ರೈತರಿಗೆ ವರದಾನವಾದ ಕೃಷಿ ಭಾಗ್ಯ ಯೋಜನೆ: ಕೋಲಾರ ಬೆಳೆಗಳಿಗೆ ಸುಲಭ ನೀರಾವರಿ ವ್ಯವಸ್ಥೆ...
ಕೋಲಾರ ಡಿಸೆಂಬರ್ 26: ಮಳೆ ಕೊರತೆ ರಾಜ್ಯದ ಕೃಷಿಕರನ್ನು ಇನ್ನಿಲ್ಲದಂತೆ ಕಾಡಿದೆ, ಕೋಲಾರ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ ಬೆಳೆ ಉತ್ಪಾದಕತೆ ಮತ್ತು ರೈತರ ಜೀವನ ಮಟ್ಟ ಸುಧಾರಿಸಲು ರಾಜ್ಯ ಸರಕಾರ ಕೃಷಿಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಇದು ಜಿಲ್ಲೆಯ ರೈತರಿಗೆ ವರದಾನವಾಗಲಿದೆ ಎಂಬ ಅಭಿಪ್ರಾಯ ಕೇಳಿ ಬಂದಿದೆ.
2023-24ನೇ ಸಾಲಿನಲ್ಲಿ ಜಿಲ್ಲಾ ವ್ಯಾಪ್ತಿಯ ಎಲ್ಲ ತಾಲೂಕುಗಳಲ್ಲಿ ಮಳೆಯಾಶ್ರಿತ ಕೃಷಿ ನೀತಿ, 2014ರನ್ವಯ ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯಯೋಜನೆಯನ್ನು ಅನುಷ್ಠಾನ ಮಾಡಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದ ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸಲು ನಿರ್ಧರಿಸಲಾಗಿದೆ.

ಏನಿದರ ಉದ್ದೇಶ?
ಸಮರ್ಪಕವಾಗಿ ಮಳೆ ನೀರಿನ ಸಂಗ್ರಹಣೆ ಮಾಡುವುದು. ಶೇಖರಣೆ ಯಾದ ನೀರನ್ನು ಉಪಯುಕ್ತವಾಗಿ ಬಳಕೆ ಮಾಡಿ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯ ಹೆಚ್ಚಿಸುವುದು. ಮಳೆ ನೀರನ್ನು ವ್ಯರ್ಥ ಮಾಡದೇ ಆಯ್ದಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ ಬೆಳೆಗಳ ಸಂದಿಗ್ಧಹಂತ ಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿರುತ್ತದೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿ ಜಾರಿ ಮಾಡಲಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ನಂತರ ಬಿಜೆಪಿ ಸರಕಾರ ಸ್ಥಗಿತಗೊಳಿಸಿತ್ತು. ಇದೀಗ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮಹತ್ವಾ ಕಾಂಕ್ಷಿ ಯೋಜನೆಯ ಮರು ಜಾರಿಗೆ ಮುಂದಾ ಗಿದ್ದಾರೆ. ಹಿಂದಿನ ಅವಧಿಯಲ್ಲಿ (2013-18) ಜಾರಿಗೆ ತಂದಿದ್ದ ಕೃಷಿ ಭಾಗ್ಯ ಯೋಜನೆಗೆ ಉತ್ತಮ ಸ್ಪಂದನೆ ದೊರೆತಿತ್ತು.
ಬದು ನಿರ್ಮಾಣ:
ಹೀಗಾಗಿ ಈ ಸಾಲಿನಲ್ಲೂ 100 ಕೋಟಿ ರೂ. ವೆಚ್ಚದಲ್ಲಿ ಕೋಲಾರ ಜಿಲ್ಲೆ ಸೇರಿದಂತೆ 24 ಜಿಲ್ಲೆಗಳ ವ್ಯಾಪ್ತಿಯ 106 ತಾಲೂಕುಗಳಲ್ಲಿ ಯೋಜನೆ ಅನುಷ್ಠಾನಕ್ಕೆ ನಿರ್ಧರಿಸಲಾಗಿದೆ. 106 ತಾಲೂಕುಗಳಲ್ಲಿ 16,062 ಕೃಷಿ ಹೊಂಡ ನಿರ್ಮಾಣ ಗುರಿ ಹೊಂದಿದ್ದು, ಕ್ಷೇತ್ರ ಬದು ನಿರ್ಮಾಣ ಇಂಗದಂತೆ ತಡೆಯಲು ಪಾಲಿಥಿನ್ ಆಳವಡಿಕೆ. , ನೀರು ಹೊದಿಕೆ
ಕೃಷಿ ಹೊಂಡದಿಂದ ನೀರು ಎತ್ತಲು ಡೀಸೆಲ್ ಪಂಪ್‌ಸೆಟ್ ಪೂರೈಕೆ, ನೀರನ್ನು ಬೆಳೆಗೆ ಹಾಯಿಸಲು ತುಂತುರು ನೀರಾವರಿ ಘಟಕ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ಅಳವಡಿಕೆ ಸೇರಿದಂತೆ ಹಲವು ಘಟಕಗಳಿಗೆ ಹಣಕಾಸು ನೆರವು ನೀಡಲು ನಿರ್ಧರಿಸಲಾಗಿದೆ.

