ವರ್ತೂರು ಪ್ರಕಾಶ್ ಕಾಂಗ್ರೆಸ್ಗೆ; ಮುನಿಯಪ್ಪ ಹೇಳಿದ್ದೇನು?
ಕೋಲಾರ, ಫೆಬ್ರವರಿ 16; ಕಾಂಗ್ರೆಸ್ ಹಿರಿಯ ನಾಯಕ ಕೆ. ಎಚ್. ಮುನಿಯಪ್ಪ ಮಾಜಿ ಸಚಿವ ವರ್ತೂರು ಪ್ರಕಾಶ್ ವಿರುದ್ದ ಕಿಡಿ ಕಾರಿದ್ದಾರೆ. "ನಾನು ಕಾಂಗ್ರೆಸ್ ಸೇರುತ್ತೇನೆ, ಈ ಕುರಿತು ಮಾತುಕತೆಗಳು ನಡೆದಿವೆ" ಎಂದು ವರ್ತೂರು ಪ್ರಕಾಶ್ ಹೇಳಿದ್ದರು.
ಮಂಗಳವಾರ ಕೋಲಾರದ ಪತ್ರಕರ್ತರ ಭವನದಲ್ಲಿ ಮಾತನಾಡಿದ ಕೆ. ಎಚ್. ಮುನಿಯಪ್ಪ, "ವರ್ತೂರು ಪ್ರಕಾಶ್ಗೂ ಕಾಂಗ್ರೆಸ್ಗೂ ಯಾವುದೇ ಸಂಬಂಧವಿಲ್ಲ. ಜವಾಬ್ದಾರಿ ಮರೆತು ವರ್ತೂರು ಪ್ರಕಾಶ್ ಮಾತನಾಡಬಾರದು" ಎಂದರು.
"ಇತ್ತೀಚೆಗೆ ಕೋಲಾರದಲ್ಲಿ ಕಾಂಗ್ರೆಸ್ ಇಲ್ಲ ಎಂದು ವರ್ತೂರು ಪ್ರಕಾಶ್ ಹೇಳಿದ್ದರು. ಅವರು ಕಾಂಗ್ರೆಸ್ ಪಕ್ಷ ಸೇರುವ ಯಾವುದೇ ಪ್ರಸ್ತಾಪವೂ ಇಲ್ಲ. ಕಾಂಗ್ರೆಸ್ಗೆ ಅವರನ್ನು ಸೇರಿಸಲ್ಲ ಎಂದು ರಾಜ್ಯ ಸಮಿತಿ ಸ್ಪಷ್ಟನೆ ನೀಡಿದೆ" ಎಂದು ಕೆ. ಎಚ್. ಮುನಿಯಪ್ಪ ಹೇಳಿದರು.

ವರ್ತೂರು ಪ್ರಕಾಶ್ ಹೇಳಿದ್ದೇನು?: ಸೋಮವಾರ ಕೋಲಾರದಲ್ಲಿ ಮಾತನಾಡಿದ್ದ ವರ್ತೂರು ಪ್ರಕಾಶ್, "ನನಗೆ ಕಾಂಗ್ರೆಸ್ ಸೇರಲು ಆಸೆಯಾಗಿದೆ. ಈಗಾಗಲೇ ಕಾಂಗ್ರೆಸ್ ಮುಖಂಡರ ಜೊತೆ ಮಾತುಕತೆ ನಡೆಯುತ್ತಿದೆ" ಎಂದು ಹೇಳಿದ್ದರು.
"ನಾನು ಸ್ಥಾಪನೆ ಮಾಡಿದ ನಮ್ಮ ಕಾಂಗ್ರೆಸ್ ಈಗ ಇಲ್ಲ. ನನ್ನ ನಡೆ ಏನಿದ್ದರೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕಡೆ. ನನ್ನ ಕಾರ್ಯಕರ್ತರ ಒತ್ತಾಯದಿಂದ ಕಾಂಗ್ರೆಸ್ ಬೇಕು ಎಂದು ಹೇಳುತ್ತಿದ್ದೇನೆ. ಇನ್ನು 26 ತಿಂಗಳ ಬಳಿಕ ಚುನಾವಣೆ ಬರಲಿದೆ. ನಾನು ಏನಾದರೂ ಮಾಡಿ ಶಾಸಕ ಆಗಬೇಕು" ಎಂದು ತಿಳಿಸಿದ್ದರು.
ಮುನಿಯಪ್ಪ ಭೇಟಿ; ವರ್ತೂರು ಪ್ರಕಾಶ್ ಅವರು, "ಇನ್ನು ಮೂರು ದಿನಗಳಲ್ಲಿ ಕೆ. ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡುತ್ತೇನೆ. ಕಾಂಗ್ರೆಸ್ಗೆ ಬೇಡ ಅಂತ ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಹಾಗೂ ಕೆ. ಎಚ್. ಮುನಿಯಪ್ಪ ಹೇಳಿಕೆ ನೀಡಿದ್ದಾರೆ" ಎಂದು ಹೇಳಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications