ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಎಂಎಲ್‌ಸಿ ಸ್ಥಾನಕ್ಕೆ ಜೆಡಿಎಸ್ ನಾಯಕನ ರಾಜೀನಾಮೆ

|
Google Oneindia Kannada News

ಕೋಲಾರ, ನವೆಂಬರ್ 29; ಜೆಡಿಎಸ್ ನಾಯಕ, ಸಿನಿಮಾ ನಿರ್ಮಾಪಕ ಸಿ. ಆರ್. ಮನೋಹರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಸಭಾಪತಿಗಳು ರಾಜೀನಾಮೆ ಅಂಗೀಕಾರ ಮಾಡಿದ್ದಾರೆ.

ಸೋಮವಾರ ಸಿ. ಆರ್. ಮನೋಹರ್ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ರಾಜೀನಾಮೆಯನ್ನು ಸಲ್ಲಿಕೆ ಮಾಡಿದರು. ಕೋಲಾರ ಸ್ಥಳೀಯ ಸಂಸ್ಥೆಗಳಿಂದ ಸಿ. ಆರ್. ಮನೋಹರ್ ಜೆಡಿಎಸ್‌ನಿಂದ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.

ಪರಿಷತ್ ಚುನಾವಣೆ; ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ!ಪರಿಷತ್ ಚುನಾವಣೆ; ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ!

ಸಿ. ಆರ್.‌ ಮನೋಹರ್ ಸಲ್ಲಿಸಿರುವ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕಾರ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, "ಸ್ವ ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದಿರೋ, ಒತ್ತಡದಿಂದಲೋ ಎಂದು ಪ್ರಶ್ನಿಸಿದೆ. ಸ್ವ ಇಚ್ಛೆಯಿಂದ ಎಂದು ಹೇಳಿದ್ದಾರೆ" ಎಂದರು.

ಪರಿಷತ್ ಚುನಾವಣೆ; ಒಳ ಒಪ್ಪಂದದ ರಹಸ್ಯ ಬಿಚ್ಚಿಟ್ಟ ಎಚ್‌ಡಿಕೆ ಪರಿಷತ್ ಚುನಾವಣೆ; ಒಳ ಒಪ್ಪಂದದ ರಹಸ್ಯ ಬಿಚ್ಚಿಟ್ಟ ಎಚ್‌ಡಿಕೆ

JDS Leader CR Manohar Resigned For MLC Post

ಸಿ. ಆರ್.‌ ಮನೋಹರ್ ಅವರ ಪರಿಷತ್ ಅವಧಿ ಕೆಲವೇ ದಿನಗಳಲ್ಲಿ ಅಂತ್ಯಗೊಳ್ಳಲಿದೆ. ಚುನಾವಣಾ ಆಯೋಗ ಈಗಾಗಲೇ ತೆರವಾಗುವ ಸ್ಥಾನಕ್ಕೆ ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಿದೆ. ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ.

ಶಿವಮೊಗ್ಗ; ವಿಧಾನ ಪರಿಷತ್ ಮತದಾನ ಬಹಿಷ್ಕಾರಶಿವಮೊಗ್ಗ; ವಿಧಾನ ಪರಿಷತ್ ಮತದಾನ ಬಹಿಷ್ಕಾರ

ಚುನಾವಣೆ ಘೋಷಣೆಯಾದರೂ ಸಿ. ಆರ್. ಮನೋಹರ್ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ. ಕೋಲಾರ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ ಜೆಡಿಎಸ್‌ನಿಂದ ವಕ್ಕಲೇರಿ ರಾಮು ಅಭ್ಯರ್ಥಿ.

ಪಕ್ಷಕ್ಕೆ ರಾಜೀನಾಮೆ ಸಲ್ಲಿಕೆ; ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಸಿ. ಆರ್. ಮನೋಹರ್, "ಪಕ್ಷಕ್ಕೆ ರಾಜೀನಾಮೆ ಕಳಿಸುತ್ತೇನೆ. ಡಿಸೆಂಬರ್ 2ರಂದು ಮುಂದಿನ ತೀರ್ಮಾನ ಪ್ರಕಟಿಸುತ್ತೇನೆ" ಎಂದು ಹೇಳಿದರು.

ಸಿ. ಆರ್. ಮನೋಹರ್ ಭಾನುವಾರವೇ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಸಭಾಪತಿ ಬಸವರಾಜ ಹೊರಟ್ಟಿ ಲಭ್ಯವಿರಲಿಲ್ಲ. ಸೋಮವಾರ ಸಭಾಪತಿಗಳ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ.

ಕೋಲಾರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಕೆ. ಎನ್. ವೇಣುಗೋಪಾಲ್ ಮತ್ತು ಕಾಂಗ್ರೆಸ್‌ನಿಂದ ಎಂ. ಎನ್. ಅನಿಲ್ ಕುಮಾರ್ ಅಭ್ಯರ್ಥಿಗಳು. ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.

Recommended Video

ಮೊದಲನೇ ಪಂದ್ಯದ Pitch ಸಿದ್ದಪಡಿಸಿದವರಿಗೆ Dravid ಕೊಟ್ಟ ಬಹುಮಾನ | Oneindia Kannada

ಕಾಂಗ್ರೆಸ್ ಸೇರಲಿದ್ದಾರೆ?: ಜೆಡಿಎಸ್ ತೊರೆಯಲಿರುವ ಸಿ. ಆರ್. ಮನೋಹರ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. 2009ರಿಂದಲೇ ಅವರು ರಾಜಕೀಯದಲ್ಲಿ ಸಕ್ರಿಯವಾಗಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಬಾಗೇಪಲ್ಲಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 38,302 ಮತಗಳನ್ನು ಪಡೆದು ಸೋತಿದ್ದರು.

English summary
JD(S) leader C. R. Manohar submitted resignation for the legislative council member post. He elected for legislative council from Kolar local authoritie's constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X