• search
  • Live TV
ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋಲಾರ ಜಿಲ್ಲೆಯಲ್ಲಿ ಕೈಗಾರಿಕಾಭಿವೃದ್ದಿಗೆ ಒತ್ತು: 6 ತಿಂಗಳ ಒಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಲು ಶೆಟ್ಟರ್ ಸೂಚನೆ

|

ಕೋಲಾರ ಆಗಸ್ಟ್‌ 29: ಚೆನ್ನೈ-ಬೆಂಗಳೂರು ಇಂಡಸ್ಟ್ರೀಯಲ್‌ ಕಾರಿಡಾರ್‌ ನ ಕೇಂದ್ರಭಾಗದಲ್ಲಿರುವ ಕೋಲಾರ ಜಿಲ್ಲೆಯಲ್ಲಿ ಕೈಗಾರಿಕಾಭಿವೃದ್ದಿಗೆ ರಾಜ್ಯ ಸರಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ ಶೆಟ್ಟರ್ ಶನಿವಾರ ತಿಳಿಸಿದರು.

ಕೋಲಾರ ಜಿಲ್ಲೆಯ ಭಾರತ್‌ ಗೋಲ್ಡ್‌ ಮೈನ್ಸ್‌ ನ ಬಳಕೆ ಆಗದ 3,200 ಎಕರೆ ಪ್ರದೇಶ, ಬಿಇಎಂಲ್‌ ನ ಗುತ್ತಿಗೆ ಮುಗಿದಿರುವ 973 ಎಕರೆ ಜಾಗದ ಸ್ಥಳ ಪರಿಶೀಲನೆ ಯನ್ನು ಅವರು ಇಂದು ನಡೆಸಿದರು. ನಂತರ ಡೆಕ್ಕನ್‌ ಹೈಡ್ರಾಲಿಕ್ಸ್‌ ಪ್ರೇ ಲಿಮಿಟೆಡ್‌ ಗೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಮಂಚನಬೆಲೆ ಕೆರೆಗಳಿಗೂ ನೀರು ತುಂಬಿಸುವ ಯೋಜನೆ: ಸುಧಾಕರ್

ಕಳೆದ ಎರಡು ತಿಂಗಳಲ್ಲಿ ಕೋಲಾರ ಜಿಲ್ಲೆಗೆ ಎರಡನೇ ಬಾರಿ ಭೇಟಿ ನೀಡಿದ್ದೇನೆ. ನಿನ್ನೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೇಂದ್ರದ ಗಣಿ ಸಚಿವರಾದ ಪ್ರಹ್ಲಾದ್‌ ಜೋಶಿ ಅವರೊಂದಿಗೆ ಸುಧೀರ್ಘವಾದ ಚರ್ಚೆಯನ್ನು ನಡೆಸಿದ್ದೇವೆ. ಈ ಸಂಧರ್ಭದಲ್ಲಿ ನಾವು ಭಾರತ್‌ ಗೋಲ್ಡ್‌ ಮೈನ್ಸ್‌ ಲಿಮಿಟೆಡ್‌ ಪ್ರದೇಶದಲ್ಲಿ ಸುಮಾರು 3,200 ಎಕರೆ ಯಷ್ಟು ಜಾಗ ಬಳಕೆ ಆಗಿಲ್ಲ. ಈ ಜಾಗವನ್ನು ರಾಜ್ಯದ ಕೈಗಾರಿಕಾಭಿವೃದ್ದಿ ಪ್ರದೇಶದ ವತಿಯಿಂದ ಅಭಿವೃದ್ದಿ ಪಡಿಸುವ ಆಸಕ್ತಿಯನ್ನು ವ್ಯಕ್ತಪಡಿಸಿದ್ದೇವೆ. ಇದಕ್ಕೆ ಸರಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು 6 ತಿಂಗಳ ಒಳಗಾಗಿ ಸರ್ವೇ ಕಾರ್ಯವನ್ನು ಮುಗಿಸಲು ಎಂಈಸಿಎಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದರು.

ಬೆಂಗಳೂರು ನಗರ ಪ್ರದೇಶದಲ್ಲಿ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಕೈಗಾರಿಕೆಗಳ ಒತ್ತಡ ಹೆಚ್ಚಾಗಿದೆ. ಇದಕ್ಕೆ ಸೂಕ್ತ ಪರ್ಯಾಯ ಜಿಲ್ಲೆ ಎಂದರೆ ಅದು ಕೋಲಾರ ಜಿಲ್ಲೆ. ಕೋಲಾರ ಜಿಲ್ಲೆಯಲ್ಲಿ ಸ್ಥಳೀಯವಾಗಿ ಉದ್ಯೋಗಾವಕಾಶ ಹೆಚ್ಚಿಸಲು ಹಾಗೂ ಬಂಡವಾಳ ಹೂಡಿಕೆಗೆ ಉತ್ತಮ ಅವಕಾಶ ದೊರೆತಂತಾಗುತ್ತದೆ. ಸರ್ವೇಯ ನಂತರ ಇಲ್ಲಿ ನಿರ್ಮಿಸಬೇಕಾದ ಕ್ಲಸ್ಟರ್‌ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಇದೇ ವೇಳೆ, ಬಿಇಎಂಎಲ್‌ ಗೆ ಗುತ್ತಿಗೆ ಆಧಾರದಲ್ಲಿ ನೀಡಲಾಗಿರುವ 973 ಎಕರೆ ಭೂಮಿಯ ಗುತ್ತಿಗೆ ಅವಧಿಯು ಮುಗಿದಿದ್ದು, ಇದನ್ನು ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಗೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಸಲು ಮುಂದಿನ ತಿಂಗಳು ಕೇಂದ್ರ ರಕ್ಷಣಾ ಸಚಿವರನ್ನು ಭೇಟಿಯಾಗುವುದಾಗಿ ತಿಳಿಸಿದರು.

ರಾಜ್ಯದ ನೂತನ ಕೈಗಾರಿಕಾ ನೀತಿಯಲ್ಲಿ ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳನ್ನು ಅಭಿವೃದ್ದಿ ಪಡಿಸಲು ಹೆಚ್ಚಿನ ಒತ್ತು ನೀಡಿದ್ದೇವೆ. ಅಲ್ಲದೇ ದೇಶದ ಬೇರೆ ಯಾವುದೇ ರಾಜ್ಯಗಳೂ ನೀಡದೇ ಇರುವಂತಹ ಅನುಕೂಲತೆಗಳನ್ನು ನಮ್ಮ ನೀತಿಯಲ್ಲಿ ನೀಡಿದ್ದು, ರಾಜ್ಯವನ್ನು ದೇಶಧ ನಂ1 ಕೈಗಾರಿಕಾ ಸ್ನೇಹೀ ರಾಜ್ಯ ಮಾಡುವುದು ನಮ್ಮ ಗುರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ, ಲೋಕಸಭಾ ಸದಸ್ಯರಾದ ಎಸ್ ಮುನಿಸ್ವಾಮಿ, ಕೋಲಾರ ಜಿಲ್ಲಾಧಿಕಾರಿ, ಕೆಐಎಡಿಬಿ ಸಿಇಒ ಶಿವಶಂಕರ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ, ಶಾಸಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

English summary
the center of the Chennai-Bangalore Industrial Corridor, said Shri Jagadish Shettar, Minister of Industry and Commerce.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X