• search
 • Live TV
ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರೈತರ ಪ್ರತಿಭಟನೆಗೆ ಸಚಿವ ಸಿಪಿ ಯೋಗೇಶ್ವರ್ ಖಡಕ್ ಎಚ್ಚರಿಕೆ

By ಕೋಲಾರ ಪ್ರತಿನಿಧಿ
|

ಕೋಲಾರ, ಜನವರಿ 26: ಭಾರತದಾದ್ಯಂತ ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ಪ್ರತಿಭಟಿಸುತ್ತಿದ್ದಾರೆ. ಅದೇ ರೀತಿ ಕರ್ನಾಟಕದ ಬೆಂಗಳೂರಿನಲ್ಲಿಯೂ ಗಣರಾಜ್ಯ ದಿನದಂದು ಬೃಹತ್ ಟ್ರಾಕ್ಟರ್ ಪರೇಡ್ ನಡೆಸಲಾಗುತ್ತಿದೆ.

ಬೆಂಗಳೂರಿನಲ್ಲಿ ರೈತರ ಪ್ರತಿಭಟನಾ ಮೆರವಣಿಗೆ ಹಿನ್ನೆಲೆ, ಕೋಲಾರದಲ್ಲಿ ಸಚಿವ ಸಿಪಿ ಯೋಗೇಶ್ವರ್ ಹೇಳಿಕೆ ನೀಡಿದ್ದು, ಭದ್ರತೆ ದೃಷ್ಟಿಯಿಂದ ಪೋಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಎಚ್ಚರಿಸಿದ್ದಾರೆ.

ಗಣರಾಜ್ಯೋತ್ಸವದ ದಿನ ರೈತರ ಪ್ರತಿಭಟನೆ ದುರದೃಷ್ಟಕರ; ಹೆಬ್ಬಾರ್ಗಣರಾಜ್ಯೋತ್ಸವದ ದಿನ ರೈತರ ಪ್ರತಿಭಟನೆ ದುರದೃಷ್ಟಕರ; ಹೆಬ್ಬಾರ್

ಬೆಂಗಳೂರಲ್ಲಿ ಟ್ರಾಕ್ಟರ್ ಮೆರವಣಿಗೆ ಮಾಡಿದರೆ ಟ್ರಾಫಿಕ್ ಜಾಮ್ ಉಂಟಾಗುತ್ತದೆ. ಟ್ರಾಫಿಕ್ ಜಾಮ್ ಆದರೆ ಎಲ್ಲರೂ ಸರ್ಕಾರವನ್ನು ಹೊಣೆ ಮಾಡುತ್ತಾರೆ ಎಂದು ಹೇಳಿದರು.

ಟ್ರಾಕ್ಟರ್ ವಾಹನವು ತನ್ನ ಪರಿಮಿತಯಲ್ಲೇ ಅದು ಓಡಾಡಬೇಕು ಎಂದು ಕೋಲಾರದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಂತರ ಸಚಿವ ಸಿಪಿ ಯೋಗೇಶ್ವರ್ ಹೇಳಿಕೆ ನೀಡಿದರು.

ಕೋಲಾರ ಜಿಲ್ಲಾ ಉಸ್ತುವಾರಿ ಸ್ಥಾನ ಸಿಕ್ಕರೆ ನನಗೆ ಸಂತೋಷ, ಕೋಲಾರ, ರಾಮನಗರ ಆದರೇನು? ಅದು ನಮ್ಮ ಕರ್ನಾಟಕ ರಾಜ್ಯ ಅಲ್ಲವೇ? ಎಂದು ಪ್ರಶ್ನಿಸಿದರು.

72ನೇ ಗಣರಾಜ್ಯೋತ್ಸವ ಸಂಭ್ರಮ ವಿಶೇಷ ಪುಟ

ಸೋಮವಾರ ಸಂಜೆ ಸಿಎಂ ಯಡಿಯೂರಪ್ಪ ನನ್ನ ಜೊತೆಗೆ ಚರ್ಚೆ ನಡೆಸಿದ್ದಾರೆ. ಖಾತೆ ಬದಲಾವಣೆ ಸಂಬಂಧ ಚರ್ಚೆ ಮಾಡಿದರು. ಆಡಳಿತಾತ್ಮಕ ದೃಷ್ಟಿಯಿಂದ ಬದಲಾವಣೆ ಹಿನ್ನೆಲೆಯಲ್ಲಿ ಸಚಿವ ಖಾತೆ ಬದಲಾವಣೆಯಾಗುತ್ತದೆ ಎಂದಿದ್ದಾರೆ. ಇದಕ್ಕೆ ಸಿಎಂ ಯಡಿಯೂರಪ್ಪ ಅವರ ನಿರ್ಧಾರಕ್ಕೆ ನನ್ನ ಬೆಂಬಲವಿದೆ ಎಂದು ಸಿಪಿ ಯೋಗೇಶ್ವರ್ ತಿಳಿಸಿದರು.

ಎಂಎಲ್ಸಿ ಎಚ್.ವಿಶ್ವನಾಥ್ ಬಗ್ಗೆ ಮಾತನಾಡಲು ಸಚಿವ ಸಿಪಿ ಯೋಗೇಶ್ವರ್ ನಿರಾಕರಿಸಿದರು. ಅಸಂಬದ್ಧ ಹೇಳಿಕೆಗಳಿಗೆ ನಾನು ಉತ್ತರ ನೀಡುವುದಿಲ್ಲ ಎಂದು ಗಣರಾಜ್ಯೋತ್ಸವ ಕಾರ್ಯಕ್ರಮ ನಂತರ ತಿಳಿಸಿದರು.

   ಬೆಂಗಳೂರು: ನೆಲಮಂಗಲದಲ್ಲಿ ಅನ್ನದಾತರ ಬೃಹತ್ ಪ್ರೊಟೆಸ್ಟ್..! | Oneindia Kannada
   English summary
   Farmers are protesting against farm bills across India. Similarly, a huge tractor parade is being held on Republic Day in Bengaluru, Karnataka.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X