Kolar: ಮತ ಎಣಿಕೆ ಲೋಪದೋಷಗಳಾಗದಂತೆ ಯಶಸ್ವಿಗೊಳಿಸಿ - ಕೋಲಾರ ಜಿಲ್ಲಾಧಿಕಾರಿ ಸೂಚನೆ
ಕೋಲಾರ ಜೂನ್ 1: ಮತ ಎಣಿಕೆಗೆ ನಿಗದಿಪಡಿಸಿರುವ ಸೂಚನೆ ಗಳ ಕ್ರಮಬದ್ಧತೆಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ನಿಯಮಗಳನ್ನು ಪರಿಪಾಲಿಸಿ ಮತ ಎಣಿಕೆ ಕಾರ್ಯವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚಿಸಿದರು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಲೋಕಸಭಾ ಚುನಾವಣೆ-2024ರ ಮತ ಎಣಿಕೆ ಪೂರ್ವ ಸಿದ್ದತೆ ತರಬೇತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮತ ಎಣಿಕೆ ಜೂನ್ 4ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ನಡೆಯಲಿದೆ.

ಅಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗ ಲಿದ್ದು, ಮತ ಎಣಿಕೆಗೆ ನಿಯೋಜನೆಗೊಂಡಿರುವ ಅಧಿಕಾರಿ ಮತ್ತು ಸಿಬ್ಬಂದಿ ಉತ್ತಮ ರೀತಿಯಲ್ಲಿ ತರಬೇತಿಯನ್ನು ಪಡೆದು ಕೊಂಡು ಮತ ಎಣಿಕೆ ಕಾರ್ಯದಲ್ಲಿ ಲೋಪದೋಷಗಳಾಗದಂತೆ ಕೊಳ್ಳಬೇಕೆಂದರು.
ಬೆಳಗ್ಗೆ 6ಗಂಟೆಗೆ ಮತ ಎಣಿಕೆ ಕೇಂದ್ರ ದಲ್ಲಿ ಹಾಜರಿದ್ದು, ಉಪಾಹಾರ ಮುಗಿಸಿ 7 ಗಂಟೆಯೊಳಗೆ ತಮಗೆ ನಿಗದಿಪಡಿಸಿದ ಮತ ಎಣಿಕೆ ಕೊಠಡಿಯಲ್ಲಿ ಹಾಜರಿರಬೇಕು. ಮತ ಎಣಿಕೆ ಕೊಠಡಿಯೊಳಗೆ ಮೊಬೈಲ್ ನಿಷೇಧಿಸಲಾಗಿದೆ. ಮತ ಎಣಿಕೆ ಕೊಠಡಿಯೊಳಗಡೆ ಪೊಲೀಸ್, ಸೆಕ್ಯುರಿಟಿ ಸಿಬ್ಬಂದಿಗೆ ಅನವಶ್ಯಕವಾಗಿ ಪ್ರವೇಶವಿರುವುದಿಲ್ಲ. ಅಭ್ಯರ್ಥಿಗಳಲ್ಲದೆ ಸಚಿವರು, ರಾಜ್ಯ ಸಚಿವರು, ಕೇಂದ್ರ ಸಚಿವರಿಗೆ ಮತ ಎಣಿಕೆ ಕೊಠಡಿಯೊಳಗೆಪ್ರವೇಶ ಇರುವುದಿಲ್ಲ ಎಂಬ ಮಾಹಿತಿ ತಿಳಿದಿರಲಿ ಎಂದು ಹೇಳಿದರು.
ಮಾರ್ಗಸೂಚಿ ಪ್ರಕಾರ ಕಾರ್ಯ ನಿರ್ವಹಿಸಿ: ಮತ ಎಣಿಕೆ ಪ್ರಾರಂಭವಾಗುವ ಮೊದಲು ವಿವಿಪ್ಯಾಟ್ ಆನ್ ಮಾಡುವುದು, ರಿಸಲ್ಟ್ ಬಟನ್ ಪ್ರೆಸ್ ಮಾಡುವುದು ಹಾಗೂ ಅದನ್ನು ಕ್ಲೋಸ್ ಮಾಡುವಾಗ ಬಹು ಎಚ್ಚರಿಕೆಯಿಂದ ತಮಗೆ ವಹಿಸಿದ ಮಾರ್ಗಸೂಚಿಗಳಂತೆ ಕಾರ್ಯ ನಿರ್ವಹಿಸಬೇಕು.

