Accident News: ಕೋಲಾರ ಜಿಲ್ಲೆಯಲ್ಲಿ ಖಾಸಗಿ ಪಲ್ಟಿಯಾಗಿ ಓರ್ವ ಮಹಿಳೆ ಸಾವು, ಹಲವರಿಗೆ ಗಂಭೀರ ಗಾಯ
Accident News: ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ಇದೀಗ ಖಾಸಗಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಮಂಚಿನೀಳ್ಳಕೋಟೆ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಹರಿತ ಟ್ರಾವೆಲ್ಸ್ ಖಾಸಗಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಆಂಧ್ರಪ್ರದೇಶದ ಪೊದುಟೂರು ಮೂಲದ ಅನಿತಾ (58) ಎಂದು ಗುರುತಿಸಲಾಗಿದೆ. ಇನ್ನೂ ಈ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗೆಂದು ಮದನಪಲ್ಲಿ, ಶ್ರೀನಿವಾಸಪುರ, ಕೋಲಾರ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಬಸ್ ಆಂದ್ರಪ್ರದೇಶದ ಬದ್ವೆಲ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ರಾಯಲ್ಪಾಡು ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಾರುಗಳ ನಡುವೆ ಭೀಕರ ಅಪಘಾತ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಆಂಧ್ರದ ಎಮ್ಮಿಗನೂರು ತಾಲೂಕಿನ ಕೋಟೆಕಲ್ ಗ್ರಾಮದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕರ್ನಾಟಕ ಮೂಲದ 5 ಜನ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಒಂದೇ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೋಲಾರದ ಚಿಕ್ಕಹೊಸಳ್ಳಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಇವರು ಮಂತ್ರಾಲಯದಿಂದ ರಾಘವೇಂದ್ರ ಸ್ವಾಮಿ ದರ್ಶನ ಮುಗಿಸಿಕೊಂಡು ಊರಿನ ಕಡೆಗೆ ವಾಪಸ್ ಆಗುವಾಗ ಈ ಅಪಘಾತ ಸಂಭವಿಸಿದೆ. ಮತ್ತೊಂದು ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸ್ವಿಫ್ಟ್ ಡಿಜೈರ್‌ನಲ್ಲಿದ್ದ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಫಾರ್ಚೂನರ್ ಕಾರ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರಲ್ಲಿ ಮೂವರು ವಯಸ್ಕರು ಮತ್ತು ಇಬ್ಬರು ಮಕ್ಕಳು ಎಂದು ತಿಳಿದುಬಂದಿದೆ.
ಅಡೋನಿ ಕಡೆಗೆ ಪ್ರಯಾಣಿಸುತ್ತಿದ್ದ ಫಾರ್ಚೂನರ್ ಅತಿ ವೇಗದಲ್ಲಿ ಚಲಿಸುತ್ತಿದ್ದ ಹಿನ್ನೆಲೆ ಎದುರುಗಡೆ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಅಪಘಾತದಲ್ಲಿ ಮೃತರು ಕರ್ನಾಟಕದವರಾಗಿದ್ದು, ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಹೋಗಿ ವಾಪಾಸ್ ಆಗುತ್ತಿದ್ದರು, ಬಗ್ಗೆ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.












Click it and Unblock the Notifications