ಬಸ್ ಡಿಕ್ಕಿ ರಭಸಕ್ಕೆ ಬೈಕ್‌ಗೆ ಬೆಂಕಿ: ಸುಟ್ಟು ಕರಕಲಾದ ಬೈಕ್ ಸವಾರ
ಕೋಲಾರ, ಡಿಸೆಂಬರ್ 26: ಖಾಸಗಿ ಬಸ್ ಡಿಕ್ಕಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ಬುಧವಾರ ನಡೆದಿದೆ.
ಕೋಲಾರದ ಬಂಗಾರಪೇಟೆ ಹೊರವಲಯದಲ್ಲಿ ಘಟನೆ ಸಂಭವಿಸಿದೆ. ನೀರಜ್(20) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳಗ್ಗೆ ನೀರಜ್ ಆತನ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ, ಆ ವೇಳೆ ಬಂದ ಖಾಸಗಿ ಬಸ್‌ವೊಂದು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಬೈಕ್‌ಗೆ ಬೆಂಕಿ ಹೊತ್ತಿಕೊಂಡು ಸಂರ್ಪೂವಾಗಿ ಬೈಕ್‌ನೊಂದಿಗೆ ನೀರಜ್ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾನೆ.

ಆದರೆ ನೀರಜ್ ಸ್ನೇಹಿತ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾನೆ. ಘಟನೆ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.












Click it and Unblock the Notifications