ಚಿಕ್ಕಬಳ್ಳಾಪುರ ಸ್ಫೋಟ; ಕೋಲಾರದಲ್ಲಿ ಕ್ರಷರ್ ಮಾಲೀಕರ ಸಭೆ
ಕೋಲಾರ, ಫೆಬ್ರವರಿ 24: ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಗ್ರಾಮದಲ್ಲಿ ಜಿಲಿಟಿನ್ ಕಡ್ಡಿಗಳು ಸ್ಪೋಟಗೊಂಡು ದುರಂತ ನಡೆದಿದೆ. ಸರ್ಕಾರ ಈ ದುರಂತದ ಕುರಿತು ಸಿಐಡಿ ತನಿಖೆ ನಡೆಸಲು ಆದೇಶ ನೀಡಿದೆ.
ಈ ದುರಂತದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಜಿಲ್ಲಾಡಳಿತ ಕ್ರಶರ್ ಮಾಲೀಕರ ಜೊತೆ ಸಭೆ ನಡೆಸಿದೆ. ಅಕ್ರಮ ಕ್ರಶರ್ ನಡೆಸುವಿಕೆ, ಜಿಲೆಟಿನ್ ಶೇಖರಣೆ, ಜಿಲಿಟನ್ ಸಾಗಾಟ ಮಾಡದಂತೆ ಮಾಲೀಕರಿಗೆ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಎಚ್ಚರಿಕೆ ನೀಡಿದರು.
ಚಿಕ್ಕಬಳ್ಳಾಪುರ ಸ್ಪೋಟ ಪ್ರಕರಣ: ಫೆ.7ರಂದೇ ದಾಖಲಾಗಿತ್ತು ಎಫ್ಐಆರ್!
ಕಲ್ಲು ಕ್ವಾರಿಗಳಲ್ಲಿ ಬ್ಲಾಸ್ಟಿಂಗ್ ಮಾಡದಂತೆ ಸೂಚನೆ ನೀಡಿದರು. ಬ್ಲಾಸ್ಟಿಂಗ್ ಮಾಡಲು ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು ಎಂದರು. ಅಕ್ರಮ ಕಲ್ಲುಗಣಿಗಾರಿಕೆ ನಡೆಸುವವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿಕ್ಕಬಳ್ಳಾಪುರ ಸ್ಫೋಟ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸಿಡಿಮಿಡಿ!
ಅಕ್ರಮ ಜಿಲಿಟನ್ ಕಡ್ಡಿಗಳನ್ನು ಶೇಖರಣೆ ಮಾಡಿದರೆ ಕ್ರಿಮಿನಲ್ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದರು. ಎರಡು ದಿನದಿಂದ ಜಿಲ್ಲೆಯಲ್ಲಿ ಗಣಿಗಾರಿಕೆ ಮೇಲೆ ನಿಗಾ ಇಟ್ಟಿದ್ದಾರೆ ಎಂದರು.
ಚಿಕ್ಕಬಳ್ಳಾಪುರ ಸ್ಫೋಟ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ನಿರಾಣಿ
ಅಕ್ರಮ ಗಣಿಗಾರಿಕೆ, ಜಿಲಿಟಿನ್ ಶೇಖರಣೆ, ಸಾಗಾಟದ ಮೇಲೆ ಗಣಿ ಇಲಾಖೆ, ಕಂದಾಯ ಇಲಾಖೆ ಹಾಗೂ ಪೋಲಿಸ್ ಇಲಾಖೆಯಿಂದ ಜಂಟಿಯಾಗಿ ಕಾರ್ಯಚರಣೆ ಮಾಡಲಾಗುತ್ತದೆ.
ಹಿರೇನಾಗವಲ್ಲಿಯಂತಹ ಘಟನೆಗಳು ಜಿಲ್ಲೆಯಲ್ಲಿ ನಡೆಯದಂತೆ ಎಚ್ಚರವಹಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.