ಕೋಲಾರ : ಸರ್ಕಾರಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ

ಕೋಲಾರ, ಆಗಸ್ಟ್ 29 : ಬಂಗಾರಪೇಟೆಯ ಸರ್ಕಾರಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಲು ಪ್ರಯತ್ನಿಸಲಾಗಿದೆ. ಪ್ರಕರಣದ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿಗಾಗಿ ಹುಡುಕಾಟ ನಡೆದಿದೆ.

ಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಅಡುಗೆ ಸಹಾಯಕ ನಾರಾಯಣಪ್ಪ ಅತ್ಯಾಚಾರ ನಡೆಸಲು ಯತ್ನಿಸಿದ್ದಾನೆ. ಕಳೆದ ಕೆಲವು ದಿನಗಳಿಂದ ಅತ್ಯಾಚಾರ ನಡೆಸಲು ಯತ್ನಿಸುತ್ತಿದ್ದು, ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ.

Rape attempt on minor girl at govt hostel Bangarpet, two arrested

ಬಂಗಾರಪೇಟೆ ಹಾಸ್ಟೆಲ್ ವಾರ್ಡನ್ ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಆಗಸ್ಟ್ 16ರಂದು ಅತ್ಯಾಚಾರಕ್ಕೆ ಯತ್ನಿಸಿದ ಬಳಿಕ ನಾರಾಯಣಪ್ಪ ತಲೆಮರೆಸಿಕೊಂಡಿದ್ದಾನೆ. ವಿದ್ಯಾರ್ಥಿನಿ ಪೋಷಕರು ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗೂ ದೂರು ಕೊಟ್ಟಿದ್ದಾರೆ.

ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಪ್ರಮುಖ ಆರೋಪಿ ನಾರಾಯಣಪ್ಪ ತಲೆಮರೆಸಿಕೊಂಡಿದ್ದಾರೆ. ಹಾಸ್ಟೆಲ್‌ನಲ್ಲಿ ಅಕ್ರಮವಾಗಿ ಆಕೆಯನ್ನು ಕೂಡಿಹಾಕಲಾಗಿತ್ತು ಎಂದು ದೂರಿನಲ್ಲಿ ವಿದ್ಯಾರ್ಥಿನಿ ತಿಳಿಸಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+