ಕೋಲಾರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, 3 ಸಾವು

Posted By:
Subscribe to Oneindia Kannada

ಕೋಲಾರ, ಡಿಸೆಂಬರ್ 8: ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳ್ಳಂಬೆಳಗ್ಗೆ ಕೋಲಾರ ತಾಲೂಕಿನ ತಂಬಿಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಮಂಗಳೂರು : ಸಿಟಿ ಬಸ್- ಕಂಟೈನರ್ ಟ್ರಕ್ ನಡುವೆ ಅಪಘಾತ ಮಹಿಳೆ ಸಾವು, 17 ಮಂದಿಗೆ ಗಾಯ

ಮುಳಬಾಗಿಲಿನಿಂದ ಕೋಲಾರಕ್ಕೆ ತೆರಳುತ್ತಿದ್ದ ಮರಳು ತುಂಬಿದ್ದ ಟ್ರ್ಯಾಕ್ಟರ್ ನ ಹಿಂಬದಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮು ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನು ಪತ್ತೆಯಾಗಿಲ್ಲ.

Three people killed after a car hit a tractor near Tambihalli Geat Kollar

ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟ್ರ್ಯಾಕ್ಟರ್ ನ ಟ್ರಾಲಿಗೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Three people killed after a car hit a tractor near Tambihalli Geat national highway 75 Kollar taluk on December 8.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