ಕೋಲಾರ; ಅಪ್ರಾಪ್ತೆ ಮೇಲೆ ಅತ್ಯಾಚಾರ, ಅಪರಾಧಿಗೆ ಗಲ್ಲು ಶಿಕ್ಷೆ

ಕೋಲಾರ, ಜನವರಿ 17 : ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ದ 65 ವರ್ಷದ ವೃದ್ಧನಿಗೆ ಕೋಲಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. 2018ರ ಮೇ 1ರಂದು ಅತ್ಯಾಚಾರ ನಡೆಸಲಾಗಿತ್ತು.

ಶುಕ್ರವಾರ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ. ಎಸ್. ರೇಖಾ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಆದೇಶ ನೀಡಿದರು. ಸಂತ್ರಸ್ತೆ ಪರವಾಗಿ ಮುನಿಸ್ವಾಮಿ ಗೌಡ ವಾದ ಮಂಡಿಸಿದ್ದರು.

Minor Girl Rape Case Kolar district court ordered death sentence

ಅಪರಾಧಿಯನ್ನು ಕೋಲಾರ ತಾಲೂಕಿನ ಬೈರಂಡಹಳ್ಳಿ ನಿವಾಸಿ ವೆಂಕಟೇಶಪ್ಪ ಎಂದು ಗುರುತಿಸಲಾಗಿದೆ. 65 ವರ್ಷದ ವೆಂಕಟೇಶಪ್ಪ ವಿರುದ್ಧ ವೇಮಗಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ವೆಂಕಟೇಶಪ್ಪ ತಮ್ಮ ಗ್ರಾಮದ ಅಪ್ರಾಪ್ತ ಬಾಲಕಿಯನ್ನು 2018ರ ಮೇ 1ರಂದು ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದ. ಗ್ರಾಮಸ್ಥರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ನೀಡಿದೆ.

2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣದಂಡನೆ ಶಿಕ್ಷೆ ನೀಡಿದೆ. ಆದ್ದರಿಂದ, ಅಪರಾಧಿ ಈ ತೀರ್ಪನ್ನು ಉನ್ನತ ನ್ಯಾಯಾಲಯಗಳಲ್ಲಿ ಪ್ರಶ್ನೆ ಮಾಡುವ ಅವಕಾಶವೂ ಇದೆ.

ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಗಲ್ಲು ಶಿಕ್ಷೆ ಜಾರಿಗೆ ಎಷ್ಟು ಕಾನೂನು ತೊಡಕುಗಳಿವೆ ಎಂಬುದು ಸಹ ಸಾಮಾನ್ಯ ಜನರಿಗೂ ತಿಳಿಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+