Get Updates
Get notified of breaking news, exclusive insights, and must-see stories!

ಕೌಟುಂಬಿಕ ಕಲಹ: ಹೆಣ್ಣು ಮಕ್ಕಳಿಗೆ ಬೆಂಕಿ ಹಚ್ಚಿದ ತಾಯಿ, ಆತ್ಮಹತ್ಯೆಗೆ ಯತ್ನ

ಕೋಲಾರ, ಡಿ. 09 : ಕೌಟುಂಬಿಕ ಕಲಹ ಎಂಥವರನ್ನು ಕೆಟ್ಟ ಪರಿಸ್ಥಿತಿಗೆ ತಳ್ಳುತ್ತವೆ ಎಂಬುದಕ್ಕೆ ಕೋಲಾರದ ಘಟನೆ ಸಾಕ್ಷಿಯಾಗಿದೆ. ಇಂತಹ ಕಲಹಗಳ ಹಿನ್ನೆಲೆಯಲ್ಲಿ ಜ್ಯೋತಿ ಎಂಬ ಮಹಿಳೆಯೊಬ್ಬರು ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ಬೆಂಕಿ ಹಚ್ಚಿರುವ ಘಟನೆ ಕೋಲಾರದ ಮುಳಬಾಗಿಲಿನಲ್ಲಿ ನಡೆದಿದೆ.

ಈ ದುರಂತ ಘಟನೆಯು ಮುಳಬಾಗಲು ಬಳಿಯ ಅಂಜನಾದ್ರಿ ಬೆಟ್ಟದ ಮೇಲೆ ನಡೆದಿದೆ. ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿದ್ದು, ಅವರಲ್ಲಿ ಆಕೆಯ 6 ವರ್ಷದ ಮಗಳು ಸಾವನ್ನಪ್ಪಿದ್ದಾರೆ. ಮತ್ತೊಂದು ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ.

Kolar : Woman named Jyoti reportedly sets daughters on fire, 1 dead due to family dispute in Mulabagilu

ಆಂಧ್ರಪ್ರದೇಶದ ನಿವಾಸಿಯಾಗಿರುವ ಜ್ಯೋತಿ ಎಂಬುವವರು ಅಂಜನಾದ್ರಿ ಬೆಟ್ಟದ ಮೇಲೆ ಸಂಶಯ ಬರುವ ರೀತಿಯಲ್ಲಿ ಕುಳಿತಿರುವುದನ್ನು ಗಮನಿಸಿದ್ದಾರೆ. ಅಲ್ಲಿಂದ ಸುಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಕೆಲವು ಸ್ಥಳೀಯರು ನಂತರ ಸ್ಥಳಕ್ಕೆ ಧಾವಿಸಿದ್ದಾರೆ. ಆಗ ಮಹಿಳೆ ತನ್ನ ಇಬ್ಬರು ಮಕ್ಕಳಿಗೆ ತಾನೇ ಬೆಂಕಿ ಹಚ್ಚಿರುವುದಾಗಿ ಸ್ಥಳೀಯರ ಬಳಿ ಒಪ್ಪಿಕೊಂಡಿದ್ದಾಳೆ.

ಮಕ್ಕಳಿಗೆ ಬೆಂಕಿ ಹಚ್ಚಿದ ನಂತರ ತಾನು ಕೂಡ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಆದರೆ, ಸ್ಥಳೀಯರು ತಕ್ಷಣವೇ ಆಕೆಯನ್ನು ತಡೆದು ಮತ್ತೊಂದು ದುರಂತ ನಡೆಯುವುದನ್ನು ತಡೆದಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮಹಿಳೆ ತಾನು ಹೆತ್ತ ಮಕ್ಕಳಿಗೆ ಬೆಂಕಿ ಹಚ್ಚಲು ಕೌಟಂಬಿಕ ಕಲಹಗಳು ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಹೆಚ್ಚಿನ ವಿವರಗಳಿಗಾಗಿ ತನಿಖೆ ನಡೆಸಲಾಗುತ್ತಿದೆ.

COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+