20ರ ಯುವತಿಯೊಂದಿಗೆ ಕಾಣೆಯಾಗಿದ್ದ ಸ್ವಾಮೀಜಿ ಮಂಗಳೂರಿನಲ್ಲಿ ಪತ್ತೆ
ಕೋಲಾರ, ಮಾರ್ಚ್ 4: ಪಾದಪೂಜೆ ಮಾಡುತ್ತಿದ್ದ ಯುವತಿಯೊಂದಿಗೆ ನಾಪತ್ತೆಯಾಗಿದ್ದ ಕೋಲಾರದ ಹೊಳಲಿ ಭೀಮಲಿಂಗೇಶ್ವರ ಸೇವಾಶ್ರಮದ ಪೀಠಾಧಿಪತಿ ದತ್ತಾತ್ರೇಯ ಅವಧೂತ ಸ್ವಾಮೀಜಿ (40) ಪತ್ತೆಯಾಗಿದ್ದಾರೆ.
ಫೆ.27ರಂದು ಕೋಲಾರ ತಾಲ್ಲೂಕು ಹೊಳಲಿ ಗ್ರಾಮದಿಂದ ಸ್ವಾಮೀಜಿ ಯುವತಿ ಜೊತೆ ನಾಪತ್ತೆಯಾಗಿದ್ದರು. ಅದೇ ಗ್ರಾಮದ 20 ವರ್ಷದ ಯುವತಿಯೊಂದಿಗೆ ನಾಪತ್ತೆಯಾಗಿದ್ದು ಕೋಲಾರ ಗ್ರಾಮಾಂತರ ಠಾಣೆಗೆ ಯುವತಿಯ ಸೋದರ ಮಾವ ಶಂಕರ್ ದೂರು ನೀಡಿದ್ದರು.
ಆನಂತರ ಯುವತಿಯ ಅಣ್ಣನಿಗೆ ಕರೆ ಮಾಡಿದ್ದ ಸ್ವಾಮೀಜಿ, ತಾವು ತಿರುಪತಿಯಲ್ಲಿ ಮದುವೆಯಾಗಿರುವುದಾಗಿ ತಿಳಿಸಿದ್ದರು. ಮತ್ತೆ ಅವರ ಸುಳಿವು ಸಿಕ್ಕಿರಲಿಲ್ಲ. ಇದೀಗ ಸ್ವಾಮೀಜಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಮಂಗಳೂರು ಬಳಿ ಯುವತಿಯೊಂದಿಗೆ ಸಿಕ್ಕಿಬಿದ್ದಿರುವುದಾಗಿ ತಿಳಿದುಬಂದಿದೆ.












Click it and Unblock the Notifications