ಮಹದಾಯಿ ವಿಚಾರದಲ್ಲಿ ಬಿಜೆಪಿ ರಾಜಕೀಯ ಲಾಭಕ್ಕೆ ಮುಂದಾಗಿದೆ: ಪರಮೇಶ್ವರ್

Posted By: Nayana
Subscribe to Oneindia Kannada

ಕೋಲಾರ, ಡಿಸೆಂಬರ್ 21 : ಮಹದಾಯಿ ಜಲ ವಿವಾದವು ಹಲವು ವರ್ಷಗಳದು. ಈ ವಿಚಾರದಲ್ಲಿ ಬಿಜೆಪಿ ಮುಖಂಡರು ರಾಜಕೀಯ ಲಾಭಕ್ಕೆ ಮುಂದಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ.

ಕೋಲಾರದ ಮುಳಬಾಗಿಲು ತಾಲೂಕಿನ ಕುರುಮಲೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಹೋರಾಟದಲ್ಲಿ ರೈತರು ಜೈಲಿಗೆ ಹೋಗಿ ಬಂದಿದ್ದಾರೆ. ವಿವಾದ ಇತ್ಯರ್ಥಪಡಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ ಎಂದು ಹೇಳಿದರು.

Paremeshwar alleges that BJP politicing Mahadayi issue

ರಾಜ್ಯ ಬಿಜೆಪಿ ಮುಖಂಡರಿಗೆ ರೈತಪರ ಕಾಳಜಿ ಇದ್ದಿದ್ದರೆ ಈ ವಿಚಾರದಲ್ಲಿ ಕೇಂದ್ರದ ಮಧ್ಯಪ್ರವೇಶಕ್ಕೆ ಒತ್ತಾಯಿಸುತ್ತಿದ್ದರು. ಮಹಾದಾಯಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಯಾವಾಗಲೂ ರೈತರ ಪರವಾಗಿದೆ ಎಂದರು. ಪಕ್ಷದಲ್ಲಿ ನನ್ನನ್ನು ಯಾರು ಕಡೆಗಣಿಸುತ್ತಿಲ್ಲ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಎರಡನೇ ಹಂತದ ಪ್ರಚಾರ, ಕಾಂಗ್ರೆಸ್ ನಡಿಗೆ ವಿಜಯದ ಕಡೆಗೆ, ನಾಲ್ಕೂವರೆ ವರ್ಷದ ಸಾಧನೆ 2018 ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
KPCC President Dr. G Parmeshwar alleges that BJP politicing Mahadayi issue. Because of election now BJP showing it's concerns. But there were no reaction from Central Government regarding state letters.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