ಕೋಲಾರ: ಸ್ವರ್ಣ ರೈಲು ತಡೆದು ಪ್ರತಿಭಟನೆ, ಲಘು ಲಾಠಿ ಪ್ರಹಾರ

Posted By:
Subscribe to Oneindia Kannada

ಕೋಲಾರ, ಅಕ್ಟೋಬರ್ 19 : ಮಾರಿಕುಪ್ಪಂ-ಬೆಂಗಳೂರು ಸ್ವರ್ಣ ರೈಲಿನ ಬೋಗಿಗಳನ್ನು ಕಡಿಮೆ ಮಾಡಿರುವುದನ್ನು ವಿರೋಧಿಸಿ ಕೆಜಿಎಫ್ ನಗರದ ಮಾರಿಕುಪ್ಪಂ ರೈಲು ನಿಲ್ದಾಣದಲ್ಲಿ ಜನರು ರೈಲು ತಡೆದು ಪ್ರತಿಭಟನೆ ನಡೆಸಿದರು.

ಪ್ರತಿನಿತ್ಯ ಬಂಗಾರಪೇಟೆ ತಾಲ್ಲೂಕಿನ ಮಾರಿಕುಪ್ಪಂ-ಬೆಂಗಳೂರು ನಡುವೆ ಸಂಚರಿಸುವ ಸ್ವರ್ಣ ಎಕ್ಸ್‌ಪ್ರೆಸ್‌ ರೈಲಿನಲ್ಲಿ 18 ಬೋಗಿಗಳಿದ್ದವು. ಆದರೆ, ಇದ್ದಕ್ಕಿದ್ದಂತೆಯೇ ಈ ರೈಲಿನ ಬೋಗಿಗಳ ಸಂಖ್ಯೆಯನ್ನು 12ಕ್ಕೆ ಇಳಿಸಲಾಗಿದೆ. ಇದನ್ನು ಖಂಡಿಸಿ ಕೋಲಾರ ಜಿಲ್ಲೆಯ ಕೆಜಿಎಫ್ ಮಾರಿಕುಪ್ಪಂ ರೈಲ್ವೆ ನಿಲ್ದಾಣದಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ಪುತ್ರಿ ರೂಪ ಶಶಿಧರ್ ನೇತೃತ್ವದಲ್ಲಿ, ಹಲವು ದಲಿತ ಸಂಘಟನೆಗಳು ಸೇರಿದಂತೆ ನೂರಾರು ಜನರು ರೈಲು ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Several organaizations Protest in Kolar aginst Swarna train bogies reduction

ರೈಲಿನ ಬೋಗಿಗಳನ್ನು ಕಡಿಮೆ ಮಾಡಿರುವುದರಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವವರಿಗೆ ಬಹಳಷ್ಟು ತೊಂದರೆಯಾಗುತ್ತದೆ ಎಂದು ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿ ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು

ಪ್ರತಿಭಟನಾಕಾರರ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಪೊಲೀಸರು ಲಾಠಿ ಚಾರ್ಚ್ ನಡೆಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Several organaizations Protest in Kolar on Oct 19th, against Marikuppam-Bangalore Swarna train bogies reduction.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