ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Siddaramaiah From Kolar: ಕೋಲಾರದಿಂದ ಸ್ಪರ್ಧಿಸುತ್ತೇನೆ ಎಂದು ಘೋಷಿಸಿದ ಸಿದ್ದರಾಮಯ್ಯ

|
Google Oneindia Kannada News

ಕೋಲಾರ, ಜನವರಿ, 09: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

Siddaramaiah decided to contest from Kolar constituency in the 2023 Karnataka Assembly elections

ಈ ಮೂಲಕ ಹಲವು ತಿಂಗಳಿಂದ ಕ್ಷೇತ್ರ ಹುಡುಕಾಟದ ಕಸರತ್ತಿಗೆ ತೆರೆಬಿದ್ದಂತಾಗಿದೆ. ನಗರದ ಮಿನಿ ಕ್ರೀಡಾಂಗಣದಲ್ಲಿ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿತ್ತು. ಕೋಲಾರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಈ ನಿರ್ಧಾರವನ್ನು ಪ್ರಕಟಿಸಿದರು. ಆದರೆ ಹೈಕಮಾಂಡ್ ಒಪ್ಪಿಗೆ ಮೇಲೆ ನನ್ನ ನಿರ್ಧಾರ ಅವಲಂಬಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆಗೆ ಒಂದು ಪ್ರಕ್ರಿಯೆ ಇದೆ

ನಮ್ಮ ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆಗೆ ಒಂದು ಪ್ರಕ್ರಿಯೆ ಇದೆ. ನಾನು ಸ್ಪರ್ಧೆ ಬಗ್ಗೆ ತಿಳಿಸಿದ್ದೇನೆ. ಆದರೆ ನನ್ನ ತೀರ್ಮಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಬೇಕಿದೆ. ನಾನೇ ಏಕಾಂಗಿಯಾಗಿ ಘೋಷಣೆ ಮಾಡಲು ಸಾಧ್ಯವಿಲ್ಲ. ಪಕ್ಷದಲ್ಲಿ ನನಗೆ ಅಂತಾ ವಿಶೇಷ ನೀತಿ ಇಲ್ಲ. ಪಕ್ಷದಲ್ಲಿ ಎಲ್ಲರಂತೆ ನಾನು ಕೂಡ ಒಬ್ಬನಾಗಿದ್ದು, ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ತಿಳಿಸಿದರು. ಈಗಾಗಲೇ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಜಿದ್ದಾಜಿದ್ದಿನ ಪೈಪೋಟಿ ಶುರುವಾಗಿದ್ದು, ಚುನಾವಣೆಯಲ್ಲಿ ಸ್ಪರ್ಧೆಗಾಗಿ ಹಲವು ಕಸರತ್ತುಗಳನ್ನು ನಡೆಸುತ್ತಲೇ ಇದ್ದಾರೆ. ಹಾಗೆಯೇ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಗೆ ಮುನ್ನವೇ ಕ್ಷೇತ್ರವನ್ನು ಆಯ್ಕೆ ಮಾಡುವ ಮೂಲಕ ಸಿದ್ದರಾಮಯ್ಯನವರು ಗೊಂದಲಗಳಿಗೆ ತರೆ ಎಳೆದಿದ್ದಾರೆ. ಇನ್ನು ರಾಜ್ಯ ರಾಜಕೀಯ ವಲಯದ ಗಮನ ಕೋಲಾರ ಕ್ಷೇತ್ರದತ್ತ ತಿರುಗಲಿದೆ. ಸಿದ್ದರಾಮಯ್ಯನವರ ನಿರ್ಧಾರದಿಂದ ಬಿಜೆಪಿ ಹಾಗೂ ಜೆಡಿಎಸ್‌ನ ಮುಂದಿನ ತೀರ್ಮಾನ ಏನಾಗಿರಬಹುದು ಎನ್ನುವುದೇ ಇದೀಗ ಕುತೂಹಲಕ್ಕೆ ಕಾರಣವಾಗಿದೆ.

English summary
Karnataka Assembly election 2023; Siddaramaiah decided to contest from Kolar constituency in the 2023 Karnataka Assembly elections, know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X