ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಾಕ್ ಡೌನ್ ನಡುವೆ ಮದ್ಯ ಸಿಗುತ್ತಿಲ್ಲ ಎಂದು ಕೋಲಾರದಲ್ಲಿ ವ್ಯಕ್ತಿ ಆತ್ಮಹತ್ಯೆ

By ಕೋಲಾರ ಪ್ರತಿನಿಧಿ
|
Google Oneindia Kannada News

ಕೋಲಾರ, ಮಾರ್ಚ್ 30: ಕೊರೊನಾ ವಿರುದ್ಧ ಹೋರಾಡಲು ದೇಶಾದ್ಯಂತ ಲಾಕ್ ಡೌನ್ ವಿಧಿಸಲಾಗಿದೆ. ಅವಶ್ಯಕ ವಸ್ತುಗಳನ್ನು ಹೊರತುಪಡಿಸಿ ಇನ್ನೆಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.

ಆದರೆ ಈ ಸಮಯದಲ್ಲಿ ಕುಡಿಯಲು ಮದ್ಯ ಸಿಗುತ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರೂ ಇದ್ದಾರೆ. ಮೊದಲು ಕೇರಳದಲ್ಲಿ ಮದ್ಯ ಸಿಗದೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತರ ಹುಬ್ಬಳ್ಳಿಯಲ್ಲೂ ಮದ್ಯ ಸಿಗದ ಕಾರಣಕ್ಕೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು..

ಮದ್ಯ ಸಿಗದ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ವ್ಯಕ್ತಿ ಆತ್ಮಹತ್ಯೆಮದ್ಯ ಸಿಗದ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ವ್ಯಕ್ತಿ ಆತ್ಮಹತ್ಯೆ

ಇದೀಗ ಕೋಲಾರದಲ್ಲೂ, ಇದೇ ವಿಷಯಕ್ಕೆ ಎರಡು ಪ್ರಕರಣಗಳು ನಡೆದಿವೆ. ಕುಡಿಯಲು ಮದ್ಯ ಸಿಗುತ್ತಿಲ್ಲ ಎಂದು ಆನಂದ್ (30) ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಶಂಕರಪ್ಪ (36) ಎಂಬಾತನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಕೆಲ ದಿನಗಳಿಂದ ಕುಡಿಯಲು ಮದ್ಯ ಸಿಗುತ್ತಿಲ್ಲ ಎಂದು ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಡೊಡ್ಡೂರು ಕರಪ್ಪನಹಳ್ಳಿ ಗ್ರಾಮದಲ್ಲಿ ಆನಂದ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Person Committed Suicide For Not Getting Alcohol In Kolar

ಗಾರೆ ಕೆಲಸ ಮಾಡಿಕೊಂಡಿದ್ದ ಈ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಮದ್ಯ ಸಿಗದೆ ಪರದಾಡಿದ್ದನು ಎನ್ನಲಾಗಿದೆ. ಬೆಮೆಲ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕುಡಿಯುಲು ಮದ್ಯ ಸಿಗದ ಹಿನ್ನೆಲೆ ಕೋಲಾರದ ಮುಳಬಾಗಿಲು ತಾಲೂಕಿನ ಮಲ್ಲೆಕುಪ್ಪ ಗ್ರಾಮದ ಶಂಕರಪ್ಪ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮನೆಯಲ್ಲಿದ್ದ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಈತನನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

English summary
Person committed suicide for not getting alcohol in kolar and more person attempted suicide
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X