ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊಸ ಬೋರ್‌ವೆಲ್‌ಗೆ ಅನುಮತಿ ಕಡ್ಡಾಯ, ಏನಿದು ಆದೇಶ?

|
Google Oneindia Kannada News

ಕೋಲಾರ, ಅಕ್ಟೋಬರ್ 23: ಕರ್ನಾಟಕದ 15 ಜಿಲ್ಲೆಗಳ 45 ತಾಲೂಕುಗಳಲ್ಲಿ ಹೊಸ ಕೊಳವೆಬಾವಿಗಳನ್ನು ಕೊರೆಯುವುದನ್ನು ನಿರ್ಬಂಧಿಸಿ ಅಧಿಸೂಚನೆ ಹೊರಡಿಸಲಾಗಿದೆ. ಈ ಜಿಲ್ಲೆಗಳ ವ್ಯಾಪ್ತಿಗೆ ಕೋಲಾರ ಸಹ ಒಳಪಡಲಿದೆ.

ಕರ್ನಾಟಕ ಅಂತರ್ಜಲ ಪ್ರಾಧಿಕಾರ ನೂತನ ಕೊಳವೆಬಾವಿಗಳನ್ನು ಕೊರೆಯುವುದನ್ನು ನಿರ್ಬಂಧಿಸಿದೆ. ಇದಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿದೆ. ಅನುಮತಿಯಿಲ್ಲದೆ ಕೊಳವೆಬಾವಿ ಕೊರೆದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ.

ಅಂತರ್ಜಲ ಉಳಿಸಿ! ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಸಿದ್ದಾಪುರದ ವಿಜ್ಞಾನಿಅಂತರ್ಜಲ ಉಳಿಸಿ! ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಸಿದ್ದಾಪುರದ ವಿಜ್ಞಾನಿ

ಕರ್ನಾಟಕ ಅಂತರ್ಜಲ (ಅಭಿವೃದ್ದಿ, ನಿರ್ವಹಣೆ ಮತ್ತು ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012ರ ಅನ್ವಯ ಈ ಆದೇಶ ಹೊರಡಿಸಲಾಗಿದೆ. ಅಂತರ್ಜಲವನ್ನು ಅತಿಯಾಗಿ ಬಳಸುತ್ತಿರುವ 45 ತಾಲೂಕುಗಳನ್ನು ಗುರುತಿಸಲಾಗಿದೆ.

ಅಂತರ್ಜಲ ಸಂರಕ್ಷಣೆಗಾಗಿ ಕಂದಕ-ಬಂಡು ನಿರ್ಮಾಣ ಅಂತರ್ಜಲ ಸಂರಕ್ಷಣೆಗಾಗಿ ಕಂದಕ-ಬಂಡು ನಿರ್ಮಾಣ

ಈ ಅಧಿಸೂಚನೆ ವ್ಯಾಪ್ತಿಗೆ ಕೋಲಾರ ಜಿಲ್ಲೆಯ ಕೋಲಾರ, ಬಂಗಾರಪೇಟೆ, ಮಾಲೂರು, ಮುಳಬಾಗಿಲು, ಶ್ರೀನಿವಾಸಪುರ ಮತ್ತು ಕೆಜಿಎಫ್ ತಾಲೂಕುಗಳು ಒಳಪಡುತ್ತವೆ. ಈ ತಾಲೂಕುಗಳಲ್ಲಿ ಹೊಸ ಕೊಳವೆ ಬಾವಿಗಳನ್ನು ಅನುಮತಿ ಇಲ್ಲದೆ ಕೊರೆಯುವಂತಿಲ್ಲ.

ಬೋರ್ ವೆಲ್ ಮೃತ್ಯುಕೂಪಕ್ಕೆ ಇನ್ನೆಷ್ಟು ಜನ ಬಲಿಯಾಗಬೇಕು..?ಬೋರ್ ವೆಲ್ ಮೃತ್ಯುಕೂಪಕ್ಕೆ ಇನ್ನೆಷ್ಟು ಜನ ಬಲಿಯಾಗಬೇಕು..?

