Maluru: ಮಾಲೂರಿನಲ್ಲಿ ಕೆ. ವೈ. ನಂಜೇಗೌಡ, ಜೆ.ಇ ರಾಮೇಗೌಡ, ಕೆಎಸ್ ಮಂಜುನಾಥಗೌಡ ನಡುವೆ ಭಾರೀ ಸ್ಪರ್ಧೆ!
ಕೋಲಾರ, ಏಪ್ರಿಲ್. 30: ರಾಜಧಾನಿಯ ಪಕ್ಕದಲ್ಲಿರುವ ಕೋಲಾರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಪೈಕಿ ಮಾಲೂರು ವಿಧಾನಸಭಾ ಕ್ಷೇತ್ರವು ಒಂದು. ಕೋಲಾರ ಸಿದ್ದರಾಮಯ್ಯ ಅವರ ಸ್ಪರ್ಧೆಯಿಂದ ಗಮನಸೆಳೆದಿತ್ತು. ಹಾಗೆಯೇ ಮಾಲೂರು ಕೂಡ ಪಕ್ಷಾಂತರದಿಂದಾಗಿ ಈ ಬಾರಿ ಸುದ್ದಿಯಲ್ಲಿದೆ. ಜೊತೆಗೆ ಇದೇ ಕಾರಣಕ್ಕೆ ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಮಾಲೂರಿನ ಮೇಲೆ ಈ ಬಾರಿ ಜೆಡಿಎಸ್ ಮತ್ತು ಬಿಜೆಪಿ ಎರಡು ಕಣ್ಣು ಹಾಕಿವೆ. ಜೊಎತೆಗ ಪ್ರಚಾರವನ್ನು ತೀವ್ರಗೊಳಿಸಿವೆ. 2018 ರಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ಯ ಕೆ ವೈ ನಂಜೇಗೌಡ ಮಾಲೂರಿನಿಂದ ಗೆಲುವು ಸಾಧಿಸಿದ್ದರು. ಈ ಬಾರಿಯೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ್ತೆ ಕಣಕ್ಕಿಳಿದಿದ್ದಾರೆ. ಜನತಾ ದಳ (ಜಾತ್ಯತೀತ)ಯ ಕೆ. ಎಸ್. ಮಂಜುನಾಥ್ ಗೌಡ 17915, ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು.

ಮಾಲೂರಿನಲ್ಲಿ ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಸೆಡ್ಡು ಹೊಡೆದು ಮಾಲೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಹೂಡಿ ವಿಜಯ್ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಕೆಆರ್ ಎಸ್ ಪಕ್ಷದ ಅಭ್ಯರ್ಥಿಯಾಗಿ ಎ.ವಿ.ಮಹೇಶ್ ಕುಡ ನಾಮಪತ್ರ ಸಲ್ಲಿಸಿದ್ದಾರೆ. ಆದರೆಮ ಪೈಪೋಟಿಯಿರುವುದು ಮಾತ್ರ ಜೆಡಿಎಸ್ ಅಭ್ಯರ್ಥಿ ಜೆ.ಇ.ರಾಮೇಗೌಡ, ಬಿಜೆಪಿಯ ಕೆ. ಎಸ್. ಮಂಜುನಾಥ ಗೌಡ ಮತ್ತು ಕಾಂಗ್ರೆಸ್‌ನ ಹಾಲಿ ಶಾಸಕ ಕೆ. ವೈ. ನಂಜೇಗೌಡ ನಡುವೆ.
*ಕಾಂಗ್ರೆಸ್ ಅಬ್ಯರ್ಥಿ ಕೆ ವೈ ನಂಜೇಗೌಡ*: ಮಾಲೂರಿನಲ್ಲಿ ಎರಡನೇ ಬಾರಿಗೆ ಕಾಂಗ್ರೆಸ್ ಪಕ್ಷ ಹಾಲಿ ಶಾಸಕ ನಂಜೇಗೌಡಾಗೆ ಟಿಕೆಟ್ ನೀಡಿದೆ. ಈ ಬಾರಿ ಕಾಂಗ್ರೆಸ್ ಗೆದ್ದು ಇತಿಹಾಸ ನಿರ್ಮಿಸುತ್ತದೆ ಎಂಬ ವಿಶ್ವಾಸದಲ್ಲಿದ್ದಾರೆ ಶಾಸಕ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕೆ. ವೈ. ನಂಜೇಗೌಡ ಬರೋಬ್ಬರಿ 75,677 ಮತಗಳನ್ನು ಪಡೆದು, 17915, ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ತಾವು ಮಾಡಿರುವ ಅಭಿವೃದ್ಧಿ ಕೆಲಸಗಳು ತಮ್ಮನ್ನು ಕೈ ಹಿಡಿಯುತ್ತವೆ. ಕೇಂದ್ರ ಸರ್ಕಾರದಿಂದ ಇಲ್ಲಿನ ಸಂಸದರು ಅನುದಾನ ತರದಿದ್ದರೂ ನಾನು ಕೆಲಸ ಮಾಡಿದ್ದೇನೆ, ಹೀಗಾಗಿ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ. ಇತಿಹಾಸದಲ್ಲಿ ಎರಡನೇ ಬಾರಿಗೆ ಮಾಲೂರಿನಲ್ಲಿ ಕಾಂಗ್ರೆಸ್ ಬಂದಿಲ್ಲ. ಆದರೆ ಈ ಬಾರಿ ಸತತ 2ನೇ ಬಾರಿ ಗೆಲ್ಲುವ ಮೂಲಕ ಕಾಂಗ್ರೆಸ್ ಇತಿಹಾಸ ಸೃಷ್ಟಿಸುತ್ತೆ ಎಂದು ಭರವಸೆ ಇಟ್ಟುಕೊಂಡಿದ್ದಾರೆ.
*ಕೆ. ಎಸ್. ಮಂಜುನಾಥ ಗೌಡ*: ಜೆಡಿಎಸ್‌ನಿಂದ ಗೆದ್ದು ಶಾಸಕರಾಗಿದ್ದ ಕೆ. ಎಸ್. ಮಂಜುನಾಥ ಗೌಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 2013ರ ಚುಣಾವಣೆಯಲ್ಲಿ 57,645 ಮತಗಳನ್ನು ಗಳಿಸಿದ್ದ ಇವರು 2018ರ ಚುನಾವಣೆಯಲ್ಲಿಯೂ ಹೆಚ್ಚು ಕಡಿಮೆ ಅದೇ ಮತಗಳನ್ನು ಅಂದರೆ 57,762 ಮತಗಳನ್ನು ಪಡೆದಿದ್ದಾರೆ. ಕೆ. ಎಸ್. ಮಂಜುನಾಥ ಗೌಡ 2019ರ ಚುನಾವಣೆಯ ಸಮಯದಲ್ಲೇ ಜೆಡಿಎಸ್ ಪಕ್ಷದ ನಾಯಕರ ಜೊತೆ ಮುನಿಸಿಕೊಂಡಿದ್ದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಮುನಿಸ್ವಾಮಿ ಪರವಾಗಿ ಕೆಲಸ ಮಾಡಿದ್ದರು. ಈಗ ಬೆಂಬಲಿಗ ಜೊತೆಗೆ ಮನೆ ಮನೆ ಪ್ರಚಾರ ನಡೆಸುತ್ತಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಟಕ್ಕರ್ ಕೊಡುವ ಪ್ರಯ್ನದಲ್ಲಿದ್ದಾರೆ.

