Kolar Lok Sabha Election 2024 Results LIVE: ಕೋಲಾರದಲ್ಲಿ ಮಲ್ಲೇಶ್ ಬಾಬು 50 ಸಾವಿರ ಮತಗಳ ಅಂತರದಲ್ಲಿ ಜಯ
ಕೋಲಾರ, ಜೂನ್ 04: ಕೋಲಾರ ಲೋಕಸಭಾ ಕ್ಷೇತ್ರ ಆಡಳಿತರೂಢ ಕಾಂಗ್ರೆಸ್ ಗೆ ಅಸ್ತಿತ್ವದ ಪ್ರಶ್ನೆಯಾದರೇ ಜೆಡಿಎಸ್ ಗೆ ಪ್ರತಿಷ್ಠೆಯಾಗಿದೆ. ಕೋಲಾರ ಕೋಲಾರ (ಎಸ್‌ಸಿ ಮೀಸಲು) ಕ್ಷೇತ್ರ ಕಾಂಗ್ರೆಸ್ ನಾಯಕರ ಭದ್ರ ಕೋಟೆ. ಈ ಕ್ಷೇತ್ರದಲ್ಲಿ ಹಿಂದೆ ಸತತ ಏಳು ಬಾರಿ ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್.ಮುನಿಯಪ್ಪ ಪ್ರತಿನಿಧಿಸಿದ್ದರು, ಅವರು ಈಗ ರಾಜ್ಯ ಸಚಿವ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದಾರೆ. ಕೋಲಾರದಲ್ಲಿ ಕೈ ನಾಯಕರನ್ನ ಅಸಮಾಧಾನ ಈ ಬಾರಿ ಮೈತ್ರಿ ಅಭ್ಯರ್ಥಿಗೆ ವರದಾನ ಆಗುತ್ತಾ ಎಂಬ ಕುತೂಹಲ ಮೂಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿಗೆ ಸಮೀಪದಲ್ಲಿರುವ ಕೋಲಾರ ಲೋಕಸಭಾ ಕ್ಷೇತ್ರವೂ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರಿಗೆ ಪ್ರತಿಷ್ಠೆಯಾಗಿದ್ದು, ಎಸ್‌ಸಿ ಎಡ ವರ್ಗದಿಂದ ಅಭ್ಯರ್ಥಿ ಕೆವಿ ಗೌತಮ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಕಣಕ್ಕಿಳಿಸಿತ್ತು. ಇತ್ತ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಲ್ಲೇಶ್ ಬಾಬು ಅವರ ಕಣದಲ್ಲಿದ್ದಾರೆ. ಟಿಕೆಟ್ ಹಂಟಿಕೆಗಿಂತ ಮೊದಲೇ ಕೋಲಾರದಲ್ಲಿನ ಕಾಂಗ್ರೆಸ್ ನಾಯಕರ ಒಳಜಗಳದಿಂದಾಗಿ ಈ ಬಾರಿ ಕೋಲಾರ ಕ್ಷೇತ್ರವನ್ನ ಕಾಂಗ್ರೆಸ್ ಕಳೆದುಕೊಳ್ಳುತ್ತದೆ ಎಂಬ ಚರ್ಚೆ ಹುಟ್ಟಿಕೊಂಡಿದೆ.

ಕೋಲಾರದಲ್ಲಿ ಬಿಜೆಪಿಯಿಂದ ಅಧಿಕಾರ ಕಿತ್ತುಕೊಳ್ಳಲು ಆಡಳಿತರೂಢ ಕಾಂಗ್ರೆಸ್ ಹಲವು ತಂತ್ರಗಾರಿಕೆಯನ್ನ ನಡೆಸಿತ್ತು. ಆದರೆ, ಕಾಂಗ್ರೆಸ್ ನಾಯಕರ ಒಳಜಗಳದಿಂದ ಬಿಜೆಪಿ- ಜೆಡಿಎಸ್ ಮೈತ್ರಿ ಪಾಲಾಗುವ ಎಲ್ಲಾ ಸಾಧ್ಯತೆಗಳು ಇವೆ. ಕೆ ಎಚ್ ಮುನಿಯಪ್ಪ ಅವರು 1991 ರಿಂದ 2019 ರ ವರೆಗೂ ಏಳು ಬಾರಿ ಕೋಲಾರ ಕ್ಷೇತ್ರವನ್ನು ಆಳಿದ್ದಾರೆ. ಪಕ್ಷದ ನಾಯಕರ ಬೆಂಬಲವಿಲ್ಲದೇ 2019ರ ಲೋಕಸಭೆ ಚುನಾವಣೆಯಲ್ಲಿ ಕೆ ಎಸ್ ಮುನಿಯಪ್ಪ ಸೋತರು ಎಂಬ ಮಾತಿದೆ. ಆದರೆ, ಅದೇ ಒಳಜಗಳ ಮುಂದುವರೆದಿದ್ದು, ಈ ಬಾರಿ ಗೆಲುವು ಯಾರಿಗೆ ಎಂಬ ಬಗ್ಗೆ ಕ್ಷಣ ಕ್ಷಣದ ಮಾಹಿತಿಗಾಗಿ ಈ ಪುಟವನ್ನ ನೋಡಿ.
ಫಲಿತಾಂಶದ ಕ್ಷಣ-ಕ್ಷಣದ ಮಾಹಿತಿ
*ಸಮಯ 9;40: ಕಾಂಗ್ರೆಸ್ ಪ್ರತಿಷ್ಠೆಯಾಗಿರುವ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ನಿರಂತರವಾಗಿ ಗೆಲುವು ಸಾಧಿಸಿದ್ದಾರೆ. ಬರೋಬ್ಬರು 46039 ಮತಗಳ ಅಂತರದಿಂದ ಎನ್ ಡಿಎ ಅಭ್ಯರ್ಥಿ ಮಲ್ಲೇಶ್ ಬಾಬು ಮುನ್ನಡೆ ಸಾಧಿಸಿದ್ದಾರೆ.
* ಸಮಯ 8:40: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ ವಿ ಗೌತಮ್ ಅವರು ಮುನ್ನಡೆಯನ್ನ ಸಾಧಿಸಿದ್ದು, ಆರಂಭದಲ್ಲಿ ಮುನ್ನಡೆ ಸಾಧಿಸಿದ್ದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಅವರು ಹಿನ್ನಡೆ ಸಾಧಿಸಿದ್ದಾರೆ.
* ಸಮಯ 08: ಕಾಂಗ್ರೆಸ್ ಪ್ರತಿಷ್ಠೆಯಾಗಿರುವ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಆರಂಭವಾಗಲಿದೆ. ಮೊದಲು ಅಂಚೆ ಮತಗಳ ಎಣಿಕೆ ಕಾರ್ಯ ಆರಂಭವಾಗಿದ್ದು, ಆರಂಭದಲ್ಲೇ ಎನ್ ಡಿಎ ಅಭ್ಯರ್ಥಿ ಮಲ್ಲೇಶ್ ಬಾಬು ಅವರು ಮುನ್ನಡೆಯನ್ನ ಕಾಯ್ದುಕೊಂಡಿದ್ದಾರೆ.












Click it and Unblock the Notifications