ಹೊಸ ಬೋರ್‌ವೆಲ್‌ಗೆ ಅನುಮತಿ ಕಡ್ಡಾಯ, ಏನಿದು ಆದೇಶ?
ಕೋಲಾರ, ಅಕ್ಟೋಬರ್ 23: ಕರ್ನಾಟಕದ 15 ಜಿಲ್ಲೆಗಳ 45 ತಾಲೂಕುಗಳಲ್ಲಿ ಹೊಸ ಕೊಳವೆಬಾವಿಗಳನ್ನು ಕೊರೆಯುವುದನ್ನು ನಿರ್ಬಂಧಿಸಿ ಅಧಿಸೂಚನೆ ಹೊರಡಿಸಲಾಗಿದೆ. ಈ ಜಿಲ್ಲೆಗಳ ವ್ಯಾಪ್ತಿಗೆ ಕೋಲಾರ ಸಹ ಒಳಪಡಲಿದೆ.
ಕರ್ನಾಟಕ ಅಂತರ್ಜಲ ಪ್ರಾಧಿಕಾರ ನೂತನ ಕೊಳವೆಬಾವಿಗಳನ್ನು ಕೊರೆಯುವುದನ್ನು ನಿರ್ಬಂಧಿಸಿದೆ. ಇದಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿದೆ. ಅನುಮತಿಯಿಲ್ಲದೆ ಕೊಳವೆಬಾವಿ ಕೊರೆದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ.
ಕರ್ನಾಟಕ ಅಂತರ್ಜಲ (ಅಭಿವೃದ್ದಿ, ನಿರ್ವಹಣೆ ಮತ್ತು ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012ರ ಅನ್ವಯ ಈ ಆದೇಶ ಹೊರಡಿಸಲಾಗಿದೆ. ಅಂತರ್ಜಲವನ್ನು ಅತಿಯಾಗಿ ಬಳಸುತ್ತಿರುವ 45 ತಾಲೂಕುಗಳನ್ನು ಗುರುತಿಸಲಾಗಿದೆ.
ಈ ಅಧಿಸೂಚನೆ ವ್ಯಾಪ್ತಿಗೆ ಕೋಲಾರ ಜಿಲ್ಲೆಯ ಕೋಲಾರ, ಬಂಗಾರಪೇಟೆ, ಮಾಲೂರು, ಮುಳಬಾಗಿಲು, ಶ್ರೀನಿವಾಸಪುರ ಮತ್ತು ಕೆಜಿಎಫ್ ತಾಲೂಕುಗಳು ಒಳಪಡುತ್ತವೆ. ಈ ತಾಲೂಕುಗಳಲ್ಲಿ ಹೊಸ ಕೊಳವೆ ಬಾವಿಗಳನ್ನು ಅನುಮತಿ ಇಲ್ಲದೆ ಕೊರೆಯುವಂತಿಲ್ಲ.

ಅನುಮತಿಯನ್ನು ಪಡೆಯುವುದು ಕಡ್ಡಾಯ
ಅಧಿಸೂಚನೆ ವ್ಯಾಪ್ತಿಯಲ್ಲಿ ಬರುವ ತಾಲೂಕುಗಳ ವ್ಯಾಪ್ತಿಯಲ್ಲಿ ಬಾವಿ ಅಥವಾ ಕೊಳವೆಬಾವಿಗಳನ್ನು ಕೊರೆಯಲು ಜಿಲ್ಲಾ ಮಟ್ಟದ ಸಮಿತಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಹಾಗೆಯೇ ಬಳಕೆದಾರರು ಕಡ್ಡಾಯವಾಗಿ ಜಿಲ್ಲಾ ಅಂತರ್ಜಲ ಪ್ರಾಧಿಕಾರದಲ್ಲಿ ಕೊಳವೆ ಬಾವಿಗಳನ್ನು ನೋಂದಾಯಿಸಬೇಕಾಗುತ್ತದೆ. ಅನುಮತಿ ಪತ್ರ ಹೊಂದಿರದ ಯಾವ ಒಬ್ಬ ವ್ಯಕ್ತಿಯು ಕೊಳವೆಬಾವಿಯನ್ನು ಕೊರೆಯಲು ಹಣಕಾಸಿನ ಸಹಾಯ, ವಿದ್ಯುತ್‍ಶಕ್ತಿ ಸಂಪರ್ಕ ಮುಂತಾದ ಸೌಲಭ್ಯಗಳನ್ನು ಪಡೆದುಕೊಳ್ಳಲು ಅರ್ಹರಲ್ಲ.

ಶಿಕ್ಷಾರ್ಹ ಅಪರಾಧವಾಗಿದೆ
ಕರ್ನಾಟಕ ಅಂತರ್ಜಲ ಪ್ರಾಧಿಕಾರದ ಅನುಮತಿ ಪಡೆಯದೆ ಯಾವುದೇ ವ್ಯಕ್ತಿ ಅಥವಾ ಯಾವುದೇ ಕೊರೆಯುವ ರಿಗ್ ಯಂತ್ರದ ಮಾಲೀಕರು ಅಥವಾ ಏಜೆನ್ಸಿಯವರು ಪ್ರಾಧಿಕಾರದಲ್ಲಿ ನೊಂದಾಯಿಸಿಕೊಳ್ಳದೆ ಕೊಳವೆಬಾವಿಗಳನ್ನು ತೋಡುವ ಅಥವಾ ಕೊರೆಯುವ ಕೆಲಸವನ್ನು ಕೈಗೊಳ್ಳುವುದು ಶಿಕ್ಷಾರ್ಹ ಅಪರಾಧವಾಗುತ್ತದೆ.

ಯಾವ-ಯಾವ ಉದ್ದೇಶಗಳು
ಅಧಿಸೂಚನೆ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಕೈಗಾರಿಕೆ, ವಾಣಿಜ್ಯ, ಮನೋರಂಜನೆ ಮತ್ತು ಇತರೆ (Infrastructure and mining) ಉದ್ದೇಶಕ್ಕಾಗಿ ಕೊಳವೆಬಾವಿ ಕೊರೆಯಲು ಅಂತರ್ಜಲ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕು. ನಂತರ ಕೊಳವೆಬಾವಿಗಳನ್ನು ಜಿಲ್ಲಾ ಅಂತರ್ಜಲ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಬೇಕು.
Recommended Video

ಎನ್‌ಓಸಿಯನ್ನು ಪಡೆಯಬೇಕು
ಕೊಳವೆ ಬಾವಿ ಕೊರೆದ ಬಳಿಕ ಅಂತರ್ಜಲ ಬಳಸಲು ನಿರಾಕ್ಷೇಪಣಾ ಪತ್ರವನ್ನುಕಡ್ಡಾಯವಾಗಿ ಅಂತರ್ಜಲ ಪ್ರಾಧಿಕಾರದಿಂದ ಪಡೆಯಬೇಕಾಗಿರುತ್ತದೆ. ಜನರಿಗೆ ಯಾವುದೇ ರೀತಿಯ ಗೊಂದಲಗಳಿದ್ದರೆ ಹಿರಿಯ ಭೂವಿಜ್ಞಾನಿ, ಜಿಲ್ಲಾ ಅಂತರ್ಜಲ ಕಛೇರಿ ಅವರನ್ನು ಸಂಪರ್ಕಿಸಬಹುದಾಗಿದೆ.
-
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications