• search
 • Live TV
ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಕ್ರಿಯ ರಾಜಕೀಯದಿಂದ ನಿವೃತ್ತಿ ವಿಚಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟನೆ

|
Google Oneindia Kannada News

ಕೋಲಾರ, ಮೇ 19: ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುವ ವಿಚಾರದಲ್ಲಿ, ಮಾಜಿ ಸ್ಪೀಕರ್, ಶ್ರೀನಿವಾಸಪುರ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಸ್ಪಷ್ಟನೆಯನ್ನು ನೀಡಿದ್ದಾರೆ.

   ಈ ಏರಿಯಾಗಳನ್ನು ಹೊರತುಪಡಿಸಿ ಮಿಕ್ಕ ಎಲ್ಲಾ ಏರಿಯಾಗಳಲ್ಲೂ BMTC ಬಸ್ ಇರುತ್ತೆ | Oneindia Kannada

   ನಗರದಲ್ಲಿ ಮಾತನಾಡುತ್ತಿದ್ದ ರಮೇಶ್ ಕುಮಾರ್, "ರಾಜಕಾರಣಿಗಳು ಕೊಟ್ಟ ಮಾತಿನಂತೆ ನಡೆದುಕೊಳ್ಳುವುದಿಲ್ಲ. ಹಾಗೇ ನಡೆದುಕೊಂಡರೆ, ಶ್ರೀರಾಮಚಂದ್ರನ ರೀತಿ ಆಗುತ್ತಾರೆ" ಎಂದು ಹೇಳಿದ್ದಾರೆ.

   "ಕಳೆದ ಅಸೆಂಬ್ಲಿ ಚುನಾವಣೆಯ ವೇಳೆ, ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದು ನಿಜ. ಆದರೆ, ಸದ್ಯ ರಾಜಕೀಯ ನಿವೃತ್ತಿಯ ಬಗ್ಗೆ ಏನನ್ನೂ ತೀರ್ಮಾನ ಮಾಡಿಲ್ಲ"ಎಂದು ರಮೇಶ್ ಕುಮಾರ್ ಸ್ಪಷ್ಟನೆಯನ್ನು ನೀಡಿದ್ದಾರೆ.

   20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್: ಕೃಷಿ ಕ್ಷೇತ್ರಕ್ಕೆ ಮಹತ್ವದ ಘೋಷಣೆ.!20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್: ಕೃಷಿ ಕ್ಷೇತ್ರಕ್ಕೆ ಮಹತ್ವದ ಘೋಷಣೆ.!

   "ಶಾಸಕನಾಗಿ ನನ್ನ ಅವಧಿ ಇನ್ನೂ ಮೂರು ವರ್ಷವಿದೆ. ನಿವೃತ್ತಿ ವಿಚಾರದ ಬಗ್ಗೆ ಆಮೇಲೆ ನೋಡಿಕೊಳ್ಳೋಣ. ರಾಜಕೀಯದಲ್ಲಿ ಎಲ್ಲರೂ ಶ್ರೀರಾಮಚಂದ್ರನ ರೀತಿಯಲ್ಲಿ ಇರಲು ಸಾಧ್ಯವಿಲ್ಲ"ಎಂದು ರಮೇಶ್ ಕುಮಾರ್ ಹೇಳಿದ್ದಾರೆ.

   ಕಳೆದ ಅಸೆಂಬ್ಲಿ ಚುನಾವಣೆಯ ಪ್ರಚಾರದ ವೇಳೆ, ಇದೇ ನನ್ನ ಕೊನೆಯ ಇಲೆಕ್ಷನ್ ಎಂದು ರಮೇಶ್ ಕುಮಾರ್ ಹೇಳಿದ್ದರು. ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ರಮೇಶ್ ಕುಮಾರ್, ಜೆಡಿಎಸ್ಸಿನ ಜಿ.ಕೆ.ವೆಂಕಟಶಿವ ರೆಡ್ಡಿ ವಿರುದ್ದ 10,552 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

   ರಮೇಶ್ ಕುಮಾರ್ ಕೋಲಾರದಲ್ಲಿನ ತಮ್ಮ ತೋಟದಲ್ಲಿ ಕೆಲಸ ಮಾಡುವ ಮೂಲಕ ಲಾಕ್ ಡೌನ್ ಕಾಲ ಕಳೆಯುತ್ತಿದ್ದಾರೆ. ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದಲ್ಲಿರುವ ತಮ್ಮ ಮಾವಿನ ತೋಟದಲ್ಲಿ ಸಸಿಗಳಿಗೆ ನೀರು ಹಾಯಿಸಲು ವ್ಯವಸ್ಥೆ ನಡೆಸುತ್ತಿದ್ದಾರೆ. ಇದಕ್ಕೆ ತಾವೇ ಹೆಗಲ ಮೇಲೆ ಪೈಪ್ ಗಳನ್ನು ಹೊತ್ತುಕೊಂಡು ಸಾಗಿದ್ದಾರೆ.

   English summary
   Retirement From Active Politics: Congress MLA Ramesh Kumar Clarification,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X