• search
 • Live TV
ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರೈತರ ಖಾತೆಗೆ ಇನ್ನೂ ಹಣ ಬಂದಿಲ್ಲ; ಬಿಸಿ ಮುಟ್ಟಿಸಿದ ಸಚಿವ ನಾರಾಯಣಗೌಡ

By ಕೋಲಾರ ಪ್ರತಿನಿಧಿ
|

ಕೋಲಾರ, ಸೆಪ್ಟೆಂಬರ್ 14: ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ರೈತರಿಗೆ ನೀಡಬೇಕಿದ್ದ ಹಣವನ್ನು ಇನ್ನೂ ರೈತರ ಖಾತೆಗೆ ಹಾಕಿಲ್ಲದ್ದಕ್ಕೆ ಕೋಲಾರದಲ್ಲಿ ತೋಟಗಾರಿಕಾ ಹಾಗೂ ರೇಷ್ಮೆ ಸಚಿವ ನಾರಾಯಣಗೌಡ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಕೋಲಾರದ ಶ್ರೀನಿವಾಸಪುರ ತಾಲ್ಲೂಕಿನ ಹೊಗಳಗೆರೆಯ ಮಾವು ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಅವರು, ಇಲಾಖೆಯಿಂದ ಬಿಡುಗಡೆ ಮಾಡಿದ್ದ ಹಣ ನೀಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

ವಾರದೊಳಗೆ ಬೆಳೆ ಸಮೀಕ್ಷೆ ಕಾರ್ಯ ಮುಗಿಸುವಂತೆ ಕೃಷಿ ಸಚಿವರ ಸೂಚನೆ

ರೈತರಿಂದ ದೂರುಗಳು ಕೇಳಿ ಬಂದ ಹಿನ್ನೆಲೆ ಅಧಿಕಾರಿಗಳ ವಿರುದ್ಧ ಗರಂ ಆದ ಅವರು, ಈಗಾಗಲೇ ಬೇರೆ ಜಿಲ್ಲೆಯಲ್ಲಿ ರೈತರ ಖಾತೆಗಳಿಗೆ ಹಣ ಹಾಕಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ನೀವೆಲ್ಲಾ ಮನೆಯಲ್ಲಿ ಮಲಗಿದ್ದಿರಾ ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

   ಗಡಿಯಲ್ಲಿ ಕೆಣಕಿದ್ದಕ್ಕೆ ತಕ್ಕ ಉತ್ತರಕೊಟ್ಟ ಭಾರತದ | Oneindia Kannada

   ರೈತರಿಂದ ದೂರುಗಳು ಬರುತ್ತಿದ್ದರೆ ನಮಗೆ ಮುಜುಗರವಾಗುತ್ತಿದೆ. ನಿಮ್ಮನ್ನು ಅಮಾನತು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಎಷ್ಟೋ ಜನ ಅಧಿಕಾರಿಗಳು ರೈತರನ್ನು ಹಾಳು ಮಾಡುತ್ತಿದ್ದು, ಐದಾರು ದಿನಗಳೊಳಗೆ ರೈತರ ಖಾತೆಗಳಿಗೆ ಹಣ ಜಮಾ ಮಾಡದಿದ್ದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಇನ್ನು ಸಚಿವರಿಗೆ ಉಸ್ತುವಾರಿ ಸಚಿವ ಎಚ್.ನಾಗೇಶ್, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ವೇಣುಗೋಪಾಲ್, ಸೇರಿದಂತೆ ಅಧಿಕಾರಿಗಳು ಸಾಥ್ ನೀಡಿದರು.

   English summary
   Horticulture and silk minister Narayana Gowda has warned officials to pay the relief amount to farmers
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X