• search
 • Live TV
ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಿಡಿ ಸಂತ್ರಸ್ಥ ಯುವತಿಗೆ ರಕ್ಷಣೆ ನೀಡುವುದು ನಮ್ಮ ಕರ್ತವ್ಯ: ಮಾಜಿ ಸ್ಪೀಕರ್ ರಮೇಶ್ ಕುಮಾರ್

By ಕೋಲಾರ ಪ್ರತಿನಿಧಿ
|

ಕೋಲಾರ, ಮಾರ್ಚ್ 25: ಸಿಡಿ ಸಂತ್ರಸ್ಥೆ ಅಜ್ಞಾತ ಸ್ಥಳದಿಂದ ರಕ್ಷಣೆ ಕೋರಿದ್ದು, ಸಂತ್ರಸ್ಥೆ ನೆರವಿಗೆ ನಾವಿದ್ದೇವೆ (ಕಾಂಗ್ರೆಸ್) ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೋಲಾರದಲ್ಲಿ ಹೇಳಿದರು.

ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀನಿವಾಸಪುರ ತಾಲ್ಲೂಕಿನ ಅಧಿಕಾರಿಗಳ ಜೊತೆ ಕರೆದಿದ್ದ ಸಭೆಗೂ ಮುನ್ನ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾಧ್ಯಮದ ಜೊತೆ ಮಾತನಾಡಿದರು. ಅಜ್ಞಾತ ಸ್ಥಳದಿಂದ ರಕ್ಷಣೆ ಕೋರಿ ಪಾಪ ಆಕೆ ಮನವಿ ಮಾಡಿದ್ದಾಳೆ. ಸಾರ್ವಜನಿಕ ಜೀವನದಲ್ಲಿರುವ ನಾವು, ಮಾನವೀಯ ದೃಷ್ಟಿಯಿಂದ ಆಕೆ ಹಾಗೂ ಆಕೆಯ ಕುಟುಂಬಕ್ಕೆ ರಕ್ಷಣೆ ನೀಡುವುದು ನಮ್ಮ ಕರ್ತವ್ಯ ಎಂದರು.

ಸಿಡಿ ಪ್ರಕರಣ; ಸಂತ್ರಸ್ತ ಯುವತಿ 2ನೇ ವಿಡಿಯೋ ಮೂಲಕ ಮತ್ತೆ ಪ್ರತ್ಯಕ್ಷ

ಈಗಾಗಲೇ ವಿಧಾನಸಭೆ ಅಧಿವೇಶನದಲ್ಲಿ ಸಂತ್ರಸ್ಥೆಯ ರಕ್ಷಣೆ ಕುರಿತು ಮಾತನಾಡಿದ್ದು, ಖಂಡಿತಾ ಆಕೆಗೆ ರಕ್ಷಣೆ ಒದಗಿಸುತ್ತೇವೆ. ಆಕೆ ಹೆದರಬೇಕಾಗಿಲ್ಲ, ನಮ್ಮದು ಅನಾಗರಿಕ ಸಮಾಜವೇನಲ್ಲ. ಒಂದು ಹೆಣ್ಣು ಮಗಳು ಸಂಕಷ್ಟದಲ್ಲಿದ್ದು, ಸಹಾಯ ಕೇಳಿದ್ದಾಳೆ ಅಂದರೆ ಆಕೆಯ ನೆರವಿಗೆ ನಾವು ನಿಲ್ಲುತ್ತೇವೆ ಎಂದು ತಿಳಿಸಿದರು.

ಸದಾ ಸಾರ್ವಜನಿಕ ಜೀವನದಲ್ಲಿರುವ ನಾವು ಯಾರೇ ಸಹಾಯ ಕೇಳಿದರೂ ಅವರ ಸಹಾಯಕ್ಕೆ ನಿಲ್ಲುತ್ತೇವೆ. ಎಸ್‍ಐಟಿ ಮುಂದೆ ಹೇಳಿಕೆ ನೀಡಲು ಒತ್ತಡ ಇದ್ದರೆ, ನ್ಯಾಯಾಧೀಶರ ಎದುರು ಹೇಳಿಕೆ ನೀಡಲಿ. ಆಗ ಅದು ಅಧಿಕೃತವಾಗುತ್ತದೆ ಎಂದು ಯುವತಿಗೆ ಸಲಹೆ ನೀಡಿದರು.

ಸದ್ಯ ಆಕೆ ಅಜ್ಞಾತ ಸ್ಥಳದಲ್ಲಿದ್ದು, ಧೈರ್ಯವಾಗಿ ಬಂದು ಹೇಳಿಕೆ ನೀಡಲಿ. ನನಗೂ ಒಂದು ಹೆಣ್ಣು ಮಗಳಿದ್ದಾಳೆ. ಆಕೆಗೆ ಸಂಕಷ್ಟ ಎದುರಾದಾಗ ನೆರವಿಗೆ ನಿಲ್ಲಬೇಕಲ್ಲವೇ? ಸಿಡಿ ಯುವತಿಗೆ ವಿಶೇಷ ರಕ್ಷಣೆ ನೀಡುವುದಕ್ಕೆ ನಾನು ಗೃಹ ಸಚಿವನಲ್ಲ. ನಮ್ಮ ಕೆಲಸವನ್ನು ಶ್ರದ್ಧೆ ಹಾಗೂ ನಿಷ್ಠೆಯಿಂದ ಮಾಡುತ್ತೇವೆ, ಗೌರವಯುತವಾಗಿ ನಡೆದುಕೊಳ್ಳುತ್ತೇವೆ ಎಂದು ಶ್ರೀನಿವಾಸಪುರ ಕ್ಷೇತ್ರದ ಶಾಸಕರೂ ಆಗಿರುವ ರಮೇಶ್ ಕುಮಾರ್ ಹೇಳಿದರು.

2 ನೇ ವಿಡಿಯೋ ಬಿಡುಗಡೆ ಆಗುವಷ್ಟರಲ್ಲಿ ಸಿಡಿ ಗರ್ಲ್ ಹೇರ್ ಕಟ್ ಚೇಂಜ್ !

   ದೂರು ಬಂದ ಕೊಟ್ಮೇಲೆ ಎಸ್ಐಟಿ ನೋಡಿಕೊಳ್ತಿದೆ :ಗೃಹಸಚಿವ ಬೊಮ್ಮಾಯಿ | Oneindia Kannada

   ಇದೇ ವೇಳೆ ಕಾಂಗ್ರೆಸ್ಸಿನಲ್ಲಿ ನಿಮ್ಮ ಪ್ರಭಾವ ಹೆಚ್ಚಾಗುತ್ತಿದೆಯಲ್ಲಾ ಅನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ 71 ವರ್ಷ ವಯಸ್ಸಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನನ್ನ ತಮ್ಮ ಇದ್ದ ಹಾಗೆ, ಸಿದ್ದರಾಮಯ್ಯ ನನ್ನ ನಾಯಕರು. ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಟ ಮಾಡುತ್ತಿದ್ದೇವೆ ಎಂದರು.

   English summary
   The CD victim lady is seeking protection from in an unknown location and that ours duty of helping the victim lady, Former Speaker Ramesh Kumar said in Kolar.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X