ಯಾರು ಸಲ್ಲಿಸಬಹುದು ಅರ್ಜಿ?
ಕೃಷಿ ಭಾಗ್ಯ ಯೋಜನೆಯ ಸವಲತ್ತು ಪಡೆಯಲು ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾ ಗಿದೆ. ಆದರೆ ಕೃಷಿ ಭಾಗ್ಯ ಯೋಜನೆಯಡಿ ಸವ ಲತ್ತು ಪಡೆದಿರುವ ರೈತರು ಹಾಗೂ ನರೇಗಾ ಯೋಜನೆಯಡಿ ಸವಲತ್ತು ಪಡೆದಿರುವ ರೈತ ರನ್ನು ಹೊರತುಪಡಿಸಿ ಉಳಿದ ಎಲ್ಲಾ ರೈತ ಬಾಂಧವರು ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳ ಕೃಷಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಯೋಜನೆಯ ಪೂರ್ಣ ಮಾಹಿತಿಯನ್ನು ಪಡೆದು ಅರ್ಜಿ ಸಲ್ಲಿಸಬಹುದು.
ಅರ್ಜಿ ಜತೆ ಏನಿರಬೇಕು?
ಅರ್ಜಿಯ ಜತೆ ಎಫ್‌ಐಡಿ, ರೈತರ ಭಾವಚಿತ್ರ ಇರಬೇಕು. ಫ್ರಟ್ಸ್ ಐಡಿ ಇರದಿದ್ದರೆ, ಆಧಾರ್ ಪ್ರತಿ, ಪಹಣಿ ಪ್ರತಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ಪ್ರತಿ, ರೈತರ ಭಾವಚಿತ್ರ ಸಲ್ಲಿಸುವುದು ಕಡ್ಡಾಯವಾಗಿದೆ. ಜೇಷ್ಠತಾ ಆಧಾರದ ಮೇಲೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಕೃಷಿ ಹೊಂಡಗಳಿಂದ ನಾನಾ ಬೆಳೆಗಳನ್ನು ಬೆಳೆಯಲು ಬಹಳ ಅನುಕೂಲವಾಗಲಿದ್ದು, ಕೃಷಿ ಭಾಗ್ಯದಡಿ ಈ ಹಿಂದೆಯೂ ಸಾಕಷ್ಟು ಮಂದಿ ಕೃಷಿ ಹೊಂಡಗಳನ್ನು ಮಾಡಿಕೊಂಡಿದ್ದರು. ಈ ಮತ್ತೆ ಕೃಷಿ ಭಾಗ್ಯ ಯೋಜನೆ ಜಾರಿಗೆ ತಂದಿರುವುದು ಅನುಕೂಲ ಮಾಡಿಕೊಟ್ಟಿರುವುದು ರೈತ ವಲಯದಲ್ಲಿ ಹರ್ಷ ಮೂಡಿಸಿದೆ ಎಂದು ಮಾಲೂರು ರೈತ ರಾಜಶೇಖರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ರಾಜ್ಯದ ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಿ ಸಲು ಯೋಜನೆ ನೆರವಾಗಲಿದೆ. ಬರಪೀಡಿತ ಪ್ರದೇಶದಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ ಬೆಳೆ ಉತ್ಪಾದಕತೆ ಮತ್ತು ರೈತರ ಜೀವನ ಮಟ್ಟವನ್ನು ಸುಧಾರಿಸುವುದು ಈ ಯೋಜನೆಯ ಉದ್ದೇಶವಾಗಿದ್ದು, ಎಲ್ಲ ರೈತರು ಈ ಯೋಜನೆಯ ಸದುಪಯೋಗ ಪಡೆಯಬಹುದು ಎಂದು ಕೋಲಾರ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಎಂ.ಆರ್.ಸುಮಾ ಹೇಳಿದರು.












Click it and Unblock the Notifications