ಕೋಟಿಗಾನಹಳ್ಳಿ ರಾಮಯ್ಯ ಮೇಲೆ ಹಲ್ಲೆ; ಇಬ್ಬರನ್ನು ಬಂಧಿಸಿದ ಪೊಲೀಸರು

ಕೋಲಾರ ಜಿಲ್ಲೆಯ ಹಿರಿಯ ಸಾಹಿತಿ, ದಲಿತ ಚಳವಳಿ ನಾಯಕ ಕೋಟಿಗಾನಹಳ್ಳಿ ರಾಮಯ್ಯ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಕೋಟಿಗಾನಹಳ್ಳಿ‌ ರಾಮಯ್ಯ ಹಾಗೂ ಅವರ ಮಗ ಮೇಘವರ್ಷ ರವರ ಮೇಲೆ‌ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಮಂಜುನಾಥ ಮತ್ತು ಗೋವಿಂದಪ್ಪ‌ ಎಂಬುವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Kolar Police Arrest Culprits Who Assaulted Poet Kotiganahalli Ramaiah

ಹಲ್ಲೆಗೊಳಗಾಗಿರು ರಾಮಯ್ಯ ಅವರಿಗೆ ಕೋಲಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಜಿಲ್ಲಾ ಪೊಲೀಸರು ಅವರ ಆರೋಗ್ಯದ ಬಗ್ಗೆ ನಿಗಾವಹಿಸಿದ್ದಾರೆ. ಅವರ ಆರೋಗ್ಯದ ಬಗ್ಗೆ ಯಾವುದೇ ಆತಂಕ ಬೇಡ ಎಂದು ಅವರ ಅಭಿಮಾನಿಗಳಿಗೆ, ಬೆಂಬಲಿಗರಿಗೆ ಮನವಿ ಮಾಡಿದ್ದಾರೆ.

ಸೌಂಡ್ ಕಡಿಮೆ ಮಾಡಿ ಅಂದಿದಕ್ಕೆ ಹಲ್ಲೆ

ಅಂತರಗಂಗೆ ಬೆಟ್ಟದ ಪಾಪರಾಜನಹಳ್ಳಿ ಗ್ರಾಮದ ದೇವಸ್ಥಾನದಲ್ಲಿ ಜೋರು ಧ್ವನಿಯಲ್ಲಿ ಮೈಕ್ ಹಾಕಲಾಗಿತ್ತು, ಶಬ್ದ ಕಡಿಮೆ ಮಾಡುವಂತೆ ರಾಮಯ್ಯ ಅಲ್ಲಿದ್ದವರಿಗೆ ಮನವಿ ಮಾಡಿದ್ದಾರೆ, ಅಷ್ಟಕ್ಕೇ ಅಲ್ಲಿದ್ದವರು ಕೋಪಗೊಂಡು ರಾಮಯ್ಯ ಅವರ ಮೇಲೆ ಹಲ್ಲೆ ಮಾಡಿದ್ದಾರೆ.

ರಾಮಯ್ಯ ಅವರ ಮೇಲೆ ಹಲ್ಲೆ ನಡೆದ ವಿಚಾರ ತಿಳಿಯುತ್ತಿದ್ದಂತೆ ಬೆಂಬಲಿಗರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+