ಅನುಮತಿಯನ್ನು ಪಡೆಯುವುದು ಕಡ್ಡಾಯ

ಅನುಮತಿಯನ್ನು ಪಡೆಯುವುದು ಕಡ್ಡಾಯ

ಅಧಿಸೂಚನೆ ವ್ಯಾಪ್ತಿಯಲ್ಲಿ ಬರುವ ತಾಲೂಕುಗಳ ವ್ಯಾಪ್ತಿಯಲ್ಲಿ ಬಾವಿ ಅಥವಾ ಕೊಳವೆಬಾವಿಗಳನ್ನು ಕೊರೆಯಲು ಜಿಲ್ಲಾ ಮಟ್ಟದ ಸಮಿತಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಹಾಗೆಯೇ ಬಳಕೆದಾರರು ಕಡ್ಡಾಯವಾಗಿ ಜಿಲ್ಲಾ ಅಂತರ್ಜಲ ಪ್ರಾಧಿಕಾರದಲ್ಲಿ ಕೊಳವೆ ಬಾವಿಗಳನ್ನು ನೋಂದಾಯಿಸಬೇಕಾಗುತ್ತದೆ. ಅನುಮತಿ ಪತ್ರ ಹೊಂದಿರದ ಯಾವ ಒಬ್ಬ ವ್ಯಕ್ತಿಯು ಕೊಳವೆಬಾವಿಯನ್ನು ಕೊರೆಯಲು ಹಣಕಾಸಿನ ಸಹಾಯ, ವಿದ್ಯುತ್‍ಶಕ್ತಿ ಸಂಪರ್ಕ ಮುಂತಾದ ಸೌಲಭ್ಯಗಳನ್ನು ಪಡೆದುಕೊಳ್ಳಲು ಅರ್ಹರಲ್ಲ.

ಶಿಕ್ಷಾರ್ಹ ಅಪರಾಧವಾಗಿದೆ

ಶಿಕ್ಷಾರ್ಹ ಅಪರಾಧವಾಗಿದೆ

ಕರ್ನಾಟಕ ಅಂತರ್ಜಲ ಪ್ರಾಧಿಕಾರದ ಅನುಮತಿ ಪಡೆಯದೆ ಯಾವುದೇ ವ್ಯಕ್ತಿ ಅಥವಾ ಯಾವುದೇ ಕೊರೆಯುವ ರಿಗ್ ಯಂತ್ರದ ಮಾಲೀಕರು ಅಥವಾ ಏಜೆನ್ಸಿಯವರು ಪ್ರಾಧಿಕಾರದಲ್ಲಿ ನೊಂದಾಯಿಸಿಕೊಳ್ಳದೆ ಕೊಳವೆಬಾವಿಗಳನ್ನು ತೋಡುವ ಅಥವಾ ಕೊರೆಯುವ ಕೆಲಸವನ್ನು ಕೈಗೊಳ್ಳುವುದು ಶಿಕ್ಷಾರ್ಹ ಅಪರಾಧವಾಗುತ್ತದೆ.

ಯಾವ-ಯಾವ ಉದ್ದೇಶಗಳು

ಯಾವ-ಯಾವ ಉದ್ದೇಶಗಳು

ಅಧಿಸೂಚನೆ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಕೈಗಾರಿಕೆ, ವಾಣಿಜ್ಯ, ಮನೋರಂಜನೆ ಮತ್ತು ಇತರೆ (Infrastructure and mining) ಉದ್ದೇಶಕ್ಕಾಗಿ ಕೊಳವೆಬಾವಿ ಕೊರೆಯಲು ಅಂತರ್ಜಲ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕು. ನಂತರ ಕೊಳವೆಬಾವಿಗಳನ್ನು ಜಿಲ್ಲಾ ಅಂತರ್ಜಲ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಬೇಕು.

Recommended Video

ಇದನ್ನು ಬಳಸಿ corona ಇಂದ ದೂರ ಇರಿ | Oneindia Kannada
ಎನ್‌ಓಸಿಯನ್ನು ಪಡೆಯಬೇಕು

ಎನ್‌ಓಸಿಯನ್ನು ಪಡೆಯಬೇಕು

ಕೊಳವೆ ಬಾವಿ ಕೊರೆದ ಬಳಿಕ ಅಂತರ್ಜಲ ಬಳಸಲು ನಿರಾಕ್ಷೇಪಣಾ ಪತ್ರವನ್ನುಕಡ್ಡಾಯವಾಗಿ ಅಂತರ್ಜಲ ಪ್ರಾಧಿಕಾರದಿಂದ ಪಡೆಯಬೇಕಾಗಿರುತ್ತದೆ. ಜನರಿಗೆ ಯಾವುದೇ ರೀತಿಯ ಗೊಂದಲಗಳಿದ್ದರೆ ಹಿರಿಯ ಭೂವಿಜ್ಞಾನಿ, ಜಿಲ್ಲಾ ಅಂತರ್ಜಲ ಕಛೇರಿ ಅವರನ್ನು ಸಂಪರ್ಕಿಸಬಹುದಾಗಿದೆ.

English summary
Karnataka Groundwater Authority banned new borewell drilling in 15 districts of 45 taluks. Kolar district 6 taluks people should take permission for new borewell.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X