ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಂತಾಮಣಿಯಲ್ಲಿ ಬಿಜೆಪಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮ

|
Google Oneindia Kannada News

ಬೆಂಗಳೂರು, ನ. 30: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಹಾಗೂ ಕೃಷಿಕರ ಬದುಕು ಹಸನು ಮಾಡುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಕಳೆದ ಒಂದೂವರೆ ವರ್ಷದಲ್ಲಿ ಅನೇಕ ಸುಧಾರಣೆಗಳನ್ನು ಕೈಗೊಂಡಿದೆ ಎಂದು ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ಹೇಳಿದ್ದಾರೆ.

ಚಿಂತಾಮಣಿಯಲ್ಲಿ ಭಾನುವಾರ ಬಿಜೆಪಿ ವತಿಯಿಂದ ಏರ್ಪಡಿಸಲಾಗಿದ್ದ ಗ್ರಾಮ ಸ್ವರಾಜ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಕಾಯ್ದೆ ಉತ್ತಮ ರೀತಿಯಲ್ಲಿ ತಿದ್ದುಪಡಿ ತರಲಾಗಿದ್ದು, ರೈತರು ತಾವು ಬೆಳೆದ ಉತ್ಪನ್ನಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಯಾರಿಗೆ ಬೇಕಾದರೂ ಮಾರಿಕೊಳ್ಳಬಹುದು. ಇದರಿಂದ ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ರೈತರ ಬೆಳೆಗೆ ಉತ್ತಮ ಬೆಲೆ ಸಿಗುತ್ತದಲ್ಲದೆ, ಅವರ ಜೀವನವೂ ಉತ್ತಮವಾಗುತ್ತದೆ ಎಂದರು.

ಮುಖ್ಯವಾಗಿ ಚಿಕ್ಕಬಳ್ಳಾಪುರ ಜಿಲ್ಲೆ ತೋಟಗಾರಿಕೆ, ಹೈನುಗಾರಿಕೆ, ತರಕಾರಿ ಬೆಳೆಗಳಿಗೆ ಹೆಸರುವಾಸಿಯಾಗಿದೆ. ಆದರೆ, ಅನೇಕ ವರ್ಷಗಳಿಂದ ನ್ಯಾಯಯುತ ಬೆಲೆ ಸಿಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಂತಹ ದುರ್ಬರ ದಿನಗಳು ಇನ್ನಿರಲಾರವು. ಮುಂದೆ ರೈತರಿಗೆ ಎಲ್ಲವೂ ಒಳ್ಳೆಯದೇ ಆಗುತ್ತದೆ.

State Government Made Many Improvements To Rural Development: Dr Ashwath Narayana

ಗ್ರಾಮ ಪಂಚಾಯತಿಗಳು ನಮ್ಮ ಅಡಳಿತ ವ್ಯವಸ್ಥೆಯ ಅತ್ಯುತ್ತಮ ಭಾಗ. ಹೀಗಾಗಿ ಜನರಿಗೆ ಅತಿ ಹತ್ತಿರವಾಗಿರುವ ಪಂಚಾಯಿತಿಗಳಲ್ಲಿ ಅತ್ಯುತ್ತಮ ಪ್ರತಿನಿಧಿಗಳು ಬರಬೇಕು. ಭ್ರಷ್ಟಾಚಾರಕ್ಕೆ ಅವಕಾಶ ಇರಬಾರದು. ಸಮರ್ಪಣಾ ಮನೋಭಾವದಿಂದ ಜನಸೇವೆ ಮಾಡುವ ನಾಯಕರು ಆಯ್ಕೆಯಾಗಿ ಬರಬೇಕು. ಈ ನಿಟ್ಟಿನಲ್ಲಿ ಗ್ರಾಮೀಣ ಜನರಿಗೆ ಬಿಜೆಪಿಯೊಂದೇ ಉತ್ತಮ ಆಯ್ಕೆ ಎಂದು ಡಾ. ಅಶ್ವಥ್ ನಾರಾಯಣ್ ಅವರು ಹೇಳಿದರು.

State Government Made Many Improvements To Rural Development: Dr Ashwath Narayana

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್‌ ಕಟೀಲ್, ಕೋಲಾರ ಸಂಸದ ಮುನಿಸ್ವಾಮಿ, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭಾಗವಹಿಸಿದ್ದರು.

English summary
The state government has made many improvements in the last one and a half years to improve the rural development and livelihood of the farmers says DCM Dr. CN Ashwath Narayana in Gram swaraj program in Chintamani. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X