*ಜೆಡಿಎಸ್ ಅಭ್ಯರ್ಥಿ ಜೆ.ಇ.ರಾಮೇಗೌಡ *: ಒಮ್ಮೆ ಮಾಲೂರಿನಲ್ಲಿ ಅಧಿಕಾರದ ರುಚಿ ಕಂಡಿರುವ ಜೆಡಿಎಸ್ ಈ ಬಾರಿ ಜೆ.ಇ.ರಾಮೇಗೌಡ ಅವರನ್ನು ಕಣಕ್ಕಿಳಿಸಿದೆ. ಮಾಜಿ ಶಾಸಕರಾಗಿದ್ದ ಕೆ. ಎಸ್. ಮಂಜುನಾಥ ಗೌಡ ಆಗಲೇ ಬಿಜೆಪಿ ಕಡೆ ಒಲವು ತೋರಿಸುವುದನ್ನು ಕಂಡಿದ್ದ ಜೆಡಿಎಸ್, ಜಿ. ಇ. ರಾಮೇಗೌಡರಿಗೆ ಆದ್ಯತೆ ನೀಡಿತ್ತು. ಇದರ ಜೊತೆಗೆ 2023ಕ್ಕೆ ಅವರೇ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು. ಅಂದಿನಿಂದ ಜೆ.ಇ.ರಾಮೇಗೌಡ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದಾರೆ.

2018ರ ಚುನಾವಣೆಯಲ್ಲಿಯೂ ಜೆಡಿಎಸ್ 57,762 ಮತಗಳನ್ನು ಪಡೆದು 2ನೇ ಸ್ಥಾನದಲ್ಲಿದೆ. 2013ರ ಚುಣಾವಣೆಯಲ್ಲಿಯೂ ಉತ್ತಮ ಮತಗಳನ್ನು ಪಡೆದಿದೆ. ಅಂದರೆ ಇಲ್ಲಿ ಜೆಡಿಎಸ್‌ಗೆ ಗೆಲ್ಲುವ ಚಾನ್ಸ್ ಇದೆ. ಇದೇ ಕಾರಣಕ್ಕೆ ತಮ್ಮ ಸಾಂಪ್ರದಾಯಿಕ ಮತಗಳನ್ನು ಕಳೆದುಕೊಳ್ಳದೇ ಅವುಗಳನ್ನು ಉಳಿಸಿಕೊಳ್ಳುವ ಪ್ರಯ್ನದಲ್ಲಿದೆ ಪ್ರಾದೇಶಿಕ ಪಕ್ಷ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications