ಚುನಾವಣೆ: ಅ.26 ರಿಂದ 4 ದಿನಗಳ ಕಾಲ ಮದ್ಯ ಮಾರಾಟ ಬಂದ್
ಬೆಂಗಳೂರು, ಅ. 24: ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.
ಇಡೀ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಾಲ್ಕು ದಿನಗಳ ಕಾಲ ನಿಷೇಧ ಮಾಡಲಾಗಿದೆ ಎಂದು ಕೊಲಾರ ಜಿಲ್ಲಾಧಿಕಾರಿ ಸತ್ಯಭಾಮ ಅವರು ತಿಳಿಸಿದ್ದಾರೆ. ಜೊತೆಗೆ ಹೊರಗಿನವರು ಜಿಲ್ಲೆಯಲ್ಲಿ ಇರುವ ಕುರಿತು ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದೇ ಅ. 28 ರಂದು ನಡೆಯಲಿರುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯಲ್ಲಿ 21 ಸಾವಿರ ಪದವೀಧರ ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ.
ಸಿಎಂ ಬಗ್ಗೆ ಯತ್ನಾಳ್ ಹೇಳಿಕೆ; ಅಬಕಾರಿ ಸಚಿವ ನಾಗೇಶ್ ಪ್ರತಿಕ್ರಿಯೆ
ಉಳಿದಂತೆ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಮತದಾನ ನಡೆಯುವ ಚಿತ್ರದುರ್ಗ, ಕೋಲಾರ, ತುಮಕೂರು, ದಾವಣಗೆರೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಮದ್ಯ ಮಾರಾಟ ನಿಷೇಧ ಮಾಡಲಾಗುತ್ತಿದೆ. ಐದೂ ಜಿಲ್ಲೆಗಳಲ್ಲಿ ಮತದಾರರು ಅ. 28 ರಂದು ಮತದಾನ ಮಾಡಲಿದ್ದಾರೆ.