• search
  • Live TV
ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋಲಾರದಲ್ಲಿ ಸರಣಿ ಅಪಘಾತ; ಒಬ್ಬ ಸಾವು- 8 ವಾಹನಗಳು ಜಖಂ

By ಕೋಲಾರ ಪ್ರತಿನಿಧಿ
|

ಕೋಲಾರ, ಜುಲೈ 14: ಕೋಲಾರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿ, ಎಂಟಕ್ಕೂ ಹೆಚ್ಚು ವಾಹನಗಳು ಜಖಂ ಆಗಿವೆ.

ನಿನ್ನೆ ರಾತ್ರಿ ವೇಳೆಗೆ ಈ ಅಪಘಾತ ಸಂಭವಿಸಿದ್ದು, ಹಿಂಬಂದಿಯಿಂದ ಬೈಕ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸವಾರ ಸಾವನ್ನಪ್ಪಿದ್ದಾನೆ. ಟ್ರಾಕ್ಟರ್ ಗೆ ಹಿಂಬದಿಯಲ್ಲಿ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ.

ವಿಡಿಯೋ; ಚಾಲಕನಿಲ್ಲದೇ ಓಡಿದ ಕಾರು, ಅನಾಹುತ ತಪ್ಪಿಸಿದ ಬೈಕ್ ಸವಾರ

ಬೈಕ್ ಗೆ ಡಿಕ್ಕಿ ತಪ್ಪಿಸಲು ಹೋಗಿ ಹಿಂಬದಿಯಲ್ಲಿ ಕ್ಯಾಂಟರ್, ಬೊಲೆರೊ ಜೀಪ್, ಎರಡು ಕಾರುಗಳ ಮಧ್ಯೆ ಡಿಕ್ಕಿಯಾಗಿದ್ದು, ಒಟ್ಟು ಎಂಟು ವಾಹನಗಳು ಜಖಂ ಆಗಿವೆ. ಸರಣಿ ಅಪಘಾತಕ್ಕೆ ಕಾರಣವಾದ ಟ್ರಾಕ್ಟರ್ ಚಾಲಕ ಟ್ರ್ಯಾಕ್ಟರ್ ಬಿಟ್ಟು, ಇಂಜಿನ್ ಸಮೇತ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಕೋಲಾರ ಸಂಚಾರಿ, ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸರಣಿ ಅಪಘಾತದಿಂದಾಗಿ ಕೆಲಹೊತ್ತು ಹೈವೇಯಲ್ಲಿ ವಾಹನ ದಟ್ಟಣೆ ಉಂಟಾಗಿತ್ತು.

English summary
A serial accident on the National Highway in the outskirts of Kolar, killed one person and eight vehicles damaged
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X