ಕೋಲಾರದಲ್ಲಿ ಕ್ವಾರಂಟೈನ್ ನಲ್ಲಿಟ್ಟಿದ್ದಕ್ಕೆ ಪೆಟ್ರೋಲ್ ಬಾಟಲಿ ಹಿಡಿದು ಆತ್ಮಹತ್ಯೆ ಬೆದರಿಕೆ

ಕೋಲಾರ, ಏಪ್ರಿಲ್ 22: ಕಾರಣವಿಲ್ಲದೇ ಸುಮ್ಮನೆ ಕ್ವಾರಂಟೈನ್ ನಲ್ಲಿಟ್ಟಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತೇಹಳ್ಳಿ ಗ್ರಾಮದಲ್ಲಿ ನಡೆದಿದೆ.

Recommended Video

      ಅಪಘಾತದಲ್ಲಿ ಮೃತಪಟ್ಟ ಪತ್ರಕರ್ತನ ಮನೆಗೆ ಭೇಟಿ ನೀಡಿದ ಕುಮಾರಸ್ವಾಮಿ | HD Kumaraswamy

      ಇಂದು ಪೆಟ್ರೋಲ್ ತುಂಬಿದ ಬಾಟಲಿಯೊಂದಿಗೆ ಗ್ರಾಮ ಪಂಚಾಯತಿ ಕಚೇರಿ ಪ್ರವೇಶಿಸಿ ಒಳಗಿನಿಂದ ಬೀಗ ಜಡಿದು, ತನಗೆ ಕೊರೊನಾ ಸೋಂಕಿತರ ಸಂಪರ್ಕ ಇಲ್ಲದಿದ್ದರೂ ಸುಮ್ಮನೆ ಕ್ವಾರಂಟೈನ್ ಮಾಡಲಾಗಿದೆ, ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ.

      ಜೊತೆಗೆ ತನ್ನ ಫೋಟೊವನ್ನು ಕೊರೊನಾ ಸೋಂಕಿತ ಎಂಬಂತೆ ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ ಎಂದು ಬೇಸರಗೊಂಡು, ತನ್ನನ್ನು ಎರಡು ದಿನದಿಂದ ಹೋಂ ಕ್ವಾರಂಟೈನ್ ನಲ್ಲಿ ಇಟ್ಟಿದ್ದಾರೆ ಎಂದು ಗ್ರಾಮ ಪಂಚಾಯತಿ ಪಿಡಿಓ ಹಾಗೂ ಸದಸ್ಯ ಲಕ್ಷ್ಮೀನಾರಾಯಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

      Person Threat Of Suicide In Kolar For Keeping Him In Quarantine

      ಮನನೊಂದ ವ್ಯಕ್ತಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಮನವೊಲಿಸುವ ಕಾರ್ಯ ನಡೆದಿದೆ. ಸ್ಥಳಕ್ಕೆ ಮಾಲೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+