ಮತ ಎಣಿಕೆಗೆ ನಿಯೋಜನೆಗೊಂಡ ಏಜೆಂಟ್ ಬಳಿ ಶಾಂತವಾಗಿ ವರ್ತಿಸಿ, ಅವರಿಗೆ ಏನಾ ದರೂ ಸಂಶಯಗಳಿದ್ದರೆ ಅವುಗಳನ್ನು ಪರಿಹರಿಸಿರಿ. ಪ್ರತಿ ಇವಿಎಂ ಗಳಲ್ಲಿ ಎಣಿಕೆಯಾದ ತಕ್ಷಣ ನಿಖರವಾಗಿ ಅಂಕಿ ಅಂಶಗಳನ್ನು ಬರೆದುಕೊಳ್ಳಬೇಕು. ಇಂದಿನ ತರಬೇತಿ ಅವಧಿಯಲ್ಲಿ ಸ್ಪಷ್ಟ ವಾದ ಮಾಹಿತಿ ಹಾಗೂ ಮಾರ್ಗದರ್ಶನ ವನ್ನು ಪಡೆದುಕೊಳ್ಳಿ, ಏಕೆಂದರೆ ಮತಎಣಿಕೆ ಮೇಲ್ವಿಚಾರಕರ ಜವಾಬ್ದಾರಿ ಬಹು ಮುಖ್ಯವಾಗಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಗಳಾದ ಎಂ.ನಾರಾಯಣ ಅವರು ಮಾತನಾಡಿ, ಅಂಚೆ ಮತಪತ್ರ ಎಣಿಕೆಗಾಗಿ ಪ್ರತ್ಯೇಕ ಕೊಠಡಿ ಹಾಗೂ 4 ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಸರ್ವೀಸ್ ವೋಟ್‌ಗಳನ್ನು (ಇಟಿಪಿಬಿಎಸ್) ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ತಂತ್ರಾಂಶದಲ್ಲಿ ಮತ ಎಣಿಕೆ ಮಾಡಲಾಗುವುದು. ವಿಧಾನಸಭೆ ಕ್ಷೇತ್ರವಾರು ಐದು ಮತಗಟ್ಟೆಗಳ ವಿವಿ ಪ್ಯಾಟ್‌ಗಳನ್ನು ಲಾಟರಿ ಮುಖಾಂತರ ಆಯ್ಕೆ ಮಾಡಿ ಅಭ್ಯರ್ಥಿಗಳ, ಏಜೆಂಟರ ಸಮಕ್ಷಮದಲ್ಲಿವಿವಿ ಪ್ಯಾಟ್ ಸ್ಲಿಪ್ ಎಣಿಕೆ ಮಾಡಲಾಗುವುದು ಎಂದರು.
ಸಾಕಷ್ಟು ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ. ಆಯಾ ಕ್ಷೇತ್ರವಾರು ಏಜೆಂಟರಿಗೆ ಮತ್ತು ಮತ ಎಣಿಕೆ ಸಿಬ್ಬಂದಿಗೆ ನಾನಾ ಬಣ್ಣಗಳ ಪಾಸ್‌ಗಳನ್ನು ವಿತರಿಸಲಾಗಿದೆ. ಅನವಶ್ಯಕವಾಗಿ ತಮ್ಮ ಎಣಿಕೆ ಟೇಬಲ್ ಬಿಟ್ಟು ಎಣಿಕಾ ಸ್ಥಳಗಳಲ್ಲಿ ಓಡಾಡುವಂತಿಲ್ಲ, ಅನಗತ್ಯ ಗೊಂದಲ ಸೃಷ್ಟಿಮಾಡುವಂತಿಲ್ಲ. ಪೊಲೀಸರೊಂದಿಗೆ ಸಮನ್ವಯ ಸಾಧಿಸಿಕೊಂಡು ಮತ ಎಣಿಕೆ ಕಾರ್ಯ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ್ ಮಾತನಾಡಿ, ಸರ್ವೀಸ್ ವೋಟ್ ಗಳನ್ನು ಕ್ರಮಬದ್ದವಾಗಿ ಇದ್ದಲ್ಲಿ ಮಾತ್ರ ಪರಿಗಣನೆಗೆ ತೆಗೆದುಕೊಳ್ಳಬೇಕು. ಸ್ವಘೋಷಿತ ಪ್ರಮಾಣ ಪತ್ರದಲ್ಲಿ ಮತ ದಾರರ ಹಾಗೂ ಪತ್ರಾಂಕಿತ ಅಧಿಕಾರಿ ಸಹಿಯಿರುವುದನ್ನು ಖಾತ್ರಿ ಪಡಿಸಿಕೊಳ್ಳ ಬೇಕು ಎಂದರು.
ಮಾಸ್ಟರ್ ಟ್ರೇನರ್ ಬೋಡಿರೆಡ್ಡಿ, ಸಿಬ್ಬಂದಿಗೆ ಮತ ಎಣಿಕೆ ಪ್ರಕ್ರಿಯೆಯಲ್ಲಿ ಅನುಸರಿಸಬಹುದಾದ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಉಪವಿಭಾಗಧಿಕಾರಿ ವೆಂಕಟಲಕ್ಷ್ಮಿ, ಜಿಪಂ ಉಪಕಾರ್ಯದರ್ಶಿ ಶಿವಕುಮಾರ್, ಎಆರ್‌ಒ, ತಹಸೀಲ್ದಾರ್ ಹಾಜರಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications