲೀಸರು ರಸ್ತೆಗಳಲ್ಲಿ ವಾಹನ ಅಡ್ಡಗಟ್ಟಿ ಹಣ ವಸೂಲಿ ಮಾಡುವ ಪ್ರಕರಣ ಹೆಚ್ಚುತ್ತಿವೆ.

   ಕೊರೊನಾ ಲಸಿಕೆಯಿಂದ ವ್ಯಕ್ತಿಯ ಸಾವಾಗಿದೆ ಅನ್ನೋದನ್ನ ಒಪ್ಪಿಕೊಂಡ ಕೇಂದ್ರ ಸರ್ಕಾರ | Oneindia Kannada

   ಕೋಲಾರ ಜಿಲ್ಲೆಗೆ ನೂತನ ಎಸ್ಪಿಯಾಗಿ ಆಗಮಿಸಿರುವ ಡೆಕ್ಕಾ ಕಿಶೋರ್ ಬಾಬು ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದು ಜನರು ಆಗ್ರಹಿಸಿದ್ದಾರೆ.

   English summary
   Illegal activities found in Kolar district Srinivaspur taluk government school premises. Police fail to take action against activities.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X