ಪಂಚಾಯಿತಿ ಚುನಾವಣೆ; ಪ್ರಭಾವ ತೋರಿಸಿದ ವರ್ತೂರು ಪ್ರಕಾಶ್

ಕೋಲಾರ, ಡಿಸೆಂಬರ್ 17: ಅಪಹರಣ ಪ್ರಕರಣದ ಮೂಲಕ ರಾಜ್ಯಾದ್ಯಂತ ಸುದ್ದಿಯಾಗಿದ್ದರು ಮಾಜಿ ಸಚಿವ ವರ್ತೂರು ಪ್ರಕಾಶ್. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅವರು ತಮ್ಮ ಪ್ರಭಾವ ತೋರಿಸಿದ್ದಾರೆ. ವರ್ತೂರು ಬಣದ 15 ಸದಸ್ಯರು ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

"ಕೋಲಾರ ತಾಲೂಕಿನ 10 ಗ್ರಾಮ ಪಂಚಾಯಿತಿಗಳಲ್ಲಿ ನಮ್ಮ ಬಣದ 15 ಮಂದಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ತಮ್ಮ ಬೆಂಬಲಿಗರಾದ 343 ಅಭ್ಯರ್ಥಿಗಳು ಕಣದಲ್ಲಿದ್ದಾರೆ" ಎಂದು ವರ್ತೂರು ಪ್ರಕಾಶ್ ಹೇಳಿದ್ದಾರೆ.

"ಡಿಸೆಂಬರ್ 22ರಂದು ನಡೆಯುವ ಚುನಾವಣೆಯಲ್ಲಿ 23 ಗ್ರಾಮಗಳಲ್ಲಿ 19 ಗ್ರಾಮ ಪಂಚಾಯಿತಿಗಳಲ್ಲಿ ಚುನಾವಣೆ ನಡೆಯಲಿದೆ. ವೇಮಗಲ್, ಶೆಟ್ಟಳ್ಳಿ, ಕುರುಗಲ್, ಚೌಡದೇನಹಳ್ಳಿ ಪಟ್ಟಣ ಪಂಚಾಯಿತಿಯಾಗಿದೆ" ಎಂದು ವರ್ತೂರು ಪ್ರಕಾಶ ತಿಳಿಸಿದ್ದಾರೆ.

"ತಾಲೂಕಿನ ಜನತೆಯ ನಂಬಿಕೆ, ವಿಶ್ವಾಸದಿಂದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೇ ಅಭ್ಯರ್ಥಿಗಳ ಆಯ್ಕೆಯನ್ನು ಮಾಡಿ ಪಂಚಾಯಿತಿ ಚುನಾವಣೆಯಲ್ಲಿ ನಿಲ್ಲಿಸಿದ್ದಾರೆ. 19 ಗ್ರಾಮ ಪಂಚಾಯಿತಿಗಳಲ್ಲಿ ಸಹ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳಿಗಿಂತಲೂ ವರ್ತೂರ್ ಪ್ರಕಾಶ್ ಬಣ ಬಲಿಷ್ಠವಾಗಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕರ್ತರಲ್ಲಿ ಹುರುಪು

ಕಾರ್ಯಕರ್ತರಲ್ಲಿ ಹುರುಪು

"ನಮ್ಮ ಕಾರ್ಯಕರ್ತರಲ್ಲಿ ಹುರುಪು ಹೆಚ್ಚಾಗಿದೆ. ಮುಂಬರುವ ಚುನಾವಣೆಗಳಲ್ಲಿ ನಾವು ಹೆಚ್ಚು ಬಲಗೊಳ್ಳಬೇಕು. ಅದಕ್ಕಾಗಿ ಗ್ರಾಮ ಪಂಚಾಯಿತಿ ಚುನಾವಣೆಯೇ ವೇದಿಕೆಯಾಗಿದೆ" ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದರು.

ಟೀಕೆ ಮಾಡುವುದು ಇಷ್ಟವಿಲ್ಲ

ಟೀಕೆ ಮಾಡುವುದು ಇಷ್ಟವಿಲ್ಲ

"ಬೇರೆ ಪಕ್ಷಗಳ ಬಗ್ಗೆ ಟೀಕೆ ಮಾಡುವುದು ನನಗೆ ಇಷ್ಟವಾಗುವುದಿಲ್ಲ. ಅಭಿವೃದ್ಧಿ ವಿಚಾರ, ದೌರ್ಜನ್ಯ, ದಬ್ಬಾಳಿಕೆಗಳ ಬಗ್ಗೆ ನಾನು ಚಕಾರವೆತ್ತುವುದಿಲ್ಲ" ಎಂದು ವರ್ತೂರು ಪ್ರಕಾಶ್ ತಿಳಿಸಿದರು.

156 ಗ್ರಾಮ ಪಂಚಾಯಿತಿಗಳು

156 ಗ್ರಾಮ ಪಂಚಾಯಿತಿಗಳು

ಕೋಲಾರ ಜಿಲ್ಲೆಯಲ್ಲಿ 156 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ. ಜಿಲ್ಲೆಯಲ್ಲಿ 2 ಹಂತಗಳಲ್ಲಿ ಚುನಾವಣೆಯನ್ನು ನಡೆಸಲಾಗುತ್ತದೆ. 4,41,885 ಪುರುಷ, 4,36,851 ಮಹಿಳಾ ಮತದಾರರು ಮತ್ತು 52 ಇತರೆ ಮತದಾರರು ಸೇರಿದಂತೆ ಒಟ್ಟು 8,78,788 ಜನರು ಮತದಾನ ಮಾಡುವ ಹಕ್ಕನ್ನು ಹೊಂದಿದ್ದಾರೆ.

ಎರಡು ಹಂತದಲ್ಲಿ ಚುನಾವಣೆ

ಎರಡು ಹಂತದಲ್ಲಿ ಚುನಾವಣೆ

ಕೋಲಾರ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಕೋಲಾರ, ಮಾಲೂರು, ಶ್ರೀನಿವಾಸಪುರ ತಾಲೂಕಿನಲ್ಲಿ ಡಿಸೆಂಬರ್ 22ರಂದು ಚುನಾವಣೆ ನಡೆಯಲಿದೆ. ಎರಡನೇ ಹಂತದಲ್ಲಿ ಮುಳಬಾಗಿಲು, ಬಂಗಾರಪೇಟೆ, ಕೆ.ಜಿ.ಎಫ್ ತಾಲೂಕುಗಳಲ್ಲಿ ಡಿಸೆಂಬರ್ 27 ರಂದು ಚುನಾವಣೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+