ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾನು ಸಚಿವನಾಗುವುದು ಪಕ್ಕಾ ಎಂದ ಎಂಟಿಬಿ

By ಕೋಲಾರ ಪ್ರತಿನಿಧಿ
|
Google Oneindia Kannada News

ಕೋಲಾರ, ಸೆಪ್ಟೆಂಬರ್ 4: ಸಿಎಂ ಯಡಿಯೂರಪ್ಪ ಅವರ ದೆಹಲಿ ಭೇಟಿ ನಂತರ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ನಡೆಯುತ್ತದೆ. ಆಗ ನಾನು ಸಚಿವನಾಗುವುದು ಪಕ್ಕಾ ಎಂದು ಹೇಳಿದ್ದಾರೆ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್.

Recommended Video

ಇದ್ದಕ್ಕಿದ್ದಂತೆ ಮತ್ತೆ ಆಸ್ಪತ್ರೆಗೆ ದಾಖಲಾದ DK ಶಿವಕುಮಾರ್ | Oneindia Kannada

ಕೋಲಾರದ ಮಾಲೂರಿನ ಚಿಕ್ಕತಿರುಪತಿಯಲ್ಲಿ ಖಾಸಗಿ ನರ್ಸಿಂಗ್ ಹೋಂ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಂಟಿಬಿ ನಾಗರಾಜ್ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, "ಮುಂದಿನ ವಾರ ಸಿಎಂ ಯಡಿಯೂರಪ್ಪ ಅವರು ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿ ಮಾಡಲಿದ್ದಾರೆ. ಅಲ್ಲಿಂದ ವಾಪಸ್ಸಾದ ಕೂಡಲೇ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ನಡೆಯುತ್ತದೆ. ವಿಧಾನ ಪರಿಷತ್ ಸದಸ್ಯರಿಗೆ ಸ್ಥಾನ ಕೊಡುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ" ಎಂದರು.

Kolar: Sure I will Become Minister Said MTB Nagaraj

 ವಿಶ್ವನಾಥ್, ಶಂಕರ್, ಎಂಟಿಬಿ ಸಚಿವರಾಗಲು ಕಾನೂನು ತೊಡಕು? ವಿಶ್ವನಾಥ್, ಶಂಕರ್, ಎಂಟಿಬಿ ಸಚಿವರಾಗಲು ಕಾನೂನು ತೊಡಕು?

ಡ್ರಗ್ಸ್, ಕ್ರಿಕೆಟ್ ಬೆಟ್ಟಿಂಗ್ ದಂಧೆಯಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎನ್ನುವ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಎಂಟಿಬಿ, ಮೈತ್ರಿ ಸರ್ಕಾರ ಇದ್ದಾಗ ಡ್ರಗ್ಸ್ ಅಕ್ರಮವನ್ನು ಏಕೆ ತಡೆಯಲಿಲ್ಲ ಎಂದು ಪ್ರಶ್ನಿಸಿದರು. ಕುಮಾರಸ್ವಾಮಿ ಆರೋಪ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಲೇವಡಿ ಮಾಡಿದರು. ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆಯೂ ಒತ್ತಾಯಿಸಿದರು.

English summary
I will sure become minister after Cabinet expansion said MTP Nagaraj in kolar,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